ETV Bharat / state

ರೈತರಿಗೆ ನೀಡಿದ ನೋಟಿಸ್ ತಕ್ಷಣ ವಾಪಸ್ ಪಡೆಯಿರಿ, ಪಹಣಿ ತಿದ್ದುಪಡಿ ರದ್ದು ಮಾಡಿ: ಸಿಎಂ ಖಡಕ್ ಸೂಚನೆ - NOTICE TO FARMERS

ವಕ್ಫ್ ವಿಚಾರದಲ್ಲಿ ರೈತರಿಗೆ ನೀಡಿರುವ ನೋಟಿಸ್ ತಕ್ಷಣವೇ ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ನೀಡಿದರು.

ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಮತ್ತು ವಕ್ಫ್‌ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಸಿಎಂ ಸಭೆ
ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಮತ್ತು ವಕ್ಫ್‌ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಸಿಎಂ ಸಭೆ (ETV Bharat)
author img

By ETV Bharat Karnataka Team

Published : Nov 2, 2024, 3:06 PM IST

ಬೆಂಗಳೂರು: ವಕ್ಫ್‌ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿಗಳು ಇಂದು ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಮತ್ತು ವಕ್ಫ್‌ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಸುದೀರ್ಘ ಸಭೆ ನಡೆಸಿದರು. ವಕ್ಫ್‌ ಜಮೀನು ವಿಚಾರದಲ್ಲಿ ಇತ್ತೇಚೆಗೆ ನಡೆದಿರುವ ಬೆಳವಣಿಗೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ನೋಟಿಸ್‌ ವಿಚಾರದಲ್ಲಿ ಕೆಲ ಅಧಿಕಾರಿಗಳು ಕೈಗೊಂಡಿರುವ ಕ್ರಮದ ಬಗ್ಗೆಯೂ ಗರಂ ಆದರು. ಇನ್ನು ಮುಂದೆ ರೈತರಿಗೆ ಯಾವುದೇ ರೀತಿಯ ತೊಂದರೆ ನೀಡದಂತೆ ಅಧಿಕಾರಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಬೆಳವಣಿಗೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಯವರು, ವಕ್ಫ್‌ ವಿಚಾರವನ್ನು ಜೆಡಿಎಸ್‌ ಮತ್ತು ಬಿಜೆಪಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ. ಈ ಮೂಲಕ ರಾಜ್ಯದಲ್ಲಿ ಶಾಂತಿ ಕದಡುವ ದುಷ್ಟ ಪ್ರಯತ್ನವನ್ನು ಆ ಪಕ್ಷಗಳು ಜಂಟಿಯಾಗಿ ಮಾಡುತ್ತಿವೆ. ಇಂತಹ ಹೀನ ಪ್ರಯತ್ನಗಳಿಗೆ ರಾಜ್ಯದ ಜನರು ಸೊಪ್ಪು ಹಾಕದಂತೆ ಮುಖ್ಯಮಂತ್ರಿಯವರು ವಿನಂತಿ ಮಾಡಿದರು. ಜೊತೆಗೆ ಅಪ ಪ್ರಚಾರಗಳಿಗೆ ಕಿವಿಗೊಡದಂತೆ ಕೋರಿದರು.

ಅಧಿಕಾರಿಗಳೂ ಈ ಕುರಿತು ಎಚ್ಚರ ವಹಿಸಬೇಕು. ರೈತರಿಗೆ ತೊಂದರೆ ಆಗುವ ಯಾವುದೇ ತೀರ್ಮಾನವನ್ನು ಕೈಗೊಳ್ಳಬಾರದು ಎಂದು ಸಿಎಂ ನಿರ್ದೇಶನ ನೀಡಿದರು.

ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು:

  • ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟಿಸ್‌ಗಳನ್ನು ತಕ್ಷಣ ವಾಪಸ್‌ ಪಡೆಯಬೇಕು. ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು ಎಂದು ಸೂಚಿಸಿದರು.
  • ಕಾನೂನು ಬಾಹಿರವಾಗಿ ಹಾಗೂ ನೋಟಿಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು ಎಂದು ಇದೇ ವೇಳೆ ಸೂಚನೆ ನೀಡಿದರು.
  • ಸಭೆಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್‌, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಪೊನ್ನಣ್ಣ, ವಕ್ಫ್‌ ಮಂಡಳಿಯ ಸಿಇಒ ಜಿಲಾನಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹಮದ್‌, ಅಲ್ಫಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮನೋಜ್‌ ಜೈನ್‌‌ ಮುಂತಾದವರು ಸಭೆಯಲ್ಲಿ ಹಾಜರಿದ್ದರು.

ಇದನ್ನೂ ಓದಿ: ವಕ್ಫ್ ಆಸ್ತಿ ರಾಷ್ಟ್ರೀಕರಣಗೊಳಿಸುವಂತೆ ಕೋರಿ ಬಸನಗೌಡ ಯತ್ನಾಳ್ ಪ್ರಧಾನಿ ಮೋದಿಗೆ ಪತ್ರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.