ಬೆಂಗಳೂರು: ನಾನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧಿಸಬಾರದಿತ್ತು. ಅಚಾತುರ್ಯದಿಂದ ಆಗಿರುವ ಪ್ರಮಾದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಸಾಮಾಜಿಕ ಜಾಲತಾಣ 'ಎಕ್ಸ್' ಪೋಸ್ಟ್ ಮೂಲಕ ಸಿಎಂ ಸಿದ್ದರಾಮಯ್ಯ ವಿಷಾದಿಸಿದ್ದಾರೆ.
-
ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ರಾಷ್ಟ್ರಪತಿಗಳಾಗಿರುವ ದ್ರೌಪದಿ ಮುರ್ಮು ಅವರಿಗೆ
— Siddaramaiah (@siddaramaiah) January 28, 2024 " class="align-text-top noRightClick twitterSection" data="
ಸಂಸತ್ ಭವನ ಉದ್ಘಾಟನೆಗೆ ಆಹ್ವಾನ ನೀಡದೆ @BJP4India ನಾಯಕರು ಅವಮಾನಿಸಿರುವುದು ನನಗೆ ತೀವ್ರ ನೋವು ಉಂಟುಮಾಡಿದ್ದು ಮಾತ್ರವಲ್ಲ ನನ್ನಲ್ಲಿ ಆಕ್ರೋಶ ಹುಟ್ಟಿಸಿತ್ತು.
ಶೋಷಿತರ ಜಾಗೃತಿ ಸಮಾವೇಶದಲ್ಲಿ ಸ್ವಲ್ಪ ಭಾವುಕನಾಗಿ ಈ ಆಕ್ರೋಶವನ್ನು…
">ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ರಾಷ್ಟ್ರಪತಿಗಳಾಗಿರುವ ದ್ರೌಪದಿ ಮುರ್ಮು ಅವರಿಗೆ
— Siddaramaiah (@siddaramaiah) January 28, 2024
ಸಂಸತ್ ಭವನ ಉದ್ಘಾಟನೆಗೆ ಆಹ್ವಾನ ನೀಡದೆ @BJP4India ನಾಯಕರು ಅವಮಾನಿಸಿರುವುದು ನನಗೆ ತೀವ್ರ ನೋವು ಉಂಟುಮಾಡಿದ್ದು ಮಾತ್ರವಲ್ಲ ನನ್ನಲ್ಲಿ ಆಕ್ರೋಶ ಹುಟ್ಟಿಸಿತ್ತು.
ಶೋಷಿತರ ಜಾಗೃತಿ ಸಮಾವೇಶದಲ್ಲಿ ಸ್ವಲ್ಪ ಭಾವುಕನಾಗಿ ಈ ಆಕ್ರೋಶವನ್ನು…ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ರಾಷ್ಟ್ರಪತಿಗಳಾಗಿರುವ ದ್ರೌಪದಿ ಮುರ್ಮು ಅವರಿಗೆ
— Siddaramaiah (@siddaramaiah) January 28, 2024
ಸಂಸತ್ ಭವನ ಉದ್ಘಾಟನೆಗೆ ಆಹ್ವಾನ ನೀಡದೆ @BJP4India ನಾಯಕರು ಅವಮಾನಿಸಿರುವುದು ನನಗೆ ತೀವ್ರ ನೋವು ಉಂಟುಮಾಡಿದ್ದು ಮಾತ್ರವಲ್ಲ ನನ್ನಲ್ಲಿ ಆಕ್ರೋಶ ಹುಟ್ಟಿಸಿತ್ತು.
ಶೋಷಿತರ ಜಾಗೃತಿ ಸಮಾವೇಶದಲ್ಲಿ ಸ್ವಲ್ಪ ಭಾವುಕನಾಗಿ ಈ ಆಕ್ರೋಶವನ್ನು…
ಚಿತ್ರದುರ್ಗದಲ್ಲಿ ನಡೆದ ಶೋಷಿತ ವರ್ಗಗಳ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಉಲ್ಲೇಖಿಸಿ ಏಕವಚನ ಬಳಸಿದ್ದರು. ಇದನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿ ವಾಗ್ದಾಳಿ ನಡೆಸಿದ್ದರು.
ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಂಸತ್ ಭವನ ಉದ್ಘಾಟನೆಗೆ ಆಹ್ವಾನ ನೀಡದೆ ಬಿಜೆಪಿ ನಾಯಕರು ಅವಮಾನಿಸಿರುವುದು ನನಗೆ ತೀವ್ರ ನೋವು ಉಂಟುಮಾಡಿತ್ತು. ಅಷ್ಟೇ ಅಲ್ಲ, ನನ್ನಲ್ಲಿ ಆಕ್ರೋಶ ಹುಟ್ಟಿಸಿತ್ತು ಎಂದು ತಿಳಿಸಿದ್ದಾರೆ.
ಶೋಷಿತರ ಜಾಗೃತಿ ಸಮಾವೇಶದಲ್ಲಿ ಸ್ವಲ್ಪ ಭಾವುಕನಾಗಿ ಈ ಆಕ್ರೋಶ ಹೊರಹಾಕುವ ಭರದಲ್ಲಿ ಬಾಯ್ತಪ್ಪಿನಿಂದ ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಭೋದಿಸಿದೆ. ಗ್ರಾಮೀಣ ಪ್ರದೇಶದಿಂದ ಬಂದ ನನ್ನಂತಹವರು ಅಪ್ಪ-ಅಮ್ಮ ಸೇರಿದಂತೆ ಹಿರಿಯರನ್ನು ಕೂಡಾ ಏಕವಚನದಲ್ಲಿ ಸಂಭೋದಿಸುವುದು ರೂಢಿ. ಗೌರವಾನ್ವಿತ ರಾಷ್ಟ್ರಪತಿಗಳು ನನ್ನಂತೆಯೇ ಶೋಷಿತ ಸಮಾಜದಿಂದ ಬಂದವರು, ಅವರ ಬಗ್ಗೆ ಅಪಾರ ಗೌರವವಿದೆ ಎಂದಿದ್ದಾರೆ.
-
ಗೌರವಾನ್ವಿತ ರಾಷ್ಟ್ರಪತಿಗಳು, ದೇಶದ ಪ್ರಥಮ ಪ್ರಜೆ ಆಗಿರುವ ಶ್ರೀಮತಿ ದ್ರೌಪದಿ ಮುರ್ಮು @rashtrapatibhvn ಅವರನ್ನು ಏಕವಚನದಲ್ಲಿ (ಆ ಪದವನ್ನು ಬರೆಯಲಾರೆ) ಎಂದು ತುಚ್ಛವಾಗಿ ಸಂಬೋಧಿಸಿದ ಕೀಳು, ವಿಕೃತ, ಹೀನ ನಾಲಗೆಯ ಸಿದ್ದರಾಮಯ್ಯ @siddaramaiah ರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೂಡಲೇ ವಜಾ ಮಾಡಬೇಕು.1/6 #ಆಚಾರಗೆಟ್ಟ_ಮುಖ್ಯಮಂತ್ರಿ pic.twitter.com/h6VCoT1B7Z
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 28, 2024 " class="align-text-top noRightClick twitterSection" data="
">ಗೌರವಾನ್ವಿತ ರಾಷ್ಟ್ರಪತಿಗಳು, ದೇಶದ ಪ್ರಥಮ ಪ್ರಜೆ ಆಗಿರುವ ಶ್ರೀಮತಿ ದ್ರೌಪದಿ ಮುರ್ಮು @rashtrapatibhvn ಅವರನ್ನು ಏಕವಚನದಲ್ಲಿ (ಆ ಪದವನ್ನು ಬರೆಯಲಾರೆ) ಎಂದು ತುಚ್ಛವಾಗಿ ಸಂಬೋಧಿಸಿದ ಕೀಳು, ವಿಕೃತ, ಹೀನ ನಾಲಗೆಯ ಸಿದ್ದರಾಮಯ್ಯ @siddaramaiah ರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೂಡಲೇ ವಜಾ ಮಾಡಬೇಕು.1/6 #ಆಚಾರಗೆಟ್ಟ_ಮುಖ್ಯಮಂತ್ರಿ pic.twitter.com/h6VCoT1B7Z
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 28, 2024ಗೌರವಾನ್ವಿತ ರಾಷ್ಟ್ರಪತಿಗಳು, ದೇಶದ ಪ್ರಥಮ ಪ್ರಜೆ ಆಗಿರುವ ಶ್ರೀಮತಿ ದ್ರೌಪದಿ ಮುರ್ಮು @rashtrapatibhvn ಅವರನ್ನು ಏಕವಚನದಲ್ಲಿ (ಆ ಪದವನ್ನು ಬರೆಯಲಾರೆ) ಎಂದು ತುಚ್ಛವಾಗಿ ಸಂಬೋಧಿಸಿದ ಕೀಳು, ವಿಕೃತ, ಹೀನ ನಾಲಗೆಯ ಸಿದ್ದರಾಮಯ್ಯ @siddaramaiah ರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೂಡಲೇ ವಜಾ ಮಾಡಬೇಕು.1/6 #ಆಚಾರಗೆಟ್ಟ_ಮುಖ್ಯಮಂತ್ರಿ pic.twitter.com/h6VCoT1B7Z
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 28, 2024
ಹೆಚ್ಡಿಕೆ ಆಕ್ರೋಶ: ಇದಕ್ಕೂ ಮುನ್ನ ಹೆಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಮಾತನಾಡಿದ ವಿಡಿಯೋ ಅನ್ನು 'ಎಕ್ಸ್' ಪೋಸ್ಟ್ ಮಾಡುವ ಮೂಲಕ ಕಿಡಿಕಾರಿದ್ದರು. ಗೌರವಾನ್ವಿತ ರಾಷ್ಟ್ರಪತಿಗಳು, ದೇಶದ ಪ್ರಥಮ ಪ್ರಜೆಯಾಗಿರುವ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ತುಚ್ಛವಾಗಿ ಸಂಬೋಧಿಸಿದ ಕೀಳು, ವಿಕೃತ, ಹೀನ ನಾಲಗೆಯ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೂಡಲೇ ವಜಾ ಮಾಡಬೇಕು ಎಂದು ಒತ್ತಾಯಿಸಿದ್ದರು.
ಇದನ್ನೂ ಓದಿ: ನಿರ್ದಿಷ್ಟ ಧರ್ಮ, ಸಮುದಾಯದ ವಿರುದ್ಧವಿಲ್ಲ, ನಮ್ಮದು ಸಂವಿಧಾನ ಪರವಾದ ನಿಲುವು: ಮಂಡ್ಯ ಘಟನೆ ಬಗ್ಗೆ ಸಿಎಂ ಪೋಸ್ಟ್