ETV Bharat / state

ಕುವೈತ್ ಅಗ್ನಿ ದುರಂತ: ಮೃತ ವಿಜಯ ಕುಮಾರ್ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ ನೀಡಲು ಸಿಎಂ ಸೂಚನೆ - CM COMPENSATION

author img

By ETV Bharat Karnataka Team

Published : Jun 18, 2024, 6:25 PM IST

ಇತ್ತೀಚಿಗೆ ನಡೆದಿದ್ದ ಕುವೈತ್ ಅಗ್ನಿ ದುರಂತದಲ್ಲಿ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸರಸಂಬ ಗ್ರಾಮದ ವಿಜಯ ಕುಮಾರ್ ಮೃತಪಟ್ಟಿದ್ದರು. ಇದೀಗ ಅವರ ಅವಲಂಬಿತ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಐದು ಲಕ್ಷ ರೂ.ಗಳ ಪರಿಹಾರವನ್ನು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಮೃತ ವಿಜಯ ಕುಮಾರ್ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಲು ಸಿಎಂ ಸೂಚನೆ
ಮೃತ ವಿಜಯ ಕುಮಾರ್ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಲು ಸಿಎಂ ಸೂಚನೆ (ETV Bharat)

ಬೆಂಗಳೂರು: ಕುವೈತ್ ಅಗ್ನಿ ದುರಂತದಲ್ಲಿ ಸಾವಿಗೀಡಾಗಿರುವ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸರಸಂಬ ಗ್ರಾಮದ ವಿಜಯ ಕುಮಾರ್ ಬಿನ್ ಕೊಬ್ಬಣ್ಣ ಪ್ರಸನ್ನ ಅವರ ಅವಲಂಬಿತ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಐದು ಲಕ್ಷ ರೂ.ಗಳ ಪರಿಹಾರವನ್ನು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಕಳೆದ ಎಂಟು ವರ್ಷಗಳಿಂದ ವಾಹನ ಚಾಲಕರಾಗಿ ಕುವೈತ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅನಿವಾಸಿ ಭಾರತೀಯ ವಿಜಯ ಕುಮಾರ್ ಅವರ ಕುಟುಂಬದಲ್ಲಿ ಅವರ ಅಣ್ಣ, ತಮ್ಮಂದಿರುವ ಸೇರಿದಂತೆ 8 ಜನ ಅವಲಂಬಿತರಿದ್ದಾರೆ. ಇವರ ಜೀವನ ನಿರ್ವಹಣೆ ದುಸ್ತರವಾಗುವುದರಿಂದ ಕೇರಳ ಸರ್ಕಾರ ಅಗ್ನಿ ದುರಂತದಲ್ಲಿ ಮೃತಪಟ್ಟವರ ಕುಟಂಬಕ್ಕೆ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿರುವಂತೆಯೇ ರಾಜ್ಯ ಸರ್ಕಾರವೂ ಆರ್ಥಿಕ ನೆರವು ಘೋಷಿಸಬೇಕೆಂದು ರಾಜ್ಯ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ ಆರತಿ ಕೃಷ್ಣ ಅವರ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಸಿಎಂ ಮೃತ ವಿಜಯಕುಮಾರ್ ಕುಟುಂಬಕ್ಕೆ ಐದು ಲಕ್ಷ ರೂ.ಗಳ ಪರಿಹಾರವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒದಗಿಸಲು ಸೂಚಿಸಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಕುವೈತ್​ ಅಗ್ನಿ ದುರಂತದಲ್ಲಿ ಕೊನೆಯುಸಿರೆಳೆದ ವಿಜಯಕುಮಾರ್ ಅಂತ್ಯಕ್ರಿಯೆ - Kuwait Fire Accident

ETV Bharat Logo

Copyright © 2024 Ushodaya Enterprises Pvt. Ltd., All Rights Reserved.