ETV Bharat / state

ಅತ್ಯಾಧುನಿಕ 65 ಆಂಬ್ಯುಲೆನ್ಸ್​ ಲೋಕಾರ್ಪಣೆ: ಸಂಚಾರ ನಿಯಮ ಪಾಲಿಸದವರ ಲೈಸೆನ್ಸ್ ರದ್ದು ಮಾಡಿ ಎಂದ ಸಿಎಂ - CM inaugurates New Ambulances - CM INAUGURATES NEW AMBULANCES

'ಮುಖ್ಯಮಂತ್ರಿಗಳ ಆಪತ್ಕಾಲ ಯಾನ ಸೇವೆ: ನೂತನ 65 ಆ್ಯಂಬುಲೆನ್ಸ್'ಗಳನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು.

ambulances
ಮುಖ್ಯಮಂತ್ರಿಗಳ ಆಪತ್ಕಾಲ ಯಾನ ಸೇವೆ ಆ್ಯಂಬುಲೆನ್ಸ್ ಲೋಕಾರ್ಪಣೆ (ETV Bharat)
author img

By ETV Bharat Karnataka Team

Published : Sep 23, 2024, 4:18 PM IST

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ 65 ಆಧುನಿಕ‌ ಜೀವರಕ್ಷಕ ಸವಲತ್ತುಗಳಿರುವ ಆಂಬ್ಯುಲೆನ್ಸ್​ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು.

ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಇಂದು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ "ಮುಖ್ಯಮಂತ್ರಿಗಳ ಆಪತ್ಕಾಲ ಯಾನ ಸೇವೆ: ನೂತನ 65 ಆಂಬ್ಯುಲೆನ್ಸ್"ಗಳನ್ನು ಲೋಕಾರ್ಪಣೆ ಮಾಡಲಾಯಿತು.

ambulances
ಆ್ಯಂಬುಲೆನ್ಸ್ ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ (ETV Bharat)

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ''ಅಪಘಾತದ ಸಂದರ್ಭದಲ್ಲಿ 'ಗೋಲ್ಡನ್​ ಅವರ್' ಬಹಳ ಮುಖ್ಯ. ಈ‌ ಒಂದು ಗಂಟೆಯಲ್ಲಿ ಅಗತ್ಯ ತುರ್ತು ಚಿಕಿತ್ಸೆ ಸಿಕ್ಕರೆ ನೂರಾರು ಪ್ರಾಣಗಳನ್ನು ಉಳಿಸಲು ಸಾಧ್ಯವಿದೆ. ಪ್ರಾಣ ಉಳಿಸುವ ಕಾರ್ಯಕ್ಕೆ ಈ ಆಂಬ್ಯುಲೆನ್ಸ್​ಗಳು ನೆರವಾಗುತ್ತವೆ. ಸದ್ಯ 65 ಆಧನಿಕ ಮತ್ತು ಪ್ರಾಥಮಿಕ ಆಂಬ್ಯುಲೆನ್ಸ್​ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಮುಂದಿನ‌ ದಿನಗಳಲ್ಲಿ ಇಡೀ ರಾಜ್ಯಕ್ಕೆ ಆಧುನಿಕ‌ ಸವಲತ್ತುಗಳಿರುವ ಆಂಬ್ಯುಲೆನ್ಸ್​ ವಿಸ್ತರಿಸಲಾಗುವುದು ಎಂದು ಹೇಳಿದರು.

ambulances
ಆ್ಯಂಬುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮ (ETV Bharat)

ಸಂಚಾರಿ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳು ಸಂಭವಿಸುವುದೇ ಇಲ್ಲ. ಕುಡಿದು ವಾಹನ ಓಡಿಸುವುದನ್ನು ನೂರಕ್ಕೆ ನೂರರಷ್ಟು ನಿಲ್ಲಿಸಿ. ನಿಮ್ಮ ಕುಟುಂಬಗಳನ್ನು ಅನಾಥ ಮಾಡಬೇಡಿ ಎಂದು ಯುವ ಸಮೂಹಕ್ಕೆ ಸಿಎಂ ಕಿವಿಮಾತು ಹೇಳಿದರು.

ಮೊಬೈಲ್​ನಲ್ಲಿ ಮಾತನಾಡಿಕೊಂಡು ವಾಹನ ಓಡಿಸಿದರೆ ಅಪಘಾತಗಳಾಗದೆ ಇರುತ್ತದಾ? ಎಂದು ಪ್ರಶ್ನಿಸಿದ ಸಿಎಂ, ನಿಮ್ಮ ಜೀವಕ್ಕೆ ನೀವೇ ಜವಾಬ್ದಾರಿ. ನಿಮ್ಮ ಕುಟುಂಬಕ್ಕೂ ನೀವೇ ಜವಾಬ್ದಾರಿ. ಆದ್ದರಿಂದ ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದು ತಿಳಿಸಿದರು.

ambulances
ಆ್ಯಂಬುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸಿಎಂ (ETV Bharat)

ಸಂಚಾರ ನಿಯಮ ಪಾಲಿಸದವರ ಲೈಸೆನ್ಸ್ ರದ್ದು: ಸಂಚಾರ ನಿಯಮ‌ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಸಾರಿಗೆ ಸಚಿವರಿಗೆ ಸೂಚನೆ ನೀಡಿದರು‌.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷರಾದ ಹೆಚ್.ಎಂ. ರೇವಣ್ಣ ಸೇರಿ ಹಲವು ಮುಖಂಡರು ಮತ್ತು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.

ಇದನ್ನೂ ಓದಿ: ಕ್ಷುಲ್ಲಕ ವಿಚಾರಗಳ ಬಗ್ಗೆ ಉತ್ತರ ಕೋರಿ ರಾಜ್ಯಪಾಲರ ಪತ್ರ : ಸಿಎಂ ಸಿದ್ದರಾಮಯ್ಯ ಅಸಮಾಧಾನ - CM Siddaramaiah

ETV Bharat Logo

Copyright © 2025 Ushodaya Enterprises Pvt. Ltd., All Rights Reserved.