ETV Bharat / state

ನಿರ್ದಿಷ್ಟ ಧರ್ಮ, ಸಮುದಾಯದ ವಿರುದ್ಧವಿಲ್ಲ, ನಮ್ಮದು ಸಂವಿಧಾನ ಪರವಾದ ನಿಲುವು: ಮಂಡ್ಯ ಘಟನೆ ಬಗ್ಗೆ ಸಿಎಂ ಪೋಸ್ಟ್ - ಧ್ವಜಸ್ತಂಭ ವಿವಾದ

ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದ ಧ್ವಜಸ್ತಂಭವನ್ನು ಕರ್ನಾಟಕದ ಧ್ವಜ ಮತ್ತು ತ್ರಿವರ್ಣ ಧ್ವಜ ಹಾರಿಸುವ ಉದ್ದೇಶಕ್ಕೆ ಮಾತ್ರ ಬಳಕೆ ಮಾಡುತ್ತೇವೆ. ಜೊತೆಗೆ ಗ್ರಾಮ ಪಂಚಾಯತಿಯ ಷರತ್ತುಗಳಿಗೆ ಬದ್ಧರಾಗಿರುವುದಾಗಿ ಮುಚ್ಚಳಿಕೆ ಪತ್ರವನ್ನು ನೀಡಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

cm-siddaramaiah
ಮುಖ್ಯಮಂತ್ರಿ ಸಿದ್ದರಾಮಯ್ಯ
author img

By ETV Bharat Karnataka Team

Published : Jan 28, 2024, 10:02 PM IST

ಬೆಂಗಳೂರು: ನಾವು ಯಾವುದೇ ನಿರ್ದಿಷ್ಟ ಜಾತಿ, ಧರ್ಮ, ಸಮುದಾಯದ ವಿರುದ್ಧವಿಲ್ಲ, ನಮ್ಮದು ಸಂವಿಧಾನ ಪರವಾದ ನಿಲುವು. ಜ್ಞಾನವಂತ ಕನ್ನಡಿಗರು ಶಾಂತಿ, ಸಂಯಮದ ಮೂಲಕ ಕೋಮುವಾದಿಗಳ ಷಡ್ಯಂತ್ರವನ್ನು ವಿಫಲಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಡ್ಯದ ಕೆರಗೋಡು ಗ್ರಾಮದಲ್ಲಿ ನಡೆದ ಘಟನೆ ಸಂಬಂಧ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದ ಗೌರಿಶಂಕರ ಸೇವಾ ಟ್ರಸ್ಟ್​ನವರು ಕೆರಗೋಡು ರಂಗಮಂದಿರದ ಆವರಣದಲ್ಲಿ ಧ್ವಜಸ್ತಂಭ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಬೇಕು. ಆ ಧ್ವಜಸ್ತಂಭವನ್ನು ಕರ್ನಾಟಕದ ಧ್ವಜ ಮತ್ತು ತ್ರಿವರ್ಣ ಧ್ವಜ ಹಾರಿಸುವ ಉದ್ದೇಶಕ್ಕೆ ಮಾತ್ರ ಬಳಕೆ ಮಾಡುತ್ತೇವೆ. ಜೊತೆಗೆ ಗ್ರಾಮ ಪಂಚಾಯತಿಯ ಷರತ್ತುಗಳಿಗೆ ಬದ್ಧರಾಗಿರುವುದಾಗಿ ಮುಚ್ಚಳಿಕೆ ಪತ್ರವನ್ನು ನೀಡಿದ್ದರು ಎಂದು ಸಿಎಂ ಸಾಮಾಜಿಕ ಜಾಲತಾಣದ 'ಎಕ್ಸ್'ನಲ್ಲಿ ಪೋಸ್ಟ್​ ಮಾಡಿದ್ದಾರೆ.

ಅವರ ಮನವಿಯ ಮೇರೆಗೆ ಗ್ರಾಮ ಪಂಚಾಯತಿಯವರು ಧ್ವಜಸ್ತಂಭ ನಿರ್ಮಾಣಕ್ಕೆ ಅವಕಾಶ ನೀಡಿದ್ದಾರೆ. ಆ ನಂತರ ಅಲ್ಲಿ ಹಾರಿಸಲಾಗಿದ್ದ ರಾಷ್ಟ್ರಧ್ವಜವನ್ನು ಕೆಳಗಿಳಿಸಿ ಆ ಜಾಗದಲ್ಲಿ ಹನುಮಧ್ವಜವನ್ನು ಹಾರಿಸಿದ್ದಾರೆ. ನಿಯಮ ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಧ್ವಜ ಇಳಿಸುವಂತೆ ಜನರಿಗೆ ತಿಳಿ ಹೇಳಿದ್ದಾರೆ. ಆದರೆ, ಸ್ಥಳೀಯರು ಪೊಲೀಸರ ಹಾಗೂ ಜಿಲ್ಲಾಡಳಿತದ ಮನವಿಯನ್ನು ತಿರಸ್ಕರಿಸಿ, ಪ್ರತಿಭಟನೆ, ಸಂಘರ್ಷಕ್ಕೆ ಇಳಿಯುವ ಮೂಲಕ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುವಂತೆ ಮಾಡಿದ್ದಾರೆ ಎಂದು ಸಿಎಂ ಹೇಳಿದ್ದಾರೆ.

ರಾಷ್ಟ್ರಧ್ವಜ ಹಾರಬೇಕಿದ್ದ ಜಾಗದಲ್ಲಿ ಹನುಮಧ್ವಜ ಹಾರಿಸಿರುವುದು, ಉದ್ದೇಶಪೂರ್ವಕವಾಗಿ ನಿಯಮ ಉಲ್ಲಂಘಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದು ಈ ಯಾವುವೂ ಆಕಸ್ಮಿಕ ಅಲ್ಲ. ಈ ಘಟನೆ ಬಿಜೆಪಿ ಹಾಗೂ ಸಂಘ ಪರಿವಾರದ ಪೂರ್ವ ನಿಯೋಜಿತ ಕೃತ್ಯ. ರಾಜ್ಯ ಸರ್ಕಾರದ ವಿರುದ್ಧ ವ್ಯವಸ್ಥಿತವಾಗಿ ಜನರನ್ನು ಎತ್ತಿಕಟ್ಟುವ ಉದ್ದೇಶದಿಂದಲೇ ಇಂತಹದ್ದೊಂದು ಸ್ಥಿತಿ ನಿರ್ಮಾಣ ಮಾಡಲಾಗಿದೆ. ಮಂಡ್ಯದಲ್ಲಿ ಕೋಮುಗಲಭೆ ಎಬ್ಬಿಸುವ ಸಂಚು ರೂಪಿಸಿರುವುದು ಬಿಜೆಪಿ ನಾಯಕರು ಲೋಕಸಭಾ ಚುನಾವಣೆಗೆ ನಡೆಸಿರುವ ತಯಾರಿಯಾಗಿದೆ ಎಂಬುದರಲ್ಲಿ ಅನುಮಾನವೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ದೂರಿದ್ದಾರೆ.

  • ರಾಷ್ಟ್ರಧ್ವಜ ಹಾರಬೇಕಿದ್ದ ಜಾಗದಲ್ಲಿ ಹನುಮಧ್ವಜ ಹಾರಿಸಿರುವುದು, ಉದ್ದೇಶಪೂರ್ವಕವಾಗಿ ನಿಯಮ ಉಲ್ಲಂಘಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದು ಈ ಯಾವುವೂ ಆಕಸ್ಮಿಕ ಅಲ್ಲ. ಈ ಘಟನೆ ಬಿಜೆಪಿ ಹಾಗೂ ಸಂಘ ಪರಿವಾರದ ಪೂರ್ವ ನಿಯೋಜಿತ ಕೃತ್ಯ. ರಾಜ್ಯ ಸರ್ಕಾರದ ವಿರುದ್ಧ ವ್ಯವಸ್ಥಿತವಾಗಿ ಜನರನ್ನು ಎತ್ತಿಕಟ್ಟುವ ಉದ್ದೇಶದಿಂದಲೇ… pic.twitter.com/t5zBg8jfOD

    — CM of Karnataka (@CMofKarnataka) January 28, 2024 " class="align-text-top noRightClick twitterSection" data=" ">

ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಬಿಜೆಪಿ ನಾಯಕರ ಮಾತುಗಳಿಗೆ ಮರುಳಾಗಿ, ಕಾನೂನು ಕೈಗೆತ್ತಿಕೊಳ್ಳುವ ತಪ್ಪನ್ನು ಜನತೆ ಮಾಡಬಾರದು. ಸಂವಿಧಾನ, ಕಾನೂನಿಗೆ ಗೌರವ ಕೊಡಬೇಕಿರುವುದು ನಮ್ಮೆಲ್ಲರ ಕರ್ತವ್ಯ. ಚುನಾವಣೆ ಇನ್ನಷ್ಟು ಸಮೀಪಿಸುತ್ತಿದ್ದಂತೆ ಬಿಜೆಪಿ ಗಲಭೆ ಸೃಷ್ಟಿಸುವ, ಶಾಂತಿಗೆ ಭಂಗ ತರುವ ಪ್ರಯತ್ನವನ್ನು ಖಂಡಿತ ಮಾಡಲಿದೆ. ಪ್ರಜ್ಞಾವಂತ ಕನ್ನಡಿಗರು ಶಾಂತಿ, ಸಂಯಮದ ಮೂಲಕ ಕೋಮುವಾದಿಗಳ ಷಡ್ಯಂತ್ರವನ್ನು ವಿಫಲಗೊಳಿಸಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಶಾಸಕರನ್ನು ಕರೆದಿಲ್ಲ ಎನ್ನುವ ಕಾರಣಕ್ಕೆ ಕೆರಗೋಡು ಯುವಕರ ಮೇಲೆ ಲಾಠಿಚಾರ್ಜ್: ಹೆಚ್​ಡಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.