ETV Bharat / state

ಡಿಸಿ, ಸಿಇಒಗಳೊಂದಿಗೆ 2 ದಿನಗಳ ಸಭೆ ಮುಕ್ತಾಯ: 'ಮೂರು ತಿಂಗಳ ಬಳಿಕ ಮತ್ತೆ ಸಭೆ, ಸುಧಾರಣೆ ಕಾಣದಿದ್ದರೆ ಕ್ರಮ'- ಸಿಎಂ - CM Siddaramaiah Meeting - CM SIDDARAMAIAH MEETING

'ಸರ್ಕಾರದ ಕೆಲಸ ದೇವರ ಕೆಲಸ' ಎಂದು ಹೇಳಿರುವ ಕೆಂಗಲ್​ ಹನುಮಂತಯ್ಯನವರ ಮಾತನ್ನು ಪಾಲಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳು, ಸಿಇಒಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

CM Meeting with DCs and CEOs
ಡಿಸಿಗಳು ಹಾಗು ಸಿಇಒಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ (ETV Bharat)
author img

By ETV Bharat Karnataka Team

Published : Jul 10, 2024, 6:53 AM IST

ಬೆಂಗಳೂರು: "ಮೂರು ತಿಂಗಳ ನಂತರ ಮತ್ತೆ ಸಭೆ ನಡೆಸಲಾಗುವುದು. ಆಗಲೂ ಸುಧಾರಣೆಯಾಗದಿದ್ದರೆ ಸಹಿಸಲಾಗದು" ಎಂದು ಸಿಎಂ ಸಿದ್ದರಾಮಯ್ಯ ಡಿಸಿ ಹಾಗು ಸಿಇಒಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.‌

ಮಂಗಳವಾರ ಎರಡು ದಿನಗಳ ಸುದೀರ್ಘ ಸಭೆ ಮುಕ್ತಾಯಗೊಳಿಸಿ ಮಾತನಾಡಿದ ಅವರು, "ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ, ಸಿಇಒ, ಎಸ್ಪಿ ಸಮನ್ವಯದಿಂದ ಎಲ್ಲಾ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿದರೆ ಅಭಿವೃದ್ಧಿ ಸಾಧ್ಯವಿದೆ. ಸರ್ಕಾರ ಸಮಾಜದ ಅಸಮಾನತೆ ತೊಡೆದು ಹಾಕುವ ಉದ್ದೇಶದಿಂದ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಿ. ಸರ್ಕಾರದ ಹಣ ದುರುಪಯೋಗ ಆಗದಂತೆ ಕೆಲಸ ಮಾಡಬೇಕು. ಅರ್ಹ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಬೇಕು. ಚರ್ಚೆಯ ಸಂದರ್ಭದಲ್ಲಿ ಹಲವು ಲೋಪದೋಷಗಳ ಕುರಿತು ಪ್ರಸ್ತಾಪಿಸಲಾಗಿದೆ. ಇವುಗಳನ್ನು ಸರಿಪಡಿಸಿಕೊಂಡು ಹೋಗಬೇಕು" ಎಂದು ಸೂಚನೆ ನೀಡಿದರು.

"ಉದ್ದೇಶಪೂರ್ವಕವಾಗಿ ಇಂತಹ ಲೋಪದೋಷಗಳನ್ನು ಮುಂದುವರೆಸಿದರೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಾಗುವುದು. ನಾವೆಲ್ಲರೂ ಸರ್ಕಾರದ ಸೇವಕರು. ಅದಕ್ಕೆ ವಿಧಾನಸೌಧದಲ್ಲಿ ಕೆಂಗಲ್‌ ಹನುಮಂತಯ್ಯನವರು ಸರ್ಕಾರದ ಕೆಲಸ ದೇವರ ಕೆಲಸ ಎಂದು ಬರೆಸಿದ್ದಾರೆ. ನಾವು ಸಮಾಜವನ್ನು, ಸಮಾಜದಲ್ಲಿರುವ ಅಸಮಾನತೆಯ ಕಾರಣವನ್ನು ಅರ್ಥ ಮಾಡಿಕೊಂಡು, ನಮ್ಮ ಜನಪರ ಯೋಜನೆಗಳನ್ನು ಚಾಚೂ ತಪ್ಪದೆ ಅನುಷ್ಠಾನಗೊಳಿಸಬೇಕು. ಉದಾಹರಣೆಗೆ, ಗ್ಯಾರಂಟಿ ಯೋಜನೆಗಳು ಮಧ್ಯವರ್ತಿಗಳ ಹಾವಳಿಯಿಲ್ಲದೆ ಜಾರಿಯಾಗಿವೆ" ಎಂದು ತಿಳಿಸಿದರು.

"ಇತರ ಕೆಲವು ಕಾರ್ಯಕ್ರಮಗಳಲ್ಲಿ ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಬೇಕು. ಈಗಾಗಲೇ ಪೊಲೀಸ್‌ ಅಧಿಕಾರಿಗಳ ಸಭೆ ನಡೆಸಲಾಗಿದೆ. ನೀವೆಲ್ಲರೂ ಸೇರಿ ಜಿಲ್ಲೆ ಅಭಿವೃದ್ಧಿ ಕುರಿತು ಚಿಂತನೆ ನಡೆಸಬೇಕು. ಜನಪರ ಕಾರ್ಯಕ್ರಮಗಳನ್ನು ನಾವು, ನೀವು ಸೇರಿ ಅನುಷ್ಠಾನಗೊಳಿಸಬೇಕು. ಏಕೆಂದರೆ ಜನರ ತೆರಿಗೆ ಹಣದಿಂದ ನಾವೆಲ್ಲರೂ ಇದ್ದೇವೆ. ಅವರ ಋಣ ತೀರಿಸಬೇಕು. ಸಮಾಜದ ಋಣ ನಮ್ಮ ಮೇಲಿದೆ ಎಂಬುದನ್ನು ಅರಿತು ಕೆಲಸ ಮಾಡಿ" ಎಂದರು.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಡಿಸಿ - ಸಿಇಒ ಸಭೆ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ - CM instructions to officials

ETV Bharat Logo

Copyright © 2025 Ushodaya Enterprises Pvt. Ltd., All Rights Reserved.