ETV Bharat / state

ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಅರ್ಜಿ: ವಿಚಾರಣೆ ಪುನಾರಂಭ - CM Siddaramaiah Prosecution - CM SIDDARAMAIAH PROSECUTION

ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್​ನಲ್ಲಿ ಮುಂದುವರಿದಿದ್ದು, ಇಂದು ಬಹುತೇಕ ಪೂರ್ಣಗೊಳ್ಳಲಿದೆ.

ಹೈಕೋರ್ಟ್​ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ
ಹೈಕೋರ್ಟ್​ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆ (ETV Bharat)
author img

By ETV Bharat Karnataka Team

Published : Sep 12, 2024, 12:30 PM IST

Updated : Sep 12, 2024, 2:40 PM IST

ಬೆಂಗಳೂರು: ಮುಡಾ ಹಗರಣ ಸಂಬಂಧ ರಾಜ್ಯಪಾಲರು ಅನುಮತಿ ನೀಡಿರುವ ಪ್ರಾಸಿಕ್ಯೂಷನ್​ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್​ನಲ್ಲಿ ನಡೆಯುತ್ತಿದೆ. ಪ್ರಕರಣ ಕುರಿತ ಅರ್ಜಿ ವಿಚಾರಣೆ ಇಂದು ಬಹುತೇಕ ಮುಗಿಯಲಿದೆ.

ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠದಲ್ಲಿ ವಿಚಾರಣೆ ಆರಂಭವಾಗಿದೆ. ಈಗಾಗಲೇ ರಾಜ್ಯಪಾಲರ ಪರವಾಗಿ ಸಾಲಿಸಿಟರ್​ ಜನರಲ್​ ತುಷಾರ್​ ಮೆಹ್ತಾ, ರಾಜ್ಯ ಸರ್ಕಾರದ ಪರವಾಗಿ ಶಶಿಕಿರಣ್​ ಶೆಟ್ಟಿ ವಾದ ಮಂಡಿಸಿದ್ದಾರೆ. ಇಂದು ಮುಖ್ಯಮಂತ್ರಿಗಳ ಪರ ಹಿರಿಯ ವಕೀಲರಾದ ಅಭಿಷೇಕ್​ ಮನು ಸಿಂಘ್ವಿ ಅವರು ಮಧ್ಯಾಹ್ನ 1.30ರ ವರೆಗೆ ವಾದ ಮಂಡಿಸಿದ್ದಾರೆ. ಬಳಿಕ ವಿಚಾರಣೆಯನ್ನು ಮುಂದೂಡಲಾಗಿತ್ತು. ಮಧ್ಯಾಹ್ನ 2.30ರಿಂದ ಮತ್ತೆ ವಿಚಾರಣೆ ಆರಂಭವಾಗಿದೆ.

ಅರ್ಜಿದಾರರು ಮತ್ತು ಪ್ರತಿವಾದಿಗಳ ಪರವಾಗಿ ಇಂದು ವಾದ ಪೂರ್ಣಗೊಳ್ಳುವ ಸಾಧ್ಯತೆಯಿದ್ದು, ಈ ವಾರವೇ ತೀರ್ಪು ಪ್ರಕಟವಾಗುವ ನಿರೀಕ್ಷೆಯಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ತಮ್ಮ ಕುಟುಂಬಸ್ಥರಿಗೆ ಕಾನೂನುಬಾಹಿರವಾಗಿ ನಿವೇಶನ ಪಡೆದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ನೀಡಿದ್ದರು.

ಇದನ್ನೂ ಓದಿ: ಸಮಿತಿ ರಚನೆ ದ್ವೇಷ ರಾಜಕಾರಣ ಎಂದಾದರೆ ನನ್ನ ವಿರುದ್ಧ ನೀವು ಮಾಡುತ್ತಿರುವುದೇನು: ವಿಪಕ್ಷ ನಾಯರಿಗೆ ಸಿಎಂ‌ ಪ್ರಶ್ನೆ - cm Siddaramaiah

Last Updated : Sep 12, 2024, 2:40 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.