ETV Bharat / state

ಸ್ನೇಹಿತನನ್ನು ಕಳೆದುಕೊಂಡಿರುವುದು ಬಹಳ ದುಃಖ ತಂದಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ - MP Srinivas Prasad

ನಮ್ಮ ಅಭ್ಯರ್ಥಿಯನ್ನು ಬೆಂಬಲಿಸಿ ಎಂದು ಕೇಳಿದಾಗ ನಾನು ರಾಜಕೀಯದಿಂದ ನಿವೃತ್ತನಾಗಿದ್ದೇನೆ ಎಂದು ಶ್ರೀನಿವಾಸ್ ಪ್ರಸಾದ್​​​​ ಹೇಳಿದ್ದರು. ಅವರ ಸಾವಿನಿಂದ ಕರ್ನಾಟಕ ರಾಜಕಾರಣಕ್ಕೆ ನಷ್ಟವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

srinivas-prasad
ಸ್ನೇಹಿತನನ್ನು ಕಳೆದುಕೊಂಡಿರುವುದು ಬಹಳ ದುಃಖ ತಂದಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
author img

By ETV Bharat Karnataka Team

Published : Apr 29, 2024, 10:54 PM IST

ಮೈಸೂರು: ಒಬ್ಬ ಸ್ನೇಹಿತನನ್ನು ಕಳೆದುಕೊಂಡಿರುವುದು ಬಹಳ ದುಃಖ ತಂದಿದೆ. ಶ್ರೀನಿವಾಸ್​ ಪ್ರಸಾದ್ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಹಾಗೂ ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಂದು ನಿಧನರಾದ ಚಾಮರಾಜನಗರದ ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಪ್ರಾರ್ಥಿವ ಶರೀರಕ್ಕೆ ಮಾಲಾರ್ಪಣೆ ಮಾಡಿ, ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ ಸಿದ್ದರಾಮಯ್ಯ, ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. 15 ದಿನಗಳ ಹಿಂದೆ ಶ್ರೀನಿವಾಸ್​ ಪ್ರಸಾದ್​ ಅವರನ್ನು ಭೇಟಿಯಾಗಿದ್ದಾಗ ರಾಜಕೀಯದ ಬಗ್ಗೆ ಮಾತನಾಡಿದೆವು. ರಾಜಕೀಯದಲ್ಲಿ ಸಂತೋಷದ ಕ್ಷಣ ಬಹಳ ಕಡಿಮೆ. ಹೋರಾಟ ಮಾಡುವಾಗ ಸಂತೋಷದ ಕ್ಷಣಗಳು ಕಡಿಮೆ. ಬಹಳ ವರ್ಷಗಳ ನಂತರ ಭೇಟಿಯಾಗಿದ್ದ ಕಾರಣ ಸಂತೋಷವಾಗಿದೆ ಎಂದು ಅವರು ಹೇಳಿರಬಹುದು ಎಂದರು.

srinivas-prasad
ಶ್ರೀನಿವಾಸ್ ಪ್ರಸಾದ್

ಜೊತೆಯಲ್ಲಿಯೇ ರಾಜಕಾರಣ ಮಾಡಿದವರು, ಮಂತ್ರಿಮಂಡಲದಲ್ಲಿ ಸಚಿವರಾಗಿದ್ದರು. ಜನತಾ ಪಕ್ಷ ಹಾಗೂ ಕಾಂಗ್ರೆಸ್​​ನಲ್ಲಿ ಒಟ್ಟಿಗಿದ್ದವರನ್ನು ಕಳೆದುಕೊಂಡಾಗ ಬಹಳ ದುಃಖವಾಗುತ್ತದೆ. ಅವರ ನಿಧನಕ್ಕೆ ಗೌರವ ಸೂಚಕವಾಗಿ ಚಾಮರಾಜನಗರ ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಿದ್ದು, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಸಿಎಂ ತಿಳಿಸಿದರು.

ಅಸಮಾನತೆ ವಿರುದ್ಧ ಹೋರಾಟ: ಶ್ರೀನಿವಾಸ ಪ್ರಸಾದ್ ಅವರ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿ ಅವರ ಕುಟುಂಬ ವರ್ಗದವರೊಂದಿಗೆ ಮಾತನಾಡಿದ್ದೆ. ಆದರೆ, ಅಂಗಾಂಗ ವೈಫಲ್ಯದಿಂದಾಗಿ ಅವರ ನಿಧನವಾಗಿದೆ. ಕುಟುಂಬದವರಿಗೆ ಸಾಂತ್ವನ ಹೇಳಿದ್ದೇನೆ. 2013 ರಲ್ಲಿ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಯಾಗಿ ಹಲವು ವರ್ಷಗಳ ಕಾಲ ಆರೋಗ್ಯವಾಗಿದ್ದರು. ಪ್ರಸಾದ್ ಹಾಗೂ ನಾನು ಒಂದೇ ವಯೋಮಾನದವರು. ನೇರ ನುಡಿಯ ಶ್ರೀನಿವಾಸ್ ಪ್ರಸಾದ್ ಅವರು ಸಾಮಾಜಿಕ ಅಸಮಾನತೆಗಳ ವಿರುದ್ಧ ಹೋರಾಟ ನಡೆಸಿದವರು ಎಂದು ಹೇಳಿದರು.

ಡಾ. ಬಿ.ಆರ್.ಅಂಬೇಡ್ಕರ್ ಅವರ ಅನುಯಾಯಿಯಾಗಿದ್ದರು. ದಮನಿತರ ಧ್ವನಿಯಾಗಿ ಅಂಬೇಡ್ಕರ್ ಅವರ ತತ್ವಾದರ್ಶಗಳು ಹಾದಿಯಲ್ಲಿ ನಡೆದವರು. ಕೇಂದ್ರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ ಶ್ರೀನಿವಾಸ್ ಪ್ರಸಾದ್, 50 ವರ್ಷಗಳ ತಮ್ಮ ರಾಜಕೀಯ ಜೀವನದಲ್ಲಿ ಸೋಲು ಹಾಗೂ ಗೆಲುವನ್ನು ಕಂಡವರು. ಕಾರಣಾಂತರಗಳಿಂದ ಇತ್ತೀಚೆಗೆ ರಾಜಕೀಯ ಚಟುವಟಿಕೆಗಳಿಂದ ದೂರವಾಗಿದ್ದರು ಎಂದರು.

ಸ್ಮಾರಕ ನಿರ್ಮಾಣದ ಬಗ್ಗೆ ಚರ್ಚೆ: ಸಕ್ಕರೆ ಕಾಯಿಲೆ ಇರುವುದರಿಂದ ಕಾಲಿನ ಗಾಯ ವಾಸಿ ಮಾಡಿಕೊಳ್ಳಲು ಸಲಹೆ ನೀಡಿದ್ದೆ. ಗಾಯ ವಾಸಿಯಾಗದೆ ತೊಂದರೆಯಾಯಿತು ಎಂದರು. ಕುಟುಂಬಸ್ಥರು ಸ್ಮಾರಕ ನಿರ್ಮಾಣದ ಬಗ್ಗೆ ಮಾತನಾಡಿದರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಅಂತ್ಯಕ್ರಿಯೆ ಮುಗಿದ ನಂತರ ಚರ್ಚೆ ಮಾಡುವುದಾಗಿ ತಿಳಿಸಿರುವುದಾಗಿ ಹೇಳಿದರು.

ಇದನ್ನೂ ಓದಿ: ಶ್ರೀನಿವಾಸ್ ಪ್ರಸಾದ್‌ ಅಂತಿಮ ದರ್ಶನಕ್ಕೆ ವ್ಯವಸ್ಥೆ: ನಾಳೆ ಮೈಸೂರು, ಚಾ.ನಗರದಲ್ಲಿ ಸರ್ಕಾರಿ ರಜೆ ಘೋಷಣೆ - Srinivas Prasad

ETV Bharat Logo

Copyright © 2024 Ushodaya Enterprises Pvt. Ltd., All Rights Reserved.