ETV Bharat / state

ಅನರ್ಹರ ಬಿಪಿಎಲ್ ಕಾರ್ಡು ರದ್ದು ಮಾಡಿ, ಆದರೆ ಅರ್ಹರ ಕಾರ್ಡು ರದ್ದಾಗಬಾರದು: ಸಿಎಂ ಸೂಚನೆ - BPL RATION CARDS

ಅನರ್ಹರ ಬಿಪಿಎಲ್ ಕಾರ್ಡು ರದ್ದು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಿಎಂ ಸಭೆ
ಸಿಎಂ ಸಭೆ (ETV Bharat)
author img

By ETV Bharat Karnataka Team

Published : 8 hours ago

ಬೆಂಗಳೂರು: ಅನರ್ಹ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದು ಮಾಡಿ, ಆದರೆ ಅರ್ಹ ಬಿಪಿಎಲ್ ಕಾರ್ಡುದಾರರ ಹೆಸರು ರದ್ದು ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗುರುವಾರ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ಸೂಚನೆ ನೀಡಿದರು. ಕೇಂದ್ರ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳನ್ನು ಪೂರೈಸದ, ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಹಂತ ಹಂತವಾಗಿ ತೆಗೆದು ಹಾಕಬೇಕು. ಆದರೆ ಒಬ್ಬನೇ ಒಬ್ಬ ಅರ್ಹ ಬಿಪಿಎಲ್‌ ಕಾರ್ಡುದಾರನ ಬಿಪಿಎಲ್‌ ಕಾರ್ಡ್‌ ರದ್ದು ಮಾಡಬಾರದು. ಅನರ್ಹ ಬಿಪಿಎಲ್‌ ಪಡಿತರ ಚೀಟಿದಾರರು ಸ್ವಯಂ ತಮ್ಮ ಬಿಪಿಎಲ್‌ ಕಾರ್ಡ್‌ಗಳನ್ನು ಹಿಂತಿರುಗಿಸಲು ಕಾಲಾವಕಾಶ ನೀಡಬೇಕು, ಆ ಬಳಿಕ ಅಂತವರಿಗೆ ನೋಟಿಸ್‌ ನೀಡಿ ಕಾರ್ಡುಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಹೇಳಿದರು.

ಈಗಾಗಲೇ 4ಸಾವಿರ ಸರ್ಕಾರಿ ನೌಕರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಯಡಿ ರೂ.4692 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಅಕ್ಟೋಬರ್‌ ಅಂತ್ಯದವರೆಗೆ ರೂ. 3253 ಕೋಟಿ ವೆಚ್ಚ ಮಾಡಲಾಗಿದೆ. ಪಡಿತರ ಹಾಗೂ ಆಹಾರ ಧಾನ್ಯ ವಿತರಣಾ ವ್ಯವಸ್ಥೆಯನ್ನು ತಳಹಂತದಲ್ಲಿ ಬಲಪಡಿಸುವ ಮೂಲಕ ಜಾಗೃತಿ ಸಮಿತಿಗಳಲ್ಲಿ ಜನರ ಸಹಭಾಗಿತ್ವವನ್ನು ಹೆಚ್ಚಿಸಬೇಕು. ಸಮಿತಿ ನಿಯಮಿತವಾಗಿ ಸಭೆ ನಡೆಸುವುದನ್ನು ಖಾತ್ರಿಪಡಿಸಬೇಕು ಎಂದು ಸಿಎಂ ಸೂಚಿಸಿದರು.

ರಾಜ್ಯದಲ್ಲಿ ಒಟ್ಟು 4518 ಪೆಟ್ರೋಲ್‌ ಬಂಕ್‌ಗಳಿದ್ದು, ಡಿಸೆಂಬರ್‌ ಅಂತ್ಯದವರೆಗೆ 503 ಪೆಟ್ರೋಲ್‌ ಬಂಕ್‌ಗಳ ತಪಾಸಣೆ ಮಾಡಲಾಗಿದೆ. ಪೆಟ್ರೋಲ್‌ ಬಂಕ್‌ಗಳ ತಪಾಸಣೆಯನ್ನು ಹೆಚ್ಚಿಸಿ ಅಳತೆ ಮತ್ತು ಗುಣಮಟ್ಟದಲ್ಲಿ ಮೋಸದಂತಹ ಅಕ್ರಮಗಳಿಗೆ ಸಂಪೂರ್ಣ ಕಡಿವಾಣ ಹಾಕಬೇಕು. ಕನಿಷ್ಠ ಬೆಂಬಲ ಬೆಲೆ ಅಡಿ ಆಹಾರ ಧಾನ್ಯ ಸಂಗ್ರಹಿಸಲು ಎಲ್ಲಾ ವ್ಯವಸ್ಥೆ ಮಾಡಬೇಕು. ರೈತರಿಗೆ ಸಮಸ್ಯೆಯಾಗದಂತೆ ತ್ವರಿತವಾಗಿ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ರಾಜ್ಯದಲ್ಲಿ 1,53,69,945 ಪಡಿತರ ಚೀಟಿಗಳಿದ್ದು, 5,30,88,636 ಸದಸ್ಯ ಫಲಾನುಭವಿಗಳಿದ್ದಾರೆ. ಇಲಾಖೆಯಲ್ಲಿ ಒಟ್ಟು 709 ಹುದ್ದೆಗಳು ಖಾಲಿಯಿವೆ. ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆಯಡಿ ಕರ್ನಾಟಕದಲ್ಲಿ ಬೇರೆ ರಾಜ್ಯಗಳ 13,383 ಫಲಾನುಭವಿಗಳು ಪಡಿತರ ಸೌಲಭ್ಯ ಪಡೆಯುತ್ತಿದ್ದಾರೆ. ಕುಟುಂಬದಲ್ಲಿ ಒಬ್ಬರೇ ಇರುವ, 80 ವರ್ಷ ದಾಟಿದವರಿಗೆ ಮನೆ ಬಾಗಿಲಿಗೆ ಆಹಾರ ಧಾನ್ಯ ಒದಗಿಸುವ ಅನ್ನ-ಸುವಿಧಾ ಯೋಜನೆಯನ್ನು ಜಾರಿಗೊಳಿಸಲಾಗಿದೆ. 8,500 ಪಡಿತರ ಚೀಟಿದಾರರು ಯೋಜನೆಯಡಿ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಸಿಎಂ ಮಾಹಿತಿ ನೀಡಿದರು. ಸಭೆಯಲ್ಲಿ ಸಚಿವ ಕೆ ಹೆಚ್​ ಮುನಿಯಪ್ಪ ಮತ್ತು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ಶರಣಾಗತರಾದ ನಕ್ಸಲರಿಗೆ ನ್ಯಾಯಾಂಗ ಬಂಧನ : ಮುಂದಿನ ಕ್ರಮಗಳೇನು?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.