ETV Bharat / state

ಸಚಿವೆ ನಿರ್ಮಲಾ ಸೀತಾರಾಮನ್ ಅವರ ಯಜಮಾನಿಕೆಯ ಧೋರಣೆ ಅತ್ಯಂತ ಖಂಡನೀಯ: ಸಿಎಂ ಸಿದ್ದರಾಮಯ್ಯ - Siddaramaiah outraged Seetharaman

ಸಚಿವೆ ನಿರ್ಮಲಾ ಸೀತಾರಾಮನ್ ಅವರ ಯಜಮಾನಿಕೆಯ ಧೋರಣೆ ಅತ್ಯಂತ ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು.

CM SIDDARAMAIAH  NIRMALA SEETHARAMAN  GRANT ISSUE  OUTRAGED
ಸಿಎಂ ಸಿದ್ದರಾಮಯ್ಯ
author img

By ETV Bharat Karnataka Team

Published : Mar 24, 2024, 10:58 PM IST

ಬೆಂಗಳೂರು: ರಾಜ್ಯ ಸರ್ಕಾರದ ಯೋಜನೆಗಳಿಗೆ ಅವರೇ ಹಣ ಹೊಂದಿಸಿಕೊಳ್ಳಬೇಕು. ಕೇಂದ್ರ ಸರ್ಕಾರವನ್ನು ಕೇಳಬಾರದು ಎನ್ನುವ ನಿರ್ಮಲಾ ಸೀತಾರಾಮನ್ ಅವರ ಯಜಮಾನಿಕೆಯ ಧೋರಣೆ ಅತ್ಯಂತ ಖಂಡನೀಯ. ಈ ಹೇಳಿಕೆ ಆರೂವರೆ ಕೋಟಿ ಕನ್ನಡಿಗರಿಗೆ ತೋರಿರುವ ಅಗೌರವ ಮತ್ತು ಮಾಡಿರುವ ಅವಮಾನ ಎಂದು ತಿಳಿದುಕೊಳ್ಳಬೇಕಾಗುತ್ತದೆ ಅಂತಾ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಶತಾಯಗತಾಯ ರಾಜ್ಯದಲ್ಲಿ ಆರ್ಥಿಕ ಬಿಕ್ಕಟ್ಟನ್ನು ಸೃಷ್ಟಿಸಿ ಬಡವರಿಗೆ ನೀಡಲಾಗಿರುವ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುವಂತೆ ಮಾಡಬೇಕೆಂಬ ದುರಾಲೋಚನೆ ಕೇಂದ್ರ ಸರ್ಕಾರಕ್ಕೆ ಇದೆ ಎನ್ನುವುದು ಕನ್ನಡಿಗರಿಗೆ ಈಗ ಅರ್ಥವಾಗಿದೆ. ಇದಕ್ಕೆ ತಕ್ಕ ಉತ್ತರವನ್ನು ರಾಜ್ಯದ ಮತದಾರರು ಲೋಕಸಭಾ ಚುನಾವಣೆಯಲ್ಲಿ ನೀಡಲಿದ್ದಾರೆ. ನಿರ್ಮಲಾ ಸೀತಾರಾಮನ್ ಅವರೇ, ನಾವು ನಮ್ಮ ಗ್ಯಾರಂಟಿ ಯೋಜನೆಗಳಿಗೆ ವಿಶೇಷವಾದ ಅನುದಾನ ಕೊಡಿ ಎಂದು ಕೇಂದ್ರ ಸರ್ಕಾರವನ್ನು ಬೇಡಿಕೊಳ್ಳುತ್ತಿಲ್ಲ. ಈ ಯೋಜನೆಗಳಿಗೆ ಬೇಕಿರುವ ಅನುದಾನವನ್ನು ಬಜೆಟ್​ನಲ್ಲೇ ಮೀಸಲಿಟ್ಟಿದ್ದೇವೆ ಎಂದಿದ್ದಾರೆ.

ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯದ ವಿರುದ್ಧ ಸಿಡಿದೆದ್ದಿರುವ ಕನ್ನಡಿಗರ ಕೂಗಿಗೆ ರಾಜ್ಯ ಸರ್ಕಾರ ದನಿಯಾಗಿದೆ. ಇದು ಜವಾಬ್ದಾರಿಯುತ ಸರ್ಕಾರದ ಕರ್ತವ್ಯವೂ ಹೌದು. ಅನ್ಯಾಯ ನಡೆದಿರುವ ಕಾರಣಕ್ಕಾಗಿಯೇ 2020-21ರಲ್ಲಿ 15ನೇ ಹಣಕಾಸು ಆಯೋಗವು ತನ್ನ ಮಧ್ಯಂತರ ವರದಿಯಲ್ಲಿ ಕರ್ನಾಟಕವೂ ಸೇರಿದಂತೆ 3 ರಾಜ್ಯಗಳಿಗೆ ವಿಶೇಷ ಅನುದಾನ ₹ 6,764 ಕೋಟಿ (ರಾಜ್ಯಕ್ಕೆ ₹5,495 ಕೋಟಿ, ತೆಲಂಗಾಣಕ್ಕೆ ₹723 ಕೋಟಿ ಹಾಗೂ ಮಿಜೋರಾಂಗೆ ₹546 ಕೋಟಿ) ಶಿಫಾರಸು ಮಾಡಿತ್ತು. ಕರ್ನಾಟಕಕ್ಕೆ ಮಾತ್ರವಲ್ಲ, ತೆಲಂಗಾಣ ಮತ್ತು ಮಿಜೋರಾಂಗಳಿಗೂ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗಿತ್ತು ಎಂದು ಆರೋಪಿಸಿದ್ದಾರೆ.

15ನೇ ಹಣಕಾಸು ಆಯೋಗದ ಅಂತಿಮ ವರದಿಯಲ್ಲಿ ಕೂಡ ಕರ್ನಾಟಕಕ್ಕೆ ₹6,000 ಕೋಟಿ ಇದರಲ್ಲಿ ರೂ.3,000 ಕೋಟಿ ಜಲಮೂಲಗಳ ಸಂರಕ್ಷಣೆ ಹಾಗೂ ₹3,000 ಕೋಟಿ ಬೆಂಗಳೂರಿನ ಫೆರಿಪೆರಲ್ ರಿಂಗ್ ರಸ್ತೆ ನಿರ್ಮಾಣಕ್ಕೆ ನೀಡುವಂತೆ ಶಿಫಾರಸು ಮಾಡಿತ್ತು. ಇದು ಕೇಂದ್ರ ಸರ್ಕಾರ ವಿಶೇಷ ಪ್ರೀತಿ ಇಲ್ಲವೇ ಔದಾರ್ಯದಿಂದ ಮಾಡಿರುವ ಶಿಫಾರಸುಗಳಲ್ಲ. ಇವೆಲ್ಲವೂ ತೆರಿಗೆ ಹಂಚಿಕೆಯಲ್ಲಿನ ಅನ್ಯಾಯಕ್ಕೆ ನೀಡಿರುವ ಪರಿಹಾರ ಅಷ್ಟೇ ಎಂದಿದ್ದಾರೆ.

ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ಇದೆ ಎನ್ನುವ ಏಕೈಕ ಕಾರಣಕ್ಕೆ ಈ ಎರಡೂ ಶಿಫಾರಸುಗಳನ್ನು ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ತಿರಸ್ಕರಿಸಿದ್ದಾರೆ. ಈ ಮೂಲಕ ಕರ್ನಾಟಕಕ್ಕೆ ನ್ಯಾಯಯುತ ಪಾಲಿನ ಹಕ್ಕಿನಿಂದ ವಂಚಿತರನ್ನಾಗಿಸಿದರು. ಇದು ರಾಜ್ಯದ ಆರುವರೆ ಕೋಟಿ ಕನ್ನಡಿಗರಿಗೆ ಬಗೆದಿರುವ ದ್ರೋಹವಾಗಿದೆ. ಕಣ್ಣೆದುರೇ ದಾಖಲೆಗಳಿದ್ದರೂ ಸ್ವಲ್ಪವೂ ಅಂಜಿಕೆಯಿಲ್ಲದೆ ಕೇಂದ್ರ ವಿತ್ತ ಸಚಿವರು ಹಸಿ ಸುಳ್ಳುಗಳನ್ನು ಹೇಳಿ ಜನರ ದಾರಿ ತಪ್ಪಿಸುವ ಹತಾಶ ಪ್ರಯತ್ನ ನಡೆಸುತ್ತಿದ್ದಾರೆ. ಕನ್ನಡಿಗರ ಎದುರು ಕೇಂದ್ರ ಸರ್ಕಾರದ ಸುಳ್ಳಿನ ಪರದೆ ಕಳಚಿ ಬಿದ್ದು ನಿಜ ಬಣ್ಣ ಬಯಲಾಗಿ ಬಹಳ ಕಾಲ ಆಗಿದೆ. ಇನ್ನಾದರೂ ಸತ್ಯ ಒಪ್ಪಿಕೊಂಡು ಆಗಿರುವ ಅನ್ಯಾಯ ಸರಿಪಡಿಸುವ ಪ್ರಯತ್ನ ಮಾಡಿ ಎಂದು ಒತ್ತಾಯಿಸಿದ್ದಾರೆ.

ಕೇಂದ್ರ ಸಚಿವ ಸಂಪುಟದಲ್ಲಿ ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಅವರು ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಸಂಬಂಧದ ಬಗ್ಗೆ ಈ ರೀತಿಯ ಅಜ್ಞಾನ ಹೊಂದಿರುವುದು ವಿಷಾದನೀಯ ಎಂದು ವಾಗ್ದಾಳಿ ನಡೆಸಿದ್ದಾರೆ.

ಓದಿ: ಲೋಕಸಭೆ ಚುನಾವಣೆ: ಬಿಜೆಪಿ ಐದನೇ ಪಟ್ಟಿ ಬಿಡುಗಡೆ; ಶೆಟ್ಟರ್​, ಕಾಗೇರಿ, ಸುಧಾಕರ್​ ಸೇರಿ ನಾಲ್ವರಿಗೆ ಟಿಕೆಟ್​ - BJP FIFTH LIST

ETV Bharat Logo

Copyright © 2024 Ushodaya Enterprises Pvt. Ltd., All Rights Reserved.