ETV Bharat / state

ಕೆಪಿಎಸ್​​ಸಿ ಪೂರ್ವಭಾವಿ ಪರೀಕ್ಷೆ ಗೊಂದಲ: ಮರುಪರೀಕ್ಷೆ ನಡೆಸಲು ಸಿಎಂ ಸೂಚನೆ - KPSC EXAM ISSUE

author img

By ETV Bharat Karnataka Team

Published : Sep 2, 2024, 1:27 PM IST

ಆಗಸ್ಟ್​ 27ರಂದು ನಡೆದ ಕೆಪಿಎಸ್​ಸಿ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆಪತ್ರಿಕೆಗಳು ಗೊಂದಲದಿಂದ ಕೂಡಿದ್ದ ಹಿನ್ನೆಲೆಯಲ್ಲಿ ಮರುಪರೀಕ್ಷೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

KPSC exam
ಮುಖ್ಯಮಂತ್ರಿ ಸಿದ್ದರಾಮಯ್ಯ (ETV Bharat)

ಬೆಂಗಳೂರು: ಇತ್ತೀಚೆಗೆ ನಡೆದ ಕರ್ನಾಟಕ ಲೋಕ ಸೇವಾ ಆಯೋಗದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಹುದ್ದೆ ಪರೀಕ್ಷೆಯಲ್ಲಿನ ಎಡವಟ್ಟುಗಳ ಹಿನ್ನೆಲೆಯಲ್ಲಿ ಮರುಪರೀಕ್ಷೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ Xನಲ್ಲಿ ಪೋಸ್ಟ್ ಮಾಡಿರುವ ಸಿಎಂ, ''ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದಿದೆ. ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ'' ಎಂದಿದ್ದಾರೆ.‌

ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‍ಸಿ) 384 ಗೆಜೆಟೆಡ್ ಪ್ರೊಬೆಷನರಿ (ಕೆಎಎಸ್) ಹುದ್ದೆಗಳಿಗೆ ಆಗಸ್ಟ್​ 27ರಂದು ನಡೆಸಿದ್ದ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆಪತ್ರಿಕೆಗಳು ಗೊಂದಲದಿಂದ ಕೂಡಿದ್ದರಿಂದ ಕೆಪಿಎಸ್‍ಸಿ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಪೂರ್ವಭಾವಿ ಪರೀಕ್ಷೆಯಲ್ಲಿ ಎರಡು ಪ್ರಶ್ನೆಪತ್ರಿಕೆಗಳಿದ್ದು, ಪ್ರಶ್ನೆ ಪತ್ರಿಕೆಗಳಲ್ಲಿ ಹಲವಾರು ತಪ್ಪುಗಳಿವೆ. ಕೆಲವು ಪ್ರಶ್ನೆಗಳು ಇಂಗ್ಲಿಷ್ ಮತ್ತು ಕನ್ನಡ ಭಾಷೆಗೆ ತದ್ವಿರುದ್ಧವಾಗಿವೆ. ಕೆಲವು ಪ್ರಶ್ನೆಗಳು ಅಭ್ಯರ್ಥಿಗಳಿಗೆ ಅರ್ಥವಾಗದ ರೀತಿಯಲ್ಲಿ ಉತ್ತರ ಆಯ್ಕೆಗಳನ್ನು ನೀಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕಿಸಲಾಗಿತ್ತು.

ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿವೆ ಎಂದು ಆಕ್ಷೇಪಗಳು ವ್ಯಕ್ತವಾಗಿವೆ. ಈ ಸಂಬಂಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆಗೂ ಮುಂದಾಗಿವೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ಸಿದ್ದರಾಮಯ್ಯ ಇದೀಗ ಮರು ಪರೀಕ್ಷೆ ನಡೆಸುವಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಕಾನೂನಾತ್ಮಕವಾಗಿ ಎಲ್ಲದಕ್ಕೂ ತಾರ್ಕಿಕ ಅಂತ್ಯ, ಬಿಜೆಪಿಯವರಿಗೆ ಅನುಮಾನ ಬೇಡ: ಪ್ರಿಯಾಂಕ್​ ಖರ್ಗೆ - Covid Scam Report

ETV Bharat Logo

Copyright © 2024 Ushodaya Enterprises Pvt. Ltd., All Rights Reserved.