ETV Bharat / state

ಇನ್ಮೇಲೆ ಪ್ರತಿ ತಿಂಗಳು ನಾನೇ ಒನ್ ಟು ಒನ್ ಪ್ರಗತಿ ಪರಿಶೀಲನೆ ನಡೆಸುವೆ, ಪ್ರಗತಿ ಕಾಣಿಸದಿದ್ದರೆ...: ಸಿಎಂ ಎಚ್ಚರಿಕೆ - CM SIDDARAMAIAH

ವಿಧಾನಸೌಧದಲ್ಲಿ ವಾಣಿಜ್ಯ ತೆರಿಗೆ ಸಂಗ್ರಹ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಗುರಿ ಮೀರಿ ತೆರಿಗೆ ಸಂಗ್ರಹಕ್ಕೆ ಜಂಟಿ ಆಯುಕ್ತರುಗಳಿಗೆ ಸ್ಪಷ್ಟ ಸೂಚನೆ ನೀಡಿದರು.

CM MEETING
ವಾಣಿಜ್ಯ ತೆರಿಗೆ ಸಂಗ್ರಹ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Oct 29, 2024, 4:13 PM IST

ಬೆಂಗಳೂರು: ಇನ್ಮೇಲೆ ಪ್ರತಿ ತಿಂಗಳ ಕೊನೆಗೆ ನಾನೇ one to one ಪ್ರಗತಿ ಪರಿಶೀಲನೆ ನಡೆಸ್ತೇನೆ. ಪ್ರಗತಿ ಕಾಣಿಸದಿದ್ದರೆ ಮುಲಾಜಿಲ್ಲದೆ ನಿಮ್ಮನ್ನು ಬದಲಾಯಿಸ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಂಟಿ ಆಯುಕ್ತರುಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ವಿಧಾನಸೌಧದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಾಣಿಜ್ಯ ತೆರಿಗೆ ಸಂಗ್ರಹ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಯಿತು.

2024-25ನೇ ಸಾಲಿನಲ್ಲಿ ಒಟ್ಟು ರೂ.1,10,000 ಕೋಟಿ ತೆರಿಗೆ ಸಂಗ್ರಹ ಗುರಿ ಇದೆ. ಅಕ್ಟೋಬರ್‌ ಅಂತ್ಯದವರೆಗೆ ಒಟ್ಟು ರೂ.58,773 ಕೋಟಿ ಸಂಗ್ರಹಿಸಲಾಗಿದ್ದು, ಇದರಲ್ಲಿ ಜಿಎಸ್‌ಟಿ ರೂ.44,783 ಕೋಟಿ, ಕೆಎಸ್‌ಟಿ ರೂ.13,193 ಕೋಟಿ, ವೃತ್ತಿ ತೆರಿಗೆ ರೂ.797 ಕೋಟಿ ಸೇರಿದೆ ಎಂದರು.

ಅಕ್ಟೋಬರ್‌ ಕೊನೆಯವರೆಗೆ ಶೇ.53.5 ಗುರಿ ಸಾಧನೆಯಾಗಿದೆ. 2023-24ನೇ ಸಾಲಿಗೆ ಹೋಲಿಸಿದರೆ ರೂ.5,957 ಕೋಟಿ ಹೆಚ್ಚುವರಿ ಸಂಗ್ರಹವಾಗಿರುತ್ತದೆ. ಮುಂದಿನ ಐದು ತಿಂಗಳ ಅವಧಿಯಲ್ಲಿ ಪ್ರತಿ ತಿಂಗಳು ರೂ.10200 ಕೋಟಿ ತೆರಿಗೆ ಸಂಗ್ರಹ ಗುರಿಯನ್ನು ಇರಿಸಿ ಮಾರ್ಚ್‌ ಒಳಗಾಗಿ ಗುರಿಯನ್ನು ಸಾಧಿಸಬೇಕು. ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಮಾತ್ರ ಗುರಿ ಸಾಧನೆ ಸಾಧ್ಯ. ಈ ಬಾರಿ ಉತ್ತಮ ಮಳೆಯಾಗಿದೆ. ಗುರಿ ಮೀರಿ ತೆರಿಗೆ ಸಂಗ್ರಹ ಮಾಡಲು ರಾಜ್ಯದ ಅಭಿವೃದ್ಧಿಗೆ ತೆರಿಗೆ ಸಂಗ್ರಹದಲ್ಲಿ ಈ ಗುರಿ ಸಾಧಿಸಬೇಕಿದೆ ಎಂದು ಹೇಳಿದರು.

ಪ್ರತಿ ತಿಂಗಳು ಪ್ರಗತಿ ಪರಿಶೀಲನೆ ನಡೆಸಲಿದ್ದೇನೆ. ನಿಗದಿತ ಗುರಿ ಸಾಧಿಸದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು. ಯಾವುದೇ ಕಾರಣಕ್ಕೂ ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ಗುರಿಗಿಂತ ಕಡಿಮೆಯಾಗಲೇಬಾರದು. ಕರ ಸಮಾಧಾನ ಯೋಜನೆ ಅಡಿ ರೂ. 2 ಸಾವಿರ ಕೋಟಿ ಹೆಚ್ಚುವರಿ ಸಂಗ್ರಹಣೆಯ ನಿರೀಕ್ಷೆ ಇದೆ ಎಂದು ತಿಳಿಸಿದರು.

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾದ ಸಿ.ಎ.ಶಿಖಾ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಅಬಕಾರಿ ಇಲಾಖೆ ತೆರಿಗೆ ಸಂಗ್ರಹ ಪರಿಶೀಲನೆ: 2024-25ನೇ ಸಾಲಿನಲ್ಲಿ ಒಟ್ಟು ರೂ.38525 ಕೋಟಿ ಅಬಕಾರಿ ತೆರಿಗೆ ಸಂಗ್ರಹ ಗುರಿ ಹೊಂದಲಾಗಿದೆ. ಅಕ್ಟೋಬರ್‌ 28ರವರೆಗೆ ರೂ.20237 ಕೋಟಿ ಸಂಗ್ರಹವಾಗಿದೆ. ಇದುವರೆಗೆ ಶೇ.52.53 ಗುರಿ ಸಾಧನೆ ಮಾಡಲಾಗಿದ್ದು, ಮಾರ್ಚ್‌ ಒಳಗಾಗಿ ನಿಗದಿತ ಗುರಿಯನ್ನು ಸಾಧಿಸಲು ಕ್ರಮ ಕೈಗೊಳ್ಳಬೇಕು. ಕಳೆದ ವರ್ಷಕ್ಕಿಂತ ಈ ಅವಧಿಯಲ್ಲಿ 1301.15 ಕೋಟಿ ರೂ. ಹೆಚ್ಚುವರಿ ತೆರಿಗೆ ಸಂಗ್ರಹಿಸಲಾಗಿದೆ.

ಗೋವಾದಿಂದ ಅಕ್ರಮ ಮದ್ಯ ಸಾಗಾಟವನ್ನು ಸಂಪೂರ್ಣವಾಗಿ ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಇಲಾಖೆಯಲ್ಲಿ ಭ್ರಷ್ಟಾಚಾರದ ಬಗ್ಗೆ ದೂರುಗಳು ಬಂದರೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಸಿಎಂ ಸೂಚಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.