ETV Bharat / state

ಮೈಸೂರು ಚಿತ್ರನಗರಿಗೆ 110 ಎಕರೆ ಕೆಐಎಡಿಬಿ ಭೂಮಿ ಹಸ್ತಾಂತರಿಸಲು ಸಿಎಂ ಸೂಚನೆ - Mysuru Film city - MYSURU FILM CITY

ಮೈಸೂರಿನ ಇಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಕೆಲವು ಸೂಚನೆಗಳನ್ನು ನೀಡಿದ್ದಾರೆ. ಈಗಾಗಲೇ ಗುರುತಿಸಲಾದ 110 ಎಕರೆ ಕೆಐಎಡಿಬಿ ಭೂಮಿ ಹಸ್ತಾಂತರಿಸಿ ಆದೇಶ ಹೊರಡಿಸುವಂತೆ ಸೂಚಿಸಿದರು.

mysuru film city
ಸಿಎಂ ಸಭೆ (CM X Post)
author img

By ETV Bharat Karnataka Team

Published : Sep 18, 2024, 7:55 PM IST

ಬೆಂಗಳೂರು: ಮೈಸೂರು ಜಿಲ್ಲೆಯ ಹಿಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಗುರುತಿಸಲಾಗಿರುವ 110 ಎಕರೆ ಕೆಐಎಡಿಬಿ ಭೂಮಿ ಹಸ್ತಾಂತರಿಸಿ ಆದೇಶ ಹೊರಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಮೈಸೂರು ಜಿಲ್ಲೆಯ ಹಿಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಿಸುವ ಕುರಿತು ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಈ ವೇಳೆ ಈಗಾಗಲೇ ಗುರುತಿಸಲಾಗಿರುವ 110 ಎಕರೆ ಕೆಐಎಡಿಬಿ ಭೂಮಿ ಹಸ್ತಾಂತರಿಸಿ ಆದೇಶ ಹೊರಡಿಸಬೇಕು. ಇದರೊಂದಿಗೆ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತರಣೆಗೆ 50 ಎಕರೆ ಗುರುತಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಟೆಂಡರ್‌ ಕರೆಯಲು ಸೂಚನೆ: ಮೊದಲ ಹಂತದ ಯೋಜನೆಯನ್ನು ಕೂಡಲೇ ಪ್ರಾರಂಭಿಸಬೇಕು. 2015-16ರಲ್ಲಿ ಆಯವ್ಯಯದಲ್ಲಿ ಇದರ ಘೋಷಣೆ ಮಾಡಲಾಗಿತ್ತು. ಆದರೆ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಪಿಪಿಪಿ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಟ್ರಾನ್ಸಾಕ್ಷನ್‌ ಅಡ್ವೈಸರ್‌ ನೇಮಕ ಮಾಡಲು ಟೆಂಡರ್‌ ಕರೆಯುವಂತೆ ಸಿಎಂ ಹೇಳಿದರು.

ಅತ್ಯಾಧುನಿಕ ಚಿತ್ರನಗರಿ ನಿರ್ಮಿಸಬೇಕು: ಭೂಮಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಹಸ್ತಾಂತರ ಮಾಡಿದ ನಂತರ ಪಿಪಿಪಿ ಮಾದರಿಯಲ್ಲಿ ಎಕ್ಸ್‌ಪ್ರೆಷನ್‌ ಆಫ್‌ ಇಂಟರೆಸ್ಟ್ ಕರೆಯಲು ಕ್ರಮ ಕೈಗೊಳ್ಳಬೇಕು. ಇಂದಿನ ಚಿತ್ರರಂಗಕ್ಕೆ ಅಗತ್ಯವಿರುವ ತಂತ್ರಜ್ಞಾನಗಳನ್ನೊಳಗೊಂಡ ಅತ್ಯಾಧುನಿಕ ಮಾದರಿಯ ಚಿತ್ರನಗರಿ ನಿರ್ಮಿಸಬೇಕು. ಚಿತ್ರನಗರಿಯಲ್ಲಿ ಥಿಯೇಟರ್‌, ಸ್ಟುಡಿಯೋ, ಮಲ್ಟಿಪ್ಲೆಕ್ಸ್‌, ಥೀಮ್‌ ಪಾರ್ಕ್‌, ಹೋಟೆಲ್‌ಗಳನ್ನೂ ನಿರ್ಮಾಣ ಮಾಡಬೇಕು. ಟ್ರಾನ್ಸಾಕ್ಷನ್‌ ಅಡ್ವೈಸರ್‌ ನೇಮಕವಾದ ನಂತರ ಚಿತ್ರರಂಗದ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿ, ಚಿತ್ರನಗರಿಯ ರೂಪುರೇಷೆಗಳನ್ನು ಅಂತಿಮಗೊಳಿಸಿ ಎಂದು ಸಿಎಂ ತಿಳಿಸಿದರು.

ಚಿತ್ರನಗರಿ ನಿರ್ಮಾಣದಿಂದ ಪ್ರವಾಸೋದ್ಯಮಕ್ಕೂ ಹೆಚ್ಚಿನ ಉತ್ತೇಜನ ದೊರೆಯಬೇಕು. ಹೊಸ ಪ್ರವಾಸೋದ್ಯಮ ನೀತಿಯಲ್ಲಿ ಚಿತ್ರ ಪ್ರವಾಸೋದ್ಯಮಕ್ಕೆ (Film Tourism) ಒತ್ತು ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್‌, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್‌, ಮುಖ್ಯಮಂತ್ರಿಯವರ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕ್‌ ಚಂದ್ರ, ಆಯುಕ್ತ ಹೇಮಂತ್‌ ಎಂ. ನಿಂಬಾಳ್ಕರ್‌ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಇದನ್ನೂ ಓದಿ: ಡ್ರಗ್ ಜಾಲದ ಬೇರು ಕತ್ತರಿಸಲು ತೀರ್ಮಾನ, ಗೃಹ ಸಚಿವರ ನೇತೃತ್ವದಲ್ಲಿ ಕಾರ್ಯಪಡೆ: ಸಿಎಂ - Task Force To Control Drugs

ETV Bharat Logo

Copyright © 2025 Ushodaya Enterprises Pvt. Ltd., All Rights Reserved.