ETV Bharat / state

ರಾಜ್ಯದ ರೈತರನ್ನು ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಖಂಡನೀಯ: ಸಿಎಂ ಸಿದ್ದರಾಮಯ್ಯ

ಬಂಧಿಸಲಾಗಿರುವ ರಾಜ್ಯದ ರೈತರನ್ನು ಬಿಡುಗಡೆಗೊಳಿಸಿ, ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಲು ಕಳುಹಿಸಿಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಮಧ್ಯಪ್ರದೇಶ ಸರ್ಕಾರವನ್ನು ಒತ್ತಾಯಿಸಿದ್ದಾರೆ.

CM Siddaramaiah
ಸಿಎಂ ಸಿದ್ದರಾಮಯ್ಯ
author img

By ETV Bharat Karnataka Team

Published : Feb 12, 2024, 3:07 PM IST

Updated : Feb 12, 2024, 3:37 PM IST

ಬೆಂಗಳೂರು: ದೆಹಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್​ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್​ ನಲ್ಲಿ ಪೋಸ್ಟ್ ಮಾಡಿರುವ ಅವರು, "ಬಂಧಿಸಲಾಗಿರುವ ರಾಜ್ಯದ ನಮ್ಮ ಎಲ್ಲ ರೈತರನ್ನು ತಕ್ಷಣ ಬಿಡುಗಡೆಗೊಳಿಸಿ ನಾಳೆ ದೆಹಲಿಯ ಜಂತರ್ ಮಂತರ್​ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಿಕೊಳ್ಳಲು ಕಳಿಸಿಕೊಡಬೇಕು ಎಂದು‌ ಮಧ್ಯಪ್ರದೇಶ ಸರ್ಕಾರವನ್ನು ಒತ್ತಾಯಿಸುತ್ತಿದ್ದೇನೆ. ಬಂಧಿಸಿರುವುದು ಮಧ್ಯಪ್ರದೇಶದ ಸರ್ಕಾರವಾದರೂ ಈ ದುಷ್ಕೃತ್ಯದ ಹಿಂದಿನ ಕ್ರಿಮಿನಲ್ ಮೆದುಳು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಎನ್ನುವುದು ಸ್ಪಷ್ಟ" ಎಂದು ಆರೋಪಿಸಿದ್ದಾರೆ.

"ಈ ರೀತಿ ಬಂಧಿಸಿ, ಬೆದರಿಸಿ ರೈತರ ಹೋರಾಟವನ್ನು ಹತ್ತಿಕ್ಕಲಾಗದು. ಇಂತಹ ದಬ್ಬಾಳಿಕೆಯಿಂದ ಇನ್ನಷ್ಟು ರೈತರು ಬೀದಿಗಿಳಿಯಬಹುದೇ ಹೊರತು ಮಣ್ಣಿನ ಮಕ್ಕಳ ಹೋರಾಟ ನಿಲ್ಲದು. ಶಾಂತಿ-ಸುವ್ಯವಸ್ಥೆಯ‌ ಕಾಳಜಿಯನ್ನು ಕೇಂದ್ರ ಸರ್ಕಾರ ಹೊಂದಿದ್ದರೆ ತಕ್ಷಣ ರೈತರ ಬೇಡಿಕೆಗಳನ್ನು ಈಡೇರಿಸಿ ಸಮಸ್ಯೆ ಬಗೆಹರಿಸಬೇಕೇ ಹೊರತು, ಈ ರೀತಿ ದಮನ-ದೌರ್ಜನ್ಯ ನಡೆಸಿ ರೈತರ ಬಾಯಿ ಮುಚ್ಚಿಸುವುದಲ್ಲ" ಎಂದು ಕಿಡಿಕಾರಿದ್ದಾರೆ.

"ಕೇಂದ್ರದಲ್ಲಿ ಇರಲಿ, ರಾಜ್ಯಗಳಲ್ಲಿ ಇರಲಿ‌ ಬಿಜೆಪಿ ಕೈಗೆ ಅಧಿಕಾರ ಬಂದ ಕೂಡಲೇ ಅವರು ಮೊದಲು ದಂಡ ಪ್ರಯೋಗ ಮಾಡುವುದು ಅನ್ನದಾತರ ಮೇಲೆ‌ ಎನ್ನುವುದಕ್ಕೆ ಇತಿಹಾಸ ಸಾಕ್ಷಿ. ಕರ್ನಾಟಕದಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಗೊಬ್ಬರ ಕೇಳಿದ್ದ ರೈತರನ್ನು ನಿರ್ದಯವಾಗಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಗುಂಡಿಕ್ಕಿ ಕೊಂದಿತ್ತು. ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರ ದೆಹಲಿ ಮತ್ತು ಉತ್ತರಪ್ರದೇಶಲ್ಲಿ ಪ್ರತಿಭಟನಾನಿರತ ರೈತರ ಮೇಲೆ ನಡೆಸಿದ್ದ ದೌರ್ಜನ್ಯದಲ್ಲಿ ಹಲವಾರು ರೈತರು ಸಾವಿಗೀಡಾಗಿದ್ದರು ಎಂದು ಆಕ್ರೋಶ ಹೊರ ಹಾಕಿದ್ದಾರೆ. ನರೇಂದ್ರ ಮೋದಿ ಅವರ ಸರ್ಕಾರದ ಈಗಿನ ಕ್ರಮಗಳನ್ನು ನೋಡಿದರೆ ರೈತರನ್ನು ಬೆದರಿಸಿ ತಲೆ ಎತ್ತದಂತೆ‌ ಮಾಡುವುದೇ ಮುಖ್ಯ ಉದ್ದೇಶವಿದ್ದಂತೆ ಕಾಣುತ್ತಿದೆ" ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋಗೆ ಹೊರಟಿದ್ದ ರಾಜ್ಯದ ನೂರಾರು ರೈತರನ್ನು ಭೋಪಾಲ್​ನಲ್ಲಿ ವಶಕ್ಕೆ ಪಡೆದ ಪೊಲೀಸರು

Last Updated : Feb 12, 2024, 3:37 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.