ETV Bharat / state

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆ ಕಾಮಗಾರಿಗಳ ಕ್ರಿಯಾ ಯೋಜನೆ ಸಿದ್ಧಪಡಿಸಲು ಸಿಎಂ ಸೂಚನೆ - Action Plan For KKRD

author img

By ETV Bharat Karnataka Team

Published : Jun 14, 2024, 5:51 PM IST

ಸಿಎಂ ಸಿದ್ದರಾಮಯ್ಯ ಅವರಿಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ (ETV Bharat)

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಕಾಮಗಾರಿಗಳ ಕ್ರಿಯಾ ಯೋಜನೆಯನ್ನು ಕೂಡಲೇ ಸಿದ್ಧಪಡಿಸಲು ಸಿಎಂ ಸಿದ್ದರಾಮಯ್ಯ ಸೂಚಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ, ಚುನಾವಣಾ ಪ್ರಣಾಳಿಕೆಯಲ್ಲಿ ಹಾಗೂ ಆಯವ್ಯಯದಲ್ಲಿ ವರ್ಷಕ್ಕೆ 5,000 ಕೋಟಿ ರೂ. ಒದಗಿಸುವ ಭರವಸೆ ನೀಡಲಾಗಿದೆ. ಈ ಮೊತ್ತವನ್ನು ವೆಚ್ಚ ಮಾಡಲು ಅನುವಾಗುವಂತೆ ಜುಲೈ 15 ರೊಳಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸೂಚಿಸಿ, ಈಗ ಅನುಮೋದನೆಯಾದ ಟೆಂಡರ್‌ ಕರೆಯದೆ ಇರುವ ಕಾಮಗಾರಿಗಳಿಗೆ ಕೂಡಲೇ ಟೆಂಡರ್‌ ಕರೆಯಬೇಕು. ಕಾಮಗಾರಿಗಳ ಮೌಲ್ಯಮಾಪನ ಮಾಡಬೇಕು ಎಂದರು.

ಒಟ್ಟು 14,228 ಕೋಟಿ ಅನುದಾನದಲ್ಲಿ 10,342.90 ಕೋಟಿ ವೆಚ್ಚವಾಗಿದೆ. 2,885.90 ಕೋಟಿ ಉಳಿದಿದೆ. ಬಾಕಿ ಉಳಿದ ಕಾಮಗಾರಿಗಳ ಕುರಿತು ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸಿ, ಅನುಷ್ಠಾನಕ್ಕೆ ಇರುವ ತೊಡಕುಗಳನ್ನು ನಿವಾರಿಸಬೇಕು. ಬಾಕಿ ಉಳಿದಿರುವ 3,528 ಕಾಮಗಾರಿಗಳನ್ನು ಜುಲೈ ಅಂತ್ಯದೊಳಗೆ ಪ್ರಾರಂಭಿಸಬೇಕು. ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಸೃಜನೆಗೆ ಹೆಚ್ಚು ಒತ್ತು ನೀಡಬೇಕು. ಎರಡು ವರ್ಷಗಳನ್ನು ಶೈಕ್ಷಣಿಕ ವರ್ಷ ಎಂದು ಘೋಷಿಸಿ, ಶೇ.25 ರಷ್ಟು ಅನುದಾನ ವೆಚ್ಚ ಮಾಡಲು ತೀರ್ಮಾನಿಸಲಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬೇಡಿಕೆ ಇದ್ದು, ಇದಕ್ಕೆ ಒತ್ತು ನೀಡಲು ತೀರ್ಮಾನಿಸಲಾಯಿತು ಎಂದರು.

ನಿಗದಿತ ಮಾನದಂಡಗಳಂತೆಯೇ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದ ಅವರು, ಉನ್ನತ ಶಿಕ್ಷಣ ಕ್ಷೇತ್ರದಲ್ಲಿ 41 ಮಹಿಳಾ ಪದವಿ ಕಾಲೇಜು ಪ್ರಾರಂಭಿಸುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಲಾಗಿದೆ. ಇದನ್ನು ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಅರಣ್ಯೀಕರಕ್ಕೆ ಮತ್ತು ಶುದ್ಧ ಕುಡಿಯುವ ನೀರು, ಚೆಕ್ ಡ್ಯಾಂಗಳಿಗೆ ಆದ್ಯತೆ ನೀಡುವ ಮೂಲಕ ಅಂತರ್ಜಲ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಂಡು, ಕಾರ್ಯಕ್ರಮಗಳನ್ನು ರೂಪಿಸುವಂತೆ ತಿಳಿಸಿದರು.

ಮಾನವ ಅಭಿವೃದ್ಧಿ ಸೂಚ್ಯಂಕಗಳನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಸೂಚ್ಯಂಕದಲ್ಲಿ ಪ್ರಗತಿ ಕಾಣುವ ರೀತಿಯಲ್ಲಿ ಫಲಿತಾಂಶ ಬರುವಂತೆ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಬೇಕು. ಕಲ್ಯಾಣ ಕರ್ನಾಟಕ ಭಾಗದ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಅತ್ಯಂತ ಹಿಂದುಳಿದಿದ್ದು, ಈ ಜಿಲ್ಲೆಗಳನ್ನು ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಯಾವ ಯಾವ ಕ್ಷೇತ್ರದಲ್ಲಿ ಹಿಂದುಳಿದಿದ್ದೇವೆಯೋ ಆ ಕ್ಷೇತ್ರಗಳಿಗೆ ಒತ್ತು ನೀಡಬೇಕು. ಹಾಸ್ಟೆಲ್​ಗಳು, ಅಂಗನವಾಡಿ ಹಾಗೂ ವಸತಿ ಶಾಲೆಗಳ ಮೂಲ ಸೌಕರ್ಯಾಭಿವೃದ್ದಿಗೆ ಒತ್ತು ನೀಡಬೇಕು ಎಂದರು.

ಲಭ್ಯ ಅನುದಾನವನ್ನು ಆದ್ಯತೆಯ ಮೇರೆಗೆ ವೆಚ್ಚ ಮಾಡಬೇಕು. ರಸ್ತೆ, ಕುಡಿಯುವ ನೀರು, ನೀರಾವರಿ ಮತ್ತಿತರ ಮೂಲಸೌಕರ್ಯಗಳಿಗೆ ಒತ್ತು ನೀಡಬೇಕು. ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳ ಸ್ಥಾಪನೆಗೆ ಆಡಳಿತ ಇಲಾಖೆಗಳು ಮಂಜೂರಾತಿ ನೀಡಬೇಕು. ಸಿಎಸ್​ಆರ್ ಅಡಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳ ಅಭಿವೃದ್ಧಿಗೆ ಒತ್ತು ನೀಡಬೇಕು. ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಬೋಧಕ ಸಿಬ್ಬಂದಿ ತೀವ್ರ ಕೊರತೆ ಇದ್ದು, ಶೀಘ್ರವೇ ಹುದ್ದೆ ಭರ್ತಿಗೆ ಕ್ರಮ ವಹಿಸಬೇಕು. ಅಂಗನವಾಡಿ, ಹಾಸ್ಟೆಲ್​ಗಳು, ಶಾಲೆಗಳು, ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಕಾರ್ಯದರ್ಶಿಗಳ ನಡುವೆ ಸಮನ್ವಯ ಬೇಕು ಎಂದು ಸೂಚನೆ ನೀಡಿದರು.

ಇದನ್ನೂ ಓದಿ: ಒಕ್ಕಲಿಗ ಸಚಿವರು, ಶಾಸಕರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಔತಣಕೂಟ: ಈ ದಿಢೀರ್​ ಸಭೆ ಹಿಂದಿನ ಕಾರಣವೇನು? - DK Shivakumar dinner party

ETV Bharat Logo

Copyright © 2024 Ushodaya Enterprises Pvt. Ltd., All Rights Reserved.