ETV Bharat / state

ನಿರ್ಮಾಣ ಹಂತದ 1.30 ಲಕ್ಷ ಮನೆಗಳ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಸಿಎಂ ಸೂಚನೆ - CM INSTRUCTIONS ON HOUSING SCHEMES - CM INSTRUCTIONS ON HOUSING SCHEMES

ನಿರ್ಮಾಣದ ವಿವಿಧ ಹಂತಗಳಲ್ಲಿರುವ 1.30 ಲಕ್ಷ ಮನೆಗಳ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಸಚಿವರು ಮತ್ತು ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ
ಸಚಿವರು ಮತ್ತು ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ (ETV Bharat)
author img

By ETV Bharat Karnataka Team

Published : Jul 4, 2024, 8:21 AM IST

ಬೆಂಗಳೂರು: ಪ್ರಧಾನಮಂತ್ರಿ ಆವಾಸ್‌ ಯೋಜನೆ ಅಡಿ ಈಗಾಗಲೇ ಪ್ರಾರಂಭವಾಗಿರುವ ಮನೆಗಳ ಕಾಮಗಾರಿಯನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.

ಕೃಷ್ಣಾದಲ್ಲಿ ಬುಧವಾರ ವಸತಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ, ಕೊಳಚೆ ನಿರ್ಮೂಲನೆ ಮಂಡಳಿ ಅಡಿಯಲ್ಲಿ 82 ಸಾವಿರ ಮನೆಗಳು, ರಾಜೀವ್‌ ಗಾಂಧಿ ವಸತಿ ನಿಗಮ ಅಡಿಯಲ್ಲಿ 47,800 ಮನೆಗಳು ಸೇರಿ ಒಟ್ಟು 1.30 ಲಕ್ಷ ಮನೆ ನಿರ್ಮಾಣದ ವಿವಿಧ ಹಂತಗಳಲ್ಲಿದ್ದು, ಅವುಗಳ ನಿರ್ಮಾಣ ಕಾರ್ಯವನ್ನು ಹಂತ ಹಂತವಾಗಿ ಪೂರ್ಣಗೊಳಿಸಲು ಆದ್ಯತೆ ನೀಡುವಂತೆ ತಿಳಿಸಿದರು.

ಫಲಾನುವಿಗಳ ಮೇಲಿನ ಹೊರೆ ಕಡಿಮೆ: ಪ್ರತಿ ಮನೆಯ ನಿರ್ಮಾಣದ ಘಟಕ ವೆಚ್ಚ 6 ರಿಂದ 7.5 ಲಕ್ಷಗಳಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಾಯ ಧನವನ್ನು ಹೊರತುಪಡಿಸಿ, ಬಾಕಿ ಸುಮಾರು 4 ರಿಂದ 5 ಲಕ್ಷ ರೂಪಾಯಿಗಳ ವಂತಿಗೆ ಮೊತ್ತವನ್ನು ಫಲಾನುಭವಿಗಳೇ ಭರಿಸಬೇಕಾಗಿತ್ತು. ಈ ಮೊತ್ತವನ್ನು ಆರ್ಥಿಕವಾಗಿ ಅಶಕ್ತರಾಗಿರುವ ಕೊಳಗೇರಿ ನಿವಾಸಿಗಳು ಪಾವತಿಸಲು ಕಷ್ಟಕರವಾಗಿದ್ದು ಮನೆಗಳ ಕಾಮಗಾರಿಗಳು ಅರ್ಧಕ್ಕೆ ನಿಂತಿದ್ದವು. ಆದ್ದರಿಂದ, ಫಲಾನುಭವಿಗಳ ಮೇಲಿನ ಹೊರೆಯನ್ನು ಕಡಿಮೆ ಮಾಡಿ, ಒಂದು ಲಕ್ಷಕ್ಕೆ ನಿಗದಿಗೊಳಿಸಿ, ಪ್ರತಿ ಫಲಾನುಭವಿಗೆ ಬಾಕಿ 4 ಲಕ್ಷಗಳಂತೆ ಸರ್ಕಾರದಿಂದಲೇ ಭರಿಸಲು ಅನುಮೋದನೆ ನೀಡಲಾಗಿದೆ. ಇದಕ್ಕೆ ಪ್ರಥಮ ಹಂತದಲ್ಲಿ 500 ಕೋಟಿ ಮಂಜೂರು ಮಾಡಲಾಗಿದೆ. ಹೆಚ್ಚುವರಿ ಅನುದಾನದ ಬಗ್ಗೆ ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲು ಸಿಎಂ ಸೂಚನೆ ನೀಡಿದರು.

ಇದನ್ನೂ ಓದಿ: ಮುಡಾದಲ್ಲಿ ಬದಲಿ ನಿವೇಶನಗಳ ಹಂಚಿಕೆ ಪ್ರಕರಣ: ಜನಪ್ರತಿನಿಧಿಗಳು ಹೇಳಿದ್ದು ಹೀಗೆ ? - MUDA SCAM

ಫಲಾನುಭವಿಗಳ ಪಾಲಿನ 1 ಲಕ್ಷ ರೂ. ವಂತಿಗೆ ಮೊತ್ತವನ್ನು ಸಂಗ್ರಹಿಸುವ ಮೂಲಕ ನಿರ್ಮಾಣ ಕಾರ್ಯವನ್ನು ಚುರುಕುಗೊಳಿಸಬೇಕು. ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ 592 ಕೊಳೆಗೇರಿಗಳ ಅಭಿವೃದ್ಧಿಗೆ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಕರ್ನಾಟಕ ಗೃಹ ಮಂಡಳಿಯಲ್ಲಿ ಭೂಸ್ವಾಧೀನ ಮಾಡಿಕೊಂಡ ಜಮೀನಿನಲ್ಲಿ ತ್ವರಿತವಾಗಿ ಕಾಮಗಾರಿ ಕೈಗೊಳ್ಳಬಹುದು. ಆದರೆ 50:50 ಅನುಪಾತದ ಹಂಚಿಕೆ ಆಧಾರದಲ್ಲಿ ಜಮೀನು ಪಡೆದುಕೊಂಡರೆ, ರೈತರಿಗೆ ಮರುಹಂಚಿಕೆ ಮಾಡುವ ಭೂಮಿಯ ಪರಿವರ್ತನೆಯಲ್ಲಿ ವಿಳಂಬವಾಗುತ್ತಿದ್ದು, ಈ ಬಗ್ಗೆ ನೋಂದಣಿ ಮತ್ತು ಮುದ್ರಾಂಕ, ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯವರೊಂದಿಗೆ ಚರ್ಚಿಸಿ, ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಸಭೆಯಲ್ಲಿ ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ್‌ ಅಬ್ಬಯ್ಯ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್‌, ವಸತಿ ಇಲಾಖೆ ಕಾರ್ಯದರ್ಶಿ ನವೀನ್‌ ರಾಜ್‌ ಸಿಂಗ್‌, ಆರ್ಥಿಕ ಇಲಾಖೆ ಕಾರ್ಯದರ್ಶಿ ಎಂ.ಟಿ. ರೇಜು, ಉಪ ಕಾರ್ಯದರ್ಶಿ ಇಕ್ರಂ ಶರೀಫ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಇಡೀ ಸರ್ಕಾರವೇ ನಿಂತು ಶಿಗ್ಗಾಂವ ಕ್ಷೇತ್ರದ ಉಪಚುನಾವಣೆ ನಡೆಸಲಿದೆ: ಸಚಿವ ಜಾರಕಿಹೊಳಿ - Shiggaon by elections

ETV Bharat Logo

Copyright © 2024 Ushodaya Enterprises Pvt. Ltd., All Rights Reserved.