ETV Bharat / state

ಸರ್ಕಾರಿ ನೌಕರರ ವೇತನ - ಪಿಂಚಣಿ ಪರಿಷ್ಕರಣೆ, ₹ 20,208 ಕೋಟಿ ಹೆಚ್ಚುವರಿ ವೆಚ್ಚ: ಸಿಎಂ ಮಾಹಿತಿ - 7TH STATE PAY COMMISSION - 7TH STATE PAY COMMISSION

7ನೇ ರಾಜ್ಯ ವೇತನ ಆಯೋಗ ಶಿಫಾರಸು ಜಾರಿಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ನೌಕರರ ವೇತನ ಪರಿಷ್ಕರಣೆಯಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕ 20,208 ಕೋಟಿ ರೂ.ಗಳಷ್ಟು ಹೆಚ್ಚುವರಿ ವೆಚ್ಚ ಉಂಟಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ (ETV)
author img

By ETV Bharat Karnataka Team

Published : Jul 16, 2024, 2:03 PM IST

ಬೆಂಗಳೂರು: 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಪಿಂಚಣಿ ಪರಿಷ್ಕರಣೆ ಕುರಿತು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದರು. ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆ, ಪಿಂಚಣಿ ಪರಿಷ್ಕರಣೆಯ ಬೇಡಿಕೆಗಳನ್ನು ಪರಿಷ್ಕರಿಸಲು 19.11.2022ರಂದು 7ನೇ ರಾಜ್ಯ ವೇತನ ಆಯೋಗವನ್ನು ರಚಿಸಲಾಗಿತ್ತು. ಅದರಂತೆ, ವೇತನ ಆಯೋಗವು 24.03.2024ರಂದು ವರದಿಯನ್ನು ಸಲ್ಲಿಸಿರುತ್ತದೆ ಎಂದರು.

7ನೇ ರಾಜ್ಯ ವೇತನ ಆಯೋಗದ ಶಿಫಾರಸಿನಂತೆ ಸರ್ಕಾರಿ ನೌಕರರ ವೇತನ, ವೇತನ ಸಂಬಂಧಿತ ಭತ್ಯೆ, ಪಿಂಚಣಿಯನ್ನು ದಿನಾಂಕ 01.07.2022ರಿಂದ ಅನ್ವಯವಾಗುವಂತೆ ಪರಿಷ್ಕರಿಸಿ, ದಿನಾಂಕ 01.08.2024ರಿಂದ ಅನುಷ್ಠಾನಗೊಳಿಸಲು ಸೋಮವಾರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿರುತ್ತದೆ. ಅದರಂತೆ, ದಿನಾಂಕ 01.07.2022ಕ್ಕೆ ನೌಕರರ ಮೂಲ ವೇತನಕ್ಕೆ ಶೇಕಡಾ 31ರಷ್ಟು ತುಟ್ಟಿ ಭತ್ಯೆ ಮತ್ತು ಶೇ.27.50ರಷ್ಟು ಫಿಟ್‌ಮೆಂಟ್ ಸೇರಿಸಿ ವೇತನ ಮತ್ತು ಪಿಂಚಣಿ ಪರಿಷ್ಕರಿಸಲಾಗುವುದು. ಇದರಿಂದ ನೌಕರರ ಮೂಲ ವೇತನ ಮತ್ತು ಪಿಂಚಣಿಯಲ್ಲಿ ಶೇ.58.50ರಷ್ಟು ಹೆಚ್ಚಳವಾಗುತ್ತದೆ. ಮನೆಬಾಡಿಗೆ ಭತ್ಯೆಯಲ್ಲಿ ಶೇ. 32ರಷ್ಟು ಹೆಚ್ಚಳವಾಗುತ್ತದೆ ಎಂದು ಸಿಎಂ ವಿವರಿಸಿದರು.

ನೌಕರರ ಕನಿಷ್ಠ ಮೂಲ ವೇತನವು 17,000 ರಿಂದ 27,000ಕ್ಕೆ, ಗರಿಷ್ಠ ವೇತನವು 1,50,600 ರಿಂದ 2.41,200 ರೂ.ಗಳಿಗೆ ಪರಿಷ್ಕರಣೆಯಾಗುತ್ತದೆ. ನೌಕರರ ಕನಿಷ್ಠ ಪಿಂಚಣಿಯು 8,500 ರಿಂದ 13,500ಕ್ಕೆ ಮತ್ತು ಗರಿಷ್ಠ ಪಿಂಚಣಿಯು 75,300 ರಿಂದ 1,20,600 ರೂ.ಗಳಿಗೆ ಪರಿಷ್ಕರಣೆಗೊಳ್ಳುತ್ತದೆ. ಈ ಪರಿಷ್ಕರಣೆಯು, ಅನುದಾನಿತ ಶಿಕ್ಷಣ ಸಂಸ್ಥೆ ಮತ್ತು ಸ್ಥಳೀಯ ಸಂಸ್ಥೆಗಳ ನೌಕರರು, ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೆ ಅನ್ವಯವಾಗುತ್ತದೆ ಎಂದು ತಿಳಿಸಿದರು.

ನೌಕರರ ವೇತನ ಪರಿಷ್ಕರಣೆಯಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕ 20,208 ಕೋಟಿ ರೂ.ಗಳಷ್ಟು ಹೆಚ್ಚುವರಿ ವೆಚ್ಚ ಉಂಟಾಗುತ್ತದೆ. ಈ ಹೆಚ್ಚುವರಿ ವೆಚ್ಚಕ್ಕೆ 2024-25ರ ಆಯವ್ಯಯದಲ್ಲಿ ಅಗತ್ಯ ಅನುದಾನವನ್ನು ಮೀಸಲಿಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: 7ನೇ ವೇತನ ಆಯೋಗದ ವರದಿ ಜಾರಿಗೆ ಸಂಪುಟ ಸಭೆ ಅಸ್ತು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.