ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಇಲ್ಲಿನ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.
ಎಸ್.ಎಂ.ಕೃಷ್ಣ (91) ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದು, ಏ.29ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಏ.21ರಂದು ಉಸಿರಾಟದ ತೊಂದರೆ ಉಂಟಾಗಿ ಮೊದಲು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುನಲ್ಲಿದ್ದ ಅವರು ಬಳಿಕ ಡಿಸ್ಚಾರ್ಜ್ ಆಗಿದ್ದರು.
ಇದನ್ನೂ ಓದಿ: ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ - Ronald Sequeira