ETV Bharat / state

ಸಂಚಾರಿ ಕುರಿಗಾಹಿಗಳ ಮೇಲಿನ ದೌರ್ಜನ್ಯ ತಡೆಗೆ ವಿಶೇಷ ಕಾಯ್ದೆ ಜಾರಿ: ಸಿಎಂ ಸಿದ್ದರಾಮಯ್ಯ - CM Siddaramaiah - CM SIDDARAMAIAH

ಸಿಎಂ ಸಿದ್ದರಾಮಯ್ಯ ಇಂದು ಸಂಚಾರಿ ಕುರಿಗಾಹಿ ಸಮುದಾಯಗಳ ಮುಖಂಡರೊಂದಿಗೆ ಸಭೆ ನಡೆಸಿದರು. ಕುರಿಗಾಹಿಗಳ ರಕ್ಷಣೆಗೆ ಸರ್ಕಾರ ಬದ್ಧ ಎಂದು ಭರವಸೆ ನೀಡಿದ್ದಾರೆ.

cm-siddaramaiah
ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Jun 25, 2024, 9:17 PM IST

ಸಿಎಂ ಸಿದ್ದರಾಮಯ್ಯ (ETV Bharat)

ಬೆಂಗಳೂರು: ವಲಸೆ ಕುರಿಗಾರರು ಮತ್ತು ಅವರ ಸ್ವತ್ತುಗಳ ಮೇಲಿನ ದೌರ್ಜನ್ಯ ತಡೆಯುವ ಕಾಯ್ದೆ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಸಂಜೆ ಸಂಚಾರಿ ಕುರಿಗಾಹಿ ಸಮುದಾಯಗಳ ಮುಖಂಡರ ಜೊತೆಗೆ ಅವರು ಸಭೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕುರಿಗಳ ಕಳ್ಳತನ ತಡೆಯಲು ಅಗತ್ಯವಿದ್ದವರಿಗೆ ಬಂದೂಕಿನ ಲೈಸೆನ್ಸ್ ಕೊಡಿಸಲು ಸೂಚಿಸಲಾಗುವುದು. ಕಳ್ಳತನ ಪ್ರಕರಣಗಳ ಕುರಿತು ಯಾವುದೇ ಠಾಣೆಗೆ ದೂರು ಬಂದ ಕೂಡಲೇ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು. ಸಂಚಾರಿ ಕುರಿಗಾಹಿಗಳಿಗೆ, ಕುರಿಗಳಿಗೆ ಅಗತ್ಯ ಭದ್ರತೆ ಒದಗಿಸಲು ಸೂಚಿಸಲಾಗುವುದು.

ಅನುಗ್ರಹ ಕಾರ್ಯಕ್ರಮದಲ್ಲಿ ಬಾಕಿ ಇರುವ ಪರಿಹಾರಗಳ ಬಗ್ಗೆ ವರದಿ ತರಿಸಿಕೊಂಡು ಕ್ರಮ ಕೈಗೊಳ್ಳಲಾಗುವುದು.‌ ಕುರಿಗಳ ಅಭಿವೃದ್ಧಿ, ಕುರಿಗಾಹಿಗಳ ಭದ್ರತೆ, ಕುರಿ ವ್ಯಾಪಾರಕ್ಕೆ ನೆರವು, ಮಾರುಕಟ್ಟೆ ವಿಸ್ತರಣೆಗೆ ನೆರವು ನೀಡುವುದರೊಂದಿಗೆ ಗೋಮಾಳಗಳನ್ನು ಯಾರಿಗೂ ಪರಭಾರೆ ಮಾಡದಂತೆ ರಕ್ಷಿಸಲು, ಒತ್ತುವರಿ ಮಾಡಿಕೊಂಡರೆ ಕ್ರಮ ಕೈಗೊಳ್ಳುವಂತೆ ಸೂಚಿಸುತ್ತೇನೆ.

ಅರಣ್ಯ ಪ್ರದೇಶದಲ್ಲಿ ಕುರಿಗಳನ್ನು ಮಾತ್ರ ಮೇಯಿಸಲು ಅವಕಾಶ ನೀಡುವ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ಕುರಿಗಳು ಸತ್ತರೆ ಒಂದು ಕುರಿಗೆ 5 ಸಾವಿರ ರೂಪಾಯಿ ಪರಿಹಾರ ನೀಡುವ ಅನುಗ್ರಹ ಯೋಜನೆ ಜಾರಿಯಲ್ಲಿದೆ. ಈ ಮೊತ್ತವನ್ನು ಇನ್ನಷ್ಟು ಹೆಚ್ಚಿಸುವ ಬಗ್ಗೆ ಪರಿಶೀಲನೆ ಮಾಡಲಾಗುವುದು.

ರಾಜ್ಯದಲ್ಲಿನ ವಲಸೆ ಕುರಿಗಾರರ ಮತ್ತು ಅವರ ಸ್ವತ್ತುಗಳ ಮೇಲಿನ ದೌರ್ಜನ್ಯ ತಡೆಯುವ ಕಾಯ್ದೆ ರೂಪಿಸುವುದು, ಕುರಿಗಳಿಗೆ ಉಚಿತ ಲಸಿಕೆ ನೀಡಲು ಅಗತ್ಯ ಸೂಚನೆ ನೀಡಲಾಗುವುದು. ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ ನೀಡಲು ವ್ಯವಸ್ಥೆ ಮಾಡಲಾಗುವುದು. ಈ ಗುರುತಿನ ಚೀಟಿ ಆಧಾರದ ಮೇಲೆ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡುವಂತೆ ಕ್ರಮ ಕೈಗೊಳ್ಳಲಾಗುವುದು.

ಕುರಿಗಾಹಿಗಳ ಮಕ್ಕಳಿಗೆ ಸರ್ಕಾರಿ ವಸತಿ ಶಾಲೆಗಳಲ್ಲಿ ಆದ್ಯತೆ ಮೇರೆಗೆ ಪ್ರವೇಶ ನೀಡುವ ಬಗ್ಗೆ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದು, ಇವುಗಳಿಗೆ ಸರ್ಕಾರಿ ಆದೇಶ ನೀಡುವಂತೆ ಮುಖ್ಯಮಂತ್ರಿ ಸೂಚಿಸಿದರು. ಪಶುಸಂಗೋಪನಾ ಇಲಾಖೆಯಲ್ಲಿ 1300 ವೈದ್ಯರ ಹುದ್ದೆ ಖಾಲಿ ಇದ್ದು, ಪ್ರಸ್ತುತ 400 ವೈದ್ಯರನ್ನು ನೇಮಕ ಮಾಡಲಾಗುತ್ತಿದೆ. ಮುಂದಿನ ವರ್ಷ ಬಾಕಿ ವೈದ್ಯರ ನೇಮಕಾತಿ ಮಾಡಲಾಗುವುದು ಎಂದರು.

ಕುರಿಗಾರರು ಕ್ಯಾಂಪ್ ಮಾಡಿರುವ ಕಡೆಗಳಲ್ಲೇ ವೈದ್ಯರು ಬಂದು ಚಿಕಿತ್ಸೆ ನೀಡಬೇಕು. ಕುರಿಗಾರರ ಕುರಿ ಕಳ್ಳತನವಾದರೆ ಕೂಡಲೇ ಪ್ರಕರಣ ದಾಖಲು ಮಾಡಬೇಕು, ಬಂಧಿಸಿ ತನಿಖೆ ಮಾಡಲು ಹಾಗೂ ರಕ್ಷಣೆ ನೀಡುವ ವ್ಯವಸ್ಥೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗುವುದು.

ಹಿಂದಿನ ಸರ್ಕಾರ ಸತ್ತ ಕುರಿಗಳಿಗೆ ನೀಡುವ ಅನುಗ್ರಹ ಯೋಜನೆಯನ್ನು ನಿಲ್ಲಿಸಿದ್ದು, ಈ ಕುರಿತು ಪರಿಹಾರ ನೀಡುವ ಬಗ್ಗೆ ಎಲ್ಲಾ ಜಿಲ್ಲೆಗಳಿಂದ ವರದಿ ತರಿಸಲಾಗುವುದು. ಗೋಮಾಳಗಳನ್ನು ಯಾರಿಗೂ ಪರಭಾರೆ ಮಾಡಬಾರದೆಂದು ಈ ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಆದೇಶ ಹೊರಡಿಸಲಾಗಿತ್ತು. ಗೋಮಾಳಗಳ ರಕ್ಷಣೆ ಮಾಡಲಾಗುವುದು.

2024-25ನೇ ಸಾಲಿನ ಆಯವ್ಯಯದಲ್ಲಿ ಪಶುಪಾಲಕರು ಮತ್ತು ಕುರಿಗಾಹಿ ಸಮುದಾಯಗಳಿಗೆ ಘೋಷಿಸಲಾದ ಕರ್ನಾಟಕ ರೈತ ಸಮೃದ್ಧಿ ಯೋಜನೆಯೊಂದಿಗೆ ಸಂಯೋಜಿಸಿ ಈ ಕೆಳಕಂಡ ಯೋಜನೆಗಳನ್ನು ಜಾರಿಗೊಳಿಸಲಾಗುವುದು. ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ 10,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.

ಅಮೃತ ಮಹಲ್/ಹಳ್ಳಿಕಾರ್/ಖಿಲಾರಿ ರಾಸುಗಳನ್ನು ಸಂವರ್ಧನೆ ಮಾಡಿ ಉತ್ಕೃಷ್ಟ ಕರುಗಳನ್ನು ಒದಗಿಸಲಾಗುವುದು. ರೈತ ಮಹಿಳೆಯರಲ್ಲಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ.6ರ ಬಡ್ಡಿ ಸಹಾಯಧನ ನೀಡಲಾಗುವುದು. ಹಂದಿ ಮತ್ತು ಕೋಳಿ ಸಾಕಾಣಿಕೆಯನ್ನು ಪ್ರೋತ್ಸಾಹಿಸಲು ಆಸಕ್ತ ರೈತರಿಗೆ ತರಬೇತಿ ನೀಡುವ ಮೂಲಕ ರೈತರ ಆದಾಯ ಹೆಚ್ಚಿಸಲಾಗುವುದು.

ಜಿಲ್ಲಾ ಹಂತದಲ್ಲಿರುವ ತಜ್ಞ ಪಶುವೈದ್ಯಕೀಯ ಪಾಲಿಕ್ಲಿನಿಕ್​ಗಳನ್ನು ತಾಲೂಕು ಹಂತಕ್ಕೆ ವಿಸ್ತರಿಸಲು ಕ್ರಮವಹಿಸಲಾಗುವುದು. ಪ್ರಥಮ ಹಂತದಲ್ಲಿ ರಾಜ್ಯದ ಆಯ್ದ 20 ತಾಲೂಕುಗಳ ಪಶು ಆಸ್ಪತ್ರೆಗಳನ್ನು ಪಾಲಿಕ್ಲಿನಿಕ್ ಗಳನ್ನಾಗಿ ಮೇಲ್ದರ್ಜೆಗೇರಿಸಲು 10 ಕೋಟಿ ರೂ. ಒದಗಿಸಲಾಗುವುದು. ಬಾಡಿಗೆ ಮತ್ತು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು. ರಾಜ್ಯದಲ್ಲಿ ಪರಂಪರಾಗತವಾಗಿ ಕುರಿ/ಮೇಕೆ ಸಾಕಾಣಿಕೆಯನ್ನು ವಲಸೆ ಮುಖಾಂತರ ಕೈಗೊಳ್ಳುತ್ತಿರುವ ಕುರಿಗಾರರ ಹಿತರಕ್ಷಣೆಗಾಗಿ ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದರು.

ವಲಸೆ ಕುರಿಗಾಹಿಗಳ ಮತ್ತು ಸ್ವತ್ತುಗಳ ಮೇಲೆ ದೌರ್ಜನ್ಯ ತಡೆ ಕಾಯ್ದೆ ಜಾರಿಗೊಳಿಸಲಾಗುವುದು. ಸಂಚಾರಿ ಕುರಿಗಾಹಿಗಳ ಮಕ್ಕಳಿಗೆ ಸರ್ಕಾರಿ ವಸತಿ ಶಾಲೆಗಳಲ್ಲಿ ಪ್ರವೇಶಕ್ಕೆ ಆದ್ಯತೆ ನೀಡಿ ವಿದ್ಯಾರ್ಥಿ ವೇತನ ನೀಡಲಾಗುವುದು. ಪುತ್ತೂರು ಪಶುವೈದ್ಯಕೀಯ ಕಾಲೇಜಿನ ಕಾಮಗಾರಿಗಳು ಮುಕ್ತಾಯದ ಹಂತದಲ್ಲಿದ್ದು, ಪ್ರಸಕ್ತ ಸಾಲಿನಲ್ಲಿ ಕಾಲೇಜನ್ನು ಕಾರ್ಯಾರಂಭ ಮಾಡಲಾಗುವುದು.

ಪಶುಸಂಗೋಪನಾ ಸಚಿವ ವೆಂಕಟೇಶ್, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವೇಂದ್ರಪ್ಪ ವರ್ತೂರು, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ, ಪಶು ಸಂಗೋಪನಾ ಇಲಾಖೆ ಕಾರ್ಯದರ್ಶಿ ಅಜಯ್ ನಾಗಭೂಷಣ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಹೆಚ್ಚುವರಿ ಹಾಲಿಗೆ 2 ರೂಪಾಯಿ ನಿಗದಿಪಡಿಸಲಾಗಿದೆಯೇ ಹೊರತು ಹಾಲಿನ ಬೆಲೆ ಏರಿಸಿಲ್ಲ: ಸಿಎಂ - CM Siddaramaiah

ETV Bharat Logo

Copyright © 2024 Ushodaya Enterprises Pvt. Ltd., All Rights Reserved.