ETV Bharat / state

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸಲು ಸಿಎಂ ಸಿದ್ದರಾಮಯ್ಯ ಸೂಚನೆ - Valmiki Corporation - VALMIKI CORPORATION

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವಂತೆ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ ಮತ್ತು ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದ ನಿಯೋಗ ಇಂದು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿತು.

ಸಿಎಂ ಭೇಟಿಯಾದ ಪ್ರಸನ್ನಾನಂದ ಸ್ವಾಮೀಜಿ ಮತ್ತು ನಾಯಕರು
ಸಿಎಂ ಭೇಟಿಯಾದ ಪ್ರಸನ್ನಾನಂದ ಸ್ವಾಮೀಜಿ ಮತ್ತು ನಾಯಕರು (ETV Bharat)
author img

By ETV Bharat Karnataka Team

Published : Aug 22, 2024, 9:38 PM IST

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಇಂದು ತಮ್ಮನ್ನು ಭೇಟಿ ಮಾಡಿದ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ ಮತ್ತು ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದ ಶಾಸಕರ ಮತ್ತು ಸಮುದಾಯದ ಮುಖಂಡರ ನಿಯೋಗದ ಬೇಡಿಕೆಗೆ ಸಿಎಂ ಸ್ಪಂದಿಸಿ, ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸಲು ಸ್ಥಳದಲ್ಲೇ ಅಧಿಕಾರಿಗಳಿಗೆ ಸೂಚನೆ ಕೊಟ್ಟರು.

ವಾಲ್ಮೀಕಿ ನಿಗಮಕ್ಕೆ ಈ ಹಿಂದೆ ನೀಡಲಾಗಿದ್ದ 84.63 ಕೋಟಿ ರೂ ಅನುದಾನದಲ್ಲಿ 50 ಕೋಟಿಯನ್ನು ಎಸ್​ಐಟಿ ಅಧಿಕಾರಿಗಳು ಬ್ಯಾಂಕ್ ಖಾತೆಯಲ್ಲೇ ಫ್ರೀಜ್ ಮಾಡಿದ್ದಾರೆ. ಪ್ರಕರಣದ ತನಿಖೆ ಮುಂದುವರೆದಿದ್ದು, ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಆಗಿರುವ ಸುಮಾರು 30 ಕೋಟಿಯಷ್ಟು ಹಣವನ್ನು ವಾಪಸ್ ವಶಕ್ಕೆ ಪಡೆಯುವ ಪ್ರಯತ್ನ ಮುಂದುವರೆದಿದೆ. ಸದ್ಯದಲ್ಲೇ ಪೂರ್ತಿ ಹಣವನ್ನು ವಾಪಸ್ ವಶಕ್ಕೆ ಪಡೆಯುವ ಸಾಧ್ಯತೆಗಳಿವೆ. ಅಲ್ಲಿಯವರೆಗೂ ವಾಲ್ಮೀಕಿ ಸಮುದಾಯದ ಅಭಿವೃದ್ಧಿ ಕೆಲಸಗಳಿಗೆ ತೊಂದರೆ ಆಗಬಾರದು ಎನ್ನುವ ಉದ್ದೇಶದಿಂದ ನಿಗಮಕ್ಕೆ ತಕ್ಷಣವೇ ಹೆಚ್ಚುವರಿ ಅನುದಾನ ಬಿಡುಗಡೆಗೆ ಸಿಎಂ ಸೂಚನೆ ನೀಡಿದರು.

ಪ್ರಕರಣ ಪೂರ್ತಿ ಇತ್ಯರ್ಥವಾಗುವವರೆಗೂ ನಿಗಮದ ಮತ್ತು ಸಮುದಾಯದ ಕೆಲಸಗಳಿಗೆ ತೊಂದರೆ ಆಗಬಾರದೆನ್ನುವುದು ನಮ್ಮ ಆದ್ಯತೆ. ಹೀಗಾಗಿ ಹಣ ಬಿಡುಗಡೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿಗಳು ನಿಯೋಗಕ್ಕೆ ಸ್ಪಷ್ಟಪಡಿಸಿದರು.

ಶಾಸಕರಾದ ಕಂಪ್ಲಿ ಗಣೇಶ್, ರಘುಮೂರ್ತಿ, ಕೋನರೆಡ್ಡಿ, ಸಮುದಾಯದ ಮುಖಂಡರಾದ ನಿವೃತ್ತ ಅಧಿಕಾರಿ ಮೃತ್ಯುಂಜಯಪ್ಪ ಸೇರಿ ಸಮಾಜದ ಹಲವು ಹಿರಿಯರು ಉಪಸ್ಥಿತರಿದ್ದರು.

ಇದನ್ನೂ ಓದಿ: ಸಿಎಂ ಬೆಂಬಲಿಸಿ ಕಾಂಗ್ರೆಸ್ ಶಾಸಕಾಂಗ ಸಭೆ ಸರ್ವಾನುಮತದ ನಿರ್ಣಯ: ರಾಷ್ಟ್ರಭವನ ಪರೇಡ್‌ಗೆ ಕೆಲ ಶಾಸಕರ ಸಲಹೆ - CLP Meeting

ETV Bharat Logo

Copyright © 2024 Ushodaya Enterprises Pvt. Ltd., All Rights Reserved.