ETV Bharat / state

ಚಾಮರಾಜನಗರಕ್ಕೆ ಬಂದಷ್ಟು ನನ್ನ ಕುರ್ಚಿ ಗಟ್ಟಿ: ಭರಚುಕ್ಕಿಯಲ್ಲಿ ಸಿಎಂ ಸಿದ್ದರಾಮಯ್ಯ - Bharachukki Falls

ಕೊಳ್ಳೇಗಾಲ ತಾಲೂಕಿನ ಭರಚುಕ್ಕಿಯಲ್ಲಿ ಜಲಪಾತೋತ್ಸವವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Aug 10, 2024, 10:18 PM IST

ಚಾಮರಾಜನಗರ: ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎನ್ನುತ್ತಿದ್ದರು. ಆದರೆ, ನನ್ನ ಮೊದಲ ಸಿಎಂ ಅವಧಿಯಲ್ಲಿ 15ಕ್ಕೂ ಹೆಚ್ಚು ಬಾರಿ ಭೇಟಿ ಕೊಟ್ಟಿದ್ದೆ. ಎರಡನೇ ಅವಧಿಯಲ್ಲಿ 5ನೇ ಬಾರಿ ಭೇಟಿ ಕೊಡುತ್ತಿದ್ದೇನೆ. ಚಾಮರಾಜನಗರಕ್ಕೆ ಬಂದಾಗಲೆಲ್ಲಾ ನನ್ನ ಕುರ್ಚಿ ಗಟ್ಟಿಯಾಗುತ್ತಿದೆ. ಕೆಲವರು ಕುರ್ಚಿ ಅಲ್ಲಾಡಿಸುತ್ತಿದ್ದಾರೆ, ಅವರು ಅಲ್ಲಾಡಿಸುತ್ತಿರಲಿ, ನನ್ನ‌ ಕುರ್ಚಿ ಗಟ್ಟಿ ಆಗ್ತನೇ ಇರುತ್ತದೆ. ನನ್ನನ್ನು ಏನೂ ಮಾಡಕ್ಕಾಗಲ್ಲ ಎಂದು ಬಿಜೆಪಿ ಜೆಡಿಎಸ್ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು.

ಕೊಳ್ಳೇಗಾಲ ತಾಲೂಕಿನ ಭರಚುಕ್ಕಿಯಲ್ಲಿ ಜಲಪಾತೋತ್ಸವವನ್ನು ಸಿಎಂ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪರಿಸರ ಪ್ರವಾಸೋದ್ಯಮ ಆಹ್ಲಾದಿಸಲು ಚಾಮರಾಜನಗರ ಉತ್ತಮ ಜಿಲ್ಲೆಯಾಗಿದೆ. ಆದರೆ ಆರ್ಥಿಕವಾಗಿ, ಸಾಮಾಜಿಕವಾಗಿ ಬಹಳ ಹಿಂದೆ ಉಳಿದಿದೆ ಎಂದರು. ಇನ್ನಷ್ಟು ಗಟ್ಟಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದು ಬಡವರ, ಶೋಷಿತರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸ್ತಲೇ ಇರುತ್ತೇನೆ ಎಂದು ಭರವಸೆ ನೀಡಿದರು.

ಸಿದ್ದರಾಮಯ್ಯರ ಕಾಲುಗುಣ ಸರಿ ಇಲ್ಲ. ಅದಕ್ಕೆ ರಾಜ್ಯದಲ್ಲಿ ಮಳೆ ಇಲ್ಲ ಎಂದು ನನ್ನ ಬಗ್ಗೆ ಆರೋಪಿಸಿದ್ದರು. ಆದರೆ, ಈ ಬಾರಿ ಮುಂಗಾರು ಉತ್ತಮವಾಗಿದ್ದು, ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಹೀಗಾಗಿ ನನ್ನ ಬಗ್ಗೆ ಮೂಡಿಸಿದ್ದ ಮತ್ತೊಂದು ಮೂಢನಂಬಿಕೆ ಕೂಡ ಸುಳ್ಳಾಗಿದೆ ಎಂದು ಪ್ರತಿಪಕ್ಷಗಳಿಗೆ ಸಿಎಂ ತಿರುಗೇಟು ನೀಡಿದರು.

ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಸರ್ಕಾರ ಅಗತ್ಯ ಎಲ್ಲ ನೆರವನ್ನೂ ನೀಡಲಿದೆ. ಅಗತ್ಯಬಿದ್ದರೆ ಹೊಸ ಪ್ರವಾಸೋದ್ಯಮ ನೀತಿಯನ್ನೂ ರಚಿಸಲಾಗುವುದು ಎಂದು ಇದೇ ವೇಳೆ ತಿಳಿಸಿದರು.

ಬಿಳಿಗಿರಿರಂಗನಬೆಟ್ಟ, ಗಗನಚುಕ್ಕಿ ರೋಪ್ ವೇ, ಇಲ್ಲಿನ ದೇವಸ್ಥಾನ ಅಭಿವೃದ್ಧಿ, ಸುವರ್ಣಾವತಿ ಜಲಾಶಯದಲ್ಲಿ ಜಲ ಸಾಹನ ಕ್ರೀಡೆಗಳನ್ನು ಆರಂಭಿಸುವುದೂ ಸೇರಿ ಎಲ್ಲಾ ಯೋಜನೆಗಳಿಗೂ ಸರ್ಕಾರ ಜೊತೆಗೆ ನಿಲ್ಲಲಿದೆ. ಪ್ರವಾಸೋದ್ಯಮದ ಮೂಲಕ ಜಿಲ್ಲೆಯಲ್ಲಿ ಆರ್ಥಿಕವಾಗಿ ವೇಗದ ಪ್ರಗತಿ ಸಾಧಿಸಲು ಎಲ್ಲಾ ಸಹಕಾರವನ್ನೂ ಸರ್ಕಾರ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಅಭಯ ನೀಡಿದರು.

ಸಚಿವರಾದ ಹೆಚ್.ಕೆ.ಪಾಟೀಲ್, ಕೆ.ವೆಂಕಟೇಶ್, ಶಿವರಾಜ ತಂಗಡಗಿ, ಶಾಸಕರಾದ ಹನೂರು ಮಂಜುನಾಥ್, ಪುಟ್ಟರಂಗಶೆಟ್ಟಿ, ಗಣೇಶ್ ಪ್ರಸಾದ್, ಸಂಸದರಾದ ಸುನಿಲ್ ಬೋಸ್, ವಿಧಾನ‌ ಪರಿಷತ್ ಸದಸ್ಯರಾದ ಡಾ. ತಿಮ್ಮಯ್ಯ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿದ್ದರು.

ಇದನ್ನೂ ಓದಿ: ರಾಜ್ಯದ ಉದ್ದಗಲಕ್ಕೂ ಓಡಾಡಿ ನಿಮ್ಮನ್ನು ಮನೆಗೆ ಕಳುಹಿಸೋವರೆಗೂ ನಾನು ಮನೆ ಸೇರಲ್ಲ: ಕೈ ನಾಯಕರ ವಿರುದ್ಧ ಬಿಎಸ್​ವೈ ಗುಡುಗು - B S Yediyurappa

ETV Bharat Logo

Copyright © 2024 Ushodaya Enterprises Pvt. Ltd., All Rights Reserved.