ETV Bharat / state

ಗುಡ್‌ನ್ಯೂಸ್‌! 34,863 ಖಾಲಿ ಹುದ್ದೆಗಳನ್ನು ಕಾಲ ಮಿತಿಯಲ್ಲಿ ತುಂಬಲು ಸಿಎಂ ಸೂಚನೆ

ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳಿಗೆ ಕಾಲಮಿತಿ ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

CM NOTICE ON RECRUITMENT
ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (IANS)
author img

By ETV Bharat Karnataka Team

Published : Oct 7, 2024, 8:04 PM IST

Updated : Oct 7, 2024, 8:32 PM IST

ಬೆಂಗಳೂರು: ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇಂದು ಕೃಷ್ಣಾದಲ್ಲಿ ಸಿಎಂ, ಸರ್ಕಾರದ ಹಂತದಲ್ಲಿ ವಿವಿಧ ಇಲಾಖೆಗಳ ನೇಮಕಾತಿಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು. ಈ ವೇಳೆ ನೇಮಕಾತಿ ಪ್ರಕ್ರಿಯೆಯಲ್ಲಿ ಸುಧಾರಣೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ಕಳೆದ ವಾರ ಎಲ್ಲ ನೇಮಕಾತಿ ಪ್ರಾಧಿಕಾರಗಳ ಸಭೆ ನಡೆಸಲಾಗಿದೆ. ಸಭೆಯಲ್ಲಿ ಕೈಗೊಂಡಿರುವ ಶಿಫಾರಸುಗಳನ್ನು ಪರಿಶೀಲಿಸಿ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಲು ಸೂಚನೆ ನೀಡಿದರು.

ಯುಪಿಎಸ್ಸಿಯಲ್ಲಿ ಕೇವಲ ಗ್ರೂಪ್‌ ಎ ಮತ್ತು ಗ್ರೂಪ್‌ ಬಿ ಹುದ್ದೆಗಳನ್ನು ಮಾಡಲು ನೇಮಕಾತಿ ಮಾಡಲಾಗುತ್ತಿದೆ. ಇದೇ ರೀತಿ ಕೆಪಿಎಸ್‌ಸಿ ಕೇವಲ ಗ್ರೂಪ್‌ ಎ ಮತ್ತು ಬಿ ಮಾತ್ರ ನೇಮಕಾತಿ ಪ್ರಕ್ರಿಯೆ ನಡೆಸಿ, ಗ್ರೂಪ್‌ ಸಿಯಂತಹ ಬೇರೆ ನೇಮಕಾತಿಗಳನ್ನು ಕೆಇಎ ಮಾಡುವ ಕುರಿತು ಚರ್ಚೆ ನಡೆಸಲಾಗಿದೆ.

371ಜೆ ಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು 2023ರಲ್ಲಿ ಹೊರಡಿಸಿರುವ ಸುತ್ತೋಲೆಯನ್ನು ಅನುಸರಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸೂಚನೆ ನೀಡಿದರು.

ಖಾಲಿ ಹುದ್ದೆ ನೇಮಕಾತಿಗೆ ಕಾಲಮಿತಿ: ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಅಗತ್ಯ ಸೇವೆಗಳ ಇಲಾಖೆಗಳಲ್ಲಿ ನೇಮಕಾತಿಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿ ಸೂಚಿಸಿದರು.

ನೇಮಕಾತಿ ಕ್ಯಾಲೆಂಡರ್:‌ ನೇಮಕಾತಿ ಕುರಿತಾಗಿ ವಾರ್ಷಿಕ ಕ್ಯಾಲೆಂಡರ್‌ ಸಿದ್ಧಪಡಿಸಲು ಇರುವ ತೊಡಕುಗಳನ್ನು ನಿವಾರಿಸಬೇಕು. ಆರ್ಥಿಕ ವರ್ಷದ ಆರಂಭದಲ್ಲಿ ಆಯಾ ಇಲಾಖೆಗಳು ನೇಮಕಾತಿಗೆ ಖಾಲಿಯಿರುವ ಹುದ್ದೆಗಳ ಕುರಿತು ಹಣಕಾಸು ಇಲಾಖೆಗೆ ಪ್ರಸ್ತಾವನೆ ಕಳುಹಿಸಬೇಕು. ಕಾಲಮಿತಿಯೊಳಗಾಗಿ ಹಣಕಾಸು ಇಲಾಖೆಯಿಂದ ಅನುಮೋದನೆ ಪಡೆದುಕೊಂಡು ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವ ಕುರಿತಾಗಿ ಏಕರೀತಿಯ ಕ್ಯಾಲೆಂಡರ್‌ ಸಿದ್ಧಪಡಿಸಬೇಕು ಎಂದು ಹೇಳಿದರು.

ಕೇರಳ ಮಾದರಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸುವ ಕುರಿತು ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ಮುಖ್ಯಮಂತ್ರಿ ಸೂಚನೆ ನೀಡಿದರು. ಪಿಎಸ್‌ಐ ನೇಮಕಾತಿಯಲ್ಲಿ ದೈಹಿಕ ಪರೀಕ್ಷೆಯನ್ನು ಮೊದಲು ನಡೆಸಲಾಗುತ್ತಿದ್ದು, ಅಬಕಾರಿ ಇಲಾಖೆ ನೇಮಕಾತಿಯಲ್ಲಿ ಲಿಖಿತ ಪರೀಕ್ಷೆಯನ್ನು ಮೊದಲು ಮಾಡಲಾಗುತ್ತದೆ. ಅಬಕಾರಿ ಇಲಾಖೆ ಮಾದರಿಯನ್ನು ಪಿಎಸ್‌ಐ ನೇಮಕಾತಿಯಲ್ಲೂ ಅನುಸರಿಸುವ ಕುರಿತು ಪರಿಶೀಲನೆ ನಡೆಸಲು ತಿಳಿಸಿದರು.

ರಾಜ್ಯದಲ್ಲಿ 41 ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿಯಾಗದ ಕಾರಣ ನೇಮಕಾತಿ ವಿಳಂಬವಾಗುತ್ತಿದೆ. ಕೆಲವು ಇಲಾಖೆಗಳಲ್ಲಿ ಹಲವು ದಶಕಗಳಿಂದ ಸಿ ಆ್ಯಂಡ್‌ ಆರ್‌ ತಿದ್ದುಪಡಿಯಾಗಲಿಲ್ಲ. ಈ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳಿಗೆ ಅನುಕೂಲವಾಗುವಂತೆ ಮಾದರಿ ಸಿ ಆ್ಯಂಡ್‌ ಆರ್‌ ಸಿದ್ಧಪಡಿಸಲು ಸಿಎಂ ನಿರ್ದೇಶನ ನೀಡಿದರು.

ಇದನ್ನೂ ಓದಿ: ಯುಜಿ ಮೆಡಿಕಲ್–2024: ಮಾಪ್ ಅಪ್ ಸುತ್ತಿಗೆ 596 ವೈದ್ಯಕೀಯ ಸೀಟು ಲಭ್ಯ - UG Medical Mop Up Round

Last Updated : Oct 7, 2024, 8:32 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.