ETV Bharat / state

ಕೇಂದ್ರ ಸಚಿವ ಗಡ್ಕರಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಪ್ರಮುಖ ಹೆದ್ದಾರಿ ಯೋಜನೆಗಳ ಅನುಮೋದನೆಗೆ ಮನವಿ - Siddaramaiah Meet Gadkari

ದೆಹಲಿಯಲ್ಲಿಂದು ಸಿಎಂ ಸಿದ್ದರಾಮಯ್ಯನವರು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚಿಸಿದರು.

ನಿತಿನ್‌ ಗಡ್ಕರಿ ಭೇಟಿಯಾದ ಸಿಎಂ
ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Jun 28, 2024, 4:11 PM IST

ದೆಹಲಿ/ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳಿಗೆ ಶೀಘ್ರವೇ ಅನುಮೋದನೆ ನೀಡುವಂತೆ ಮನವಿ ಪತ್ರ ಸಲ್ಲಿಸಿದರು.

ರಾಜ್ಯದಲ್ಲಿ ಬೆಳಗಾವಿ–ಹುನಗುಂದ-ರಾಯಚೂರು (NH74, 8A), ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಸೂರತ್‌-ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಬೆಂಗಳೂರು ನಗರದ ಉಪನಗರ ವರ್ತುಲ ರಸ್ತೆ ಗ್ರೀನ್‌ಫೀಲ್ಡ್‌ ಕಾರಿಡಾರ್‌ಗಳ ಅಭಿವೃದ್ಧಿಗೆ ಅನುಮೋದನೆ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಮುಖ್ಯಮಂತ್ರಿಗಳು, ಇನ್ನಷ್ಟು ಪ್ರಮುಖ ವಿಚಾರಗಳ ಕುರಿತು ಕೇಂದ್ರ ಸಚಿವರ ಗಮನ ಸೆಳೆದರು.

ರಾಜ್ಯದಲ್ಲಿ 5,225 ಕಿ.ಮೀ. ಉದ್ದದ 39 ತಾತ್ವಿಕ ಅನುಮೋದನೆ ದೊರಕಿದ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಅವರು ಮನವಿ ಮಾಡಿದರು.

ಇತರ ಪ್ರಮುಖ ವಿಷಯಗಳು:

  • ದಿನಕ್ಕೆ 10,000 ಪಿಸಿಯು ವಾಹನ ದಟ್ಟಣೆ ಹೊಂದಿರುವ ರಾಜ್ಯ ಹೆದ್ದಾರಿಗಳನ್ನು ಉನ್ನತೀಕರಿಸಲು ಮನವಿ.
  • ಶಿರಾಡಿ ಘಾಟಿಯಲ್ಲಿ ಮಾರನಹಳ್ಳಿಯಿಂದ ಅಡ್ಡಹೊಳೆ ನಡುವೆ ಟನೆಲ್‌ ನಿರ್ಮಾಣದ ಮೂಲಕ ಮಂಗಳೂರು ಬಂದರು ಸಂಪರ್ಕ ಇನ್ನಷ್ಟು ಸುಗಮಗೊಳಿಸುವುದು.
  • ಮೈಸೂರು ನಗರದ ಮಣಿಪಾಲ್‌ ಆಸ್ಪತ್ರೆ ಜಂಕ್ಷನ್‌ (ಕೊಲಂಬಿಯ ಏಷ್ಯಾ ಆಸ್ಪತ್ರೆ)ನಲ್ಲಿ ಫ್ಲೈಓವರ್‌ ನಿರ್ಮಾಣಕ್ಕೆ ಅನುಮೋದನೆ.
  • ಮೈಸೂರು ರಿಂಗ್‌ ರಸ್ತೆಯಲ್ಲಿ NH275Kನಲ್ಲಿ 9 ಗ್ರೇಡ್‌ ಸೆಪರೇಟರ್​ಗಳ ನಿರ್ಮಾಣಕ್ಕೆ ಅನುಮೋದನೆ.
  • ಬೆಳಗಾವಿ ನಗರದಲ್ಲಿ ಹಳೆ NH4ನಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಅನುಮೋದನೆ.
  • ಬೆಳಗಾವಿ ಜಿಲ್ಲೆಯ ಗೋಕಾಕ್‌ ಜಲಪಾತದಲ್ಲಿ ಕೇಬಲ್‌ ಕಾರ್‌ ಸೌಲಭ್ಯ ಕಲ್ಪಿಸುವ ಯೋಜನೆ.
  • ಕಿತ್ತೂರು ಪಟ್ಟಣದಿಂದ ಬೈಲಹೊಂಗಲವನ್ನು ಸಂಪರ್ಕಿಸುವ ರಸ್ತೆಯ ಸುಧಾರಣೆ.
  • ಕಲಬುರಗಿ ಮತ್ತು ರಾಯಚೂರಿನಲ್ಲಿ ಬೈಪಾಸ್‌ ನಿರ್ಮಾಣ
  • NH-373ರ ಬೇಲೂರು ಚಿಕ್ಕಮಗಳೂರು ವಿಭಾಗದಲ್ಲಿ ಚತುಷ್ಪಥ ನಿರ್ಮಾಣ.
  • ಚಳ್ಳಕೆರೆ ಪಟ್ಟಣ ವ್ಯಾಪ್ತಿಯಲ್ಲಿ NH-150Aಯ ಒಂದು ಬಾರಿ ಸುಧಾರಣೆ.
  • ರಾಷ್ಟ್ರೀಯ ಹೆದ್ದಾರಿ NH-766ರ 106 ಕಿ.ಮೀ. ರಸ್ತೆಯನ್ನು ಚತುಷ್ಪಥ, ಆರು ಪಥದ ಹೆದ್ದಾರಿಯಾಗಿ ಅಭಿವೃದ್ಧಿ.
  • ಈಗಾಗಲೇ ತಾತ್ವಿಕ ಅನುಮೋದನೆ ದೊರೆತಿರುವ ಕೇರಳದ ಕಲ್ಪೆಟ್ಟದಿಂದ ಮಾನಂದವಾಡಿ, ಹೆಚ್.ಡಿ.ಕೋಟೆ, ಜಯಪುರ ಮೂಲಕ ಮೈಸೂರನ್ನು ಸಂಪರ್ಕಿಸುವ 90 ಕಿ.ಮೀ. ಹೆದ್ದಾರಿ, ಮೈಸೂರಿನಿಂದ ಬನ್ನೂರು ಮೂಲಕ ಮಳವಳ್ಳಿಯನ್ನು ಸಂಪರ್ಕಿಸುವ 45 ಕಿ.ಮೀ. ಹೆದ್ದಾರಿ ಹಾಗೂ ಬೆಳಗಾವಿ ಜಿಲ್ಲೆಯ ಸಂಕೇಶ್ವರದಿಂದ ಗೋಕಾಕ- ಯರಗಟ್ಟಿ-ಮನ್ವಳ್ಳಿ ಮೂಲಕ ನರಗುಂದವನ್ನು ಸಂಪರ್ಕಿಸುವ 127 ಕಿ.ಮೀ. ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಿಸಲು ಮುಖ್ಯಮಂತ್ರಿಗಳು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಸರ್ಕಾರದ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ.ಅತೀಕ್, ಶಾಲಿನಿ ರಜನೀಶ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ ಸೇರಿದಂತೆ ಇತರರು ಇದ್ದರು.

ಇದನ್ನೂ ಓದಿ: ನೆಲ-ಜಲ-ಭಾಷೆಯ ವಿಚಾರದಲ್ಲಿ ನಮಗೆ ಪಕ್ಷಗಳಿಲ್ಲ, ರಾಜ್ಯದ ಹಿತಾಸಕ್ತಿಗೆ ಆದ್ಯತೆ: ಸಿಎಂ - CM Siddaramaiah

ETV Bharat Logo

Copyright © 2024 Ushodaya Enterprises Pvt. Ltd., All Rights Reserved.