ETV Bharat / state

ಸಮಾಜ ದ್ರೋಹಿಗಳ ಬಗ್ಗೆ ಯಾವುದೇ ಸಹಾನುಭೂತಿ ಇಲ್ಲದೇ ಕ್ರಮ ಜರುಗಿಸಿ: ಸಿಎಂ ಸೂಚನೆ - ರಾಮೇಶ್ವರ ಕೆಫೆ ಬಾಂಬ್ ಸ್ಫೋಟ

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಬೇಕು. ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.

Etv Bharat
Etv Bharat
author img

By ETV Bharat Karnataka Team

Published : Mar 2, 2024, 5:34 PM IST

ಬೆಂಗಳೂರು: ರಾಮೇಶ್ವರ ಕೆಫೆಯಲ್ಲಿನ ಬಾಂಬ್ ಸ್ಫೋಟ ಪ್ರಕರಣದ ಸಂಪೂರ್ಣ ಸತ್ಯ ಹೊರಗೆ ಬರಲಿ. ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಇಂದು ಗೃಹ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಿಎಂ ಸಭೆ ನಡೆಸಿ, ಸೂಚನೆ ನೀಡಿದ್ದಾರೆ.

ಜನನಿಬಿಡ ಸ್ಥಳಗಳನ್ನು ಗುರುತಿಸಿ ಅಂಥ ಪ್ರದೇಶಗಳಲ್ಲಿ ಪೊಲೀಸ್ ಗಸ್ತು ಹೆಚ್ಚಿಸಬೇಕು. ಜನರಿಗೆ ರಕ್ಷಣೆ ಒದಗಿಸಬೇಕು. ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಬೇಕು. ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು. ಪೊಲೀಸರು ಇಂಥ ಘಟನೆ ನಡೆದಾಗ ಎಚ್ಚರಿಕೆ ವಹಿಸಿ ನಂತರ ಮರೆಯಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಜನರ ದಾರಿ ತಪ್ಪಿಸುವ ಕೆಲಸವನ್ನು ಮಟ್ಟ ಹಾಕುವಂತೆ ಎಚ್ಚರಿಕೆ ನೀಡಿದರು.

ಸಹಾನುಭೂತಿ ಇಲ್ಲದೇ ಕ್ರಮ ಜರುಗಿಸಿ: ಇಂಟೆಲಿಜೆನ್ಸ್ ಹೆಚ್ಚು ಜಾಗೃತವಾಗಿರಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವ ಸಮಾಜ ದ್ರೋಹಿಗಳ ಬಗ್ಗೆ ಯಾವುದೇ ಸಹಾನುಭೂತಿ ಇಲ್ಲದೇ ಕ್ರಮ ಜರುಗಿಸಬೇಕು ಎಂದು ಸೂಚಿಸಿದರು. ಈ ಬಗ್ಗೆಯೇ ಪೊಲೀಸ್ ಇಲಾಖೆ ಜೊತೆಗೆ ಪ್ರತ್ಯೇಕ ಸಭೆ ಕರೆಯುವುದಾಗಿ ಹೇಳಿದರು. ಸಮಯ ಸಂದರ್ಭಕ್ಕೆ ತಕ್ಕಂತೆ ನಾವೂ ಬದಲಾಗಬೇಕು. ತ್ವರಿತ ಗತಿಯಲ್ಲಿ ಕೆಲಸ ಮಾಡಬೇಕು ಎಂದರು.

ಇದನ್ನೂ ಓದಿ: ಕೆಫೆ ಸ್ಫೋಟ ಪ್ರಕರಣ: ಆರೋಪಿಯ ಟ್ರಾವೆಲ್​ ಹಿಸ್ಟರಿ ಜಾಲಾಡುತ್ತಿರುವ ಖಾಕಿ ಪಡೆ; ಎನ್ಐಎಗೆ ಕೇಸ್​ ಹಸ್ತಾಂತರ ಸಾಧ್ಯತೆ

ಸಭೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್, ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಕಾರ್ಯದರ್ಶಿ ಡಾ.ತ್ರಿಲೋಕ್ ಚಂದ್ರ, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಪೊಲೀಸ್ ಆಯುಕ್ತ ಬಿ.ದಯಾನಂದ್ ಮೊದಲಾದವರು ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ರಾಮೇಶ್ವರಂ ಕೆಫೆಯಲ್ಲಿ‌ ನಡೆದ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡವರು ದಾಖಲಾಗಿರುವ ಆಸ್ಪತ್ರೆಗೆ ಸಿಎಂ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿದ್ದರು. ಈ ವೇಳೆ ಮಾತನಾಡಿದ್ದ ಸಿಎಂ, ಸ್ಫೋಟ ಪ್ರಕರಣದಲ್ಲಿ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ನೋಡಿಕೊಳ್ಳಲಿದೆ. ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣಕ್ಕೂ ಬೆಂಗಳೂರಿನ ಸ್ಫೋಟಕ್ಕೂ ಇರುವ ಸಾಮ್ಯತೆ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಪ್ರಕರಣ ಕುರಿತಂತೆ ತನಿಖೆ ನಡೆಯುತ್ತಿದೆ. ವ್ಯಕ್ತಿ ಸಂಚಾರ ಮಾಡಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಆ ವ್ಯಕ್ತಿಯನ್ನು ಪತ್ತೆ ಹಚ್ಚುವ ಕಾರ್ಯವನ್ನು ಚುರುಕುಗೊಳಿಸಲಾಗಿದೆ ಎಂದು ತಿಳಿಸಿದ್ದರು.

ಇದನ್ನೂ ಓದಿ: ಕೆಫೆ ಸ್ಫೋಟ; ಸರ್ಕಾರವೇ ಗಾಯಾಳುಗಳ ಚಿಕಿತ್ಸಾ ವೆಚ್ಚ ಭರಿಸಲಿದೆ: ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.