ETV Bharat / state

ಪ್ರಾಸಿಕ್ಯೂಷನ್​: ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ​ಮೇಲ್ಮನವಿ - CM SIDDARAMAIAH

ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಎತ್ತಿ ಹಿಡಿದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಮೇಲ್ಮನವಿ ಸಲ್ಲಿಸಿದ್ದಾರೆ.

siddaramaiah
ಹೈಕೋರ್ಟ್, ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Oct 24, 2024, 7:06 PM IST

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ (ಮುಡಾ) ನಿವೇಶನ ಹಂಚಿಕೆ ಹಗರಣ ಕುರಿತ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಎತ್ತಿಹಿಡಿದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲ್ಮನವಿ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಅರ್ಜಿಯಲ್ಲಿ ರಾಜ್ಯ ಸರ್ಕಾರ, ರಾಜ್ಯಪಾಲರ ಕಚೇರಿಯ ಕಾರ್ಯದರ್ಶಿ, ಖಾಸಗಿ ದೂರುದಾರರಾದ ಟಿ.ಜೆ.ಅಬ್ರಹಾಂ ಮತ್ತಿತರರನ್ನು ಪ್ರತಿವಾದಿಯನ್ನಾಗಿಸಲಾಗಿದೆ‌.

ಮುಡಾ ಹಗರಣ ಕುರಿತು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ (ಪಿಸಿ ಆ್ಯಕ್ಟ್‌) ಸೆಕ್ಷನ್‌ 17ಎ ಅಡಿಯಲ್ಲಿ ಪೊಲೀಸ್‌ ತನಿಖೆ ಮತ್ತು ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌) ಸೆಕ್ಷನ್‌ 2023ರ ಸೆಕ್ಷನ್‌ 218 ಅಡಿಯಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ 2024ರ ಆ.16ರಂದು ರಾಜ್ಯಪಾಲರು ಆದೇಶಿಸಿದ್ದಾರೆ. ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಲಾಗಿತ್ತು.

ಪ್ರಕರಣದ ತನಿಖೆಗೆ ಮತ್ತು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬಾರದು ಎಂದು ರಾಜ್ಯ ಸಚಿವರ ಸಂಪುಟದ ಸದಸ್ಯರು ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದರು. ಅದನ್ನು ಪರಿಗಣಿಸದೆ ಪ್ರಕರಣದ ತನಿಖೆಗೆ ಮತ್ತು ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರೇ ಆತುರದ ಅನುಮತಿ ನೀಡಿದ್ದಾರೆ. ಅಂತಹ ಆದೇಶ ಹೊರಡಿಸಲು ಸಮಂಜಸವಾದ ಕಾರಣಗಳನ್ನೂ ನೀಡಿಲ್ಲ ಮತ್ತು ಸೂಕ್ತವಾಗಿ ವಿವೇಚನೆಯನ್ನೂ ಬಳಸಿಲ್ಲ ಎಂದು ಮೇಲ್ಮನವಿಯಲ್ಲಿ ಆಕ್ಷೇಪಿಸಿದ್ದಾರೆ.

ಸಂಪುಟದ ಸಚಿವರ ಸಲಹೆ ಮತ್ತು ಸೂಚನೆ ಆಧಾರದಲ್ಲಿ ರಾಜ್ಯಪಾಲರು ಕಾರ್ಯ ನಿರ್ವಹಿಸಬೇಕು ಎಂದು ಸಂವಿಧಾನದ ಪರಿಚ್ಛೇದ 163ವು ಸ್ಪಷ್ಟವಾಗಿ ಹೇಳುತ್ತದೆ. ಆ ಪರಿಚ್ಛೇದವೂ ಸೇರಿದಂತೆ ಸಾಂವಿಧಾನಿಕ ತತ್ವಗಳನ್ನು ಕಡೆಗಣಿಸಿ ರಾಜ್ಯಪಾಲರು ಅನುಮತಿ ನೀಡಿದ್ದರು. ಹಾಗಾಗಿ, ರಾಜ್ಯಪಾಲರ ಪೂರ್ವಾನುಮತಿಯೇ ನಿರಂಕುಶ, ಅಸಾಂವಿಧಾನಿಕ ಮತ್ತು ಅಕ್ರಮವಾಗಿದೆ. ಅಂತಹ ಆದೇಶವನ್ನು ಪುರಸ್ಕರಿಸಿರುವ ಏಕ ಸದಸ್ಯ ಪೀಠದ ತೀರ್ಪು ಸಹ ಸಂಪೂರ್ಣವಾಗಿ ದೋಷಪೂರಿತವಾಗಿದೆ ಎಂದು ಮೇಲ್ಮನವಿಯಲ್ಲಿ ಮುಖ್ಯಮಂತ್ರಿಯವರು ಆಕ್ಷೇಪಿಸಿದ್ದಾರೆ.

ಅಪ್ರಸ್ತುತ ಸತ್ಯಗಳನ್ನು ಆಧರಿಸಿ ಏಕ ಸದಸ್ಯ ಪೀಠವು ತೀರ್ಪು ನೀಡಿದೆ. ರಾಜ್ಯಪಾಲರು ಸಂಪುಟದ ಸಚಿವರ ಸಲಹೆ-ಸೂಚನೆ ಕಡೆಗಣಿಸಿ ಹಾಗೂ ವಿವೇಚನೆ ಬಳಸದೆ ರಾಜ್ಯಪಾಲರು ಆದೇಶ ಹೊರಡಿಸಿರುವುದು ಮತ್ತು ಪಿಸಿ ಕಾಯ್ದೆ ಸೆಕ್ಷನ್‌ 17ಎ ಮತ್ತು ಬಿಎನ್‌ಎಸ್‌ಎಸ್‌ ಸೆಕ್ಷನ್‌ 218ರ ಕುರಿತ ವ್ಯಾಖ್ಯಾನಗಳು ಸೇರಿದಂತೆ ಅನೇಕ ಪ್ರಮುಖ ಕಾನೂನಾತ್ಮಕ ಅಂಶಗಳನ್ನು ಪರಿಗಣಿಸುವಲ್ಲಿ ಏಕಸದಸ್ಯ ಪೀಠ ನಿರ್ಲಕ್ಷಿಸಿದೆ ಹಾಗೂ ವಿಫಲವಾಗಿದೆ. ಆ ಮೂಲಕ ಏಕ ಸದಸ್ಯ ಪೀಠವು ಸಹ ದೋಷಪೂರಿತ ಹಾಗೂ ವಿವೇಚನಾ ರಹಿತವಾದಂತಹ ತೀರ್ಪು ನೀಡಿದೆ. ಆದ್ದರಿಂದ ಏಕ ಸದಸ್ಯ ಪೀಠದ ಆದೇಶವೂ ನಿರಂಕುಶ, ಸ್ವೇಚ್ಛಾನುಸಾರ ಮತ್ತು ಕಾನೂನುಬಾಹಿರವಾಗಿದೆ. ಆದ್ದರಿಂದ ಆ ತೀರ್ಪು ಮತ್ತು ರಾಜ್ಯಪಾಲರ ಆದೇಶವನ್ನು ರದ್ದುಪಡಿಸಬೇಕು ಎಂದು ಮುಖ್ಯಮಂತ್ರಿಗಳು ಮೇಲ್ಮನವಿಯಲ್ಲಿ ಕೋರಿದ್ದಾರೆ.

ಪ್ರಕರಣವೇನು?: ಮುಡಾ ಪ್ರಕರಣ ಕುರಿತು ಮುಖ್ಯಮಂತ್ರಿಗಳ ವಿರುದ್ಧ ಪೊಲೀಸ್‌ ತನಿಖೆ ಮತ್ತು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ರಾಜ್ಯಪಾಲರು ಆ.17ರಂದು ಆದೇಶಿಸಿದ್ದರು. ಅದನ್ನು ಪ್ರಶ್ನಿಸಿ ಮುಖ್ಯಮಂತ್ರಿಗಳು ಆ.19ರಂದು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಅಂದೇ ರಾಜ್ಯಪಾಲರ ಆದೇಶ ಆಧರಿಸಿ ಮುಖ್ಯಮಂತ್ರಿಗಳ ವಿರುದ್ಧ ಆತುರದ ಕ್ರಮ ಜರುಗಿಸದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮತ್ತು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶಿಸಿ ಹೈಕೋರ್ಟ್‌ ಏಕಸದಸ್ಯ ಪೀಠ ಮಧ್ಯಂತರ ಆದೇಶ ಮಾಡಿತ್ತು. ಸೆ.12ರಂದು ಅರ್ಜಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು. ಸೆ.24ರಂದು ಮುಖ್ಯಮಂತ್ರಿಗಳ ಅರ್ಜಿ ವಜಾಗೊಳಿಸಿ, ಪ್ರಕರಣ ಕುರಿತು ಲೋಕಾಯುಕ್ತ ಪೊಲೀಸ್‌ ತನಿಖೆ ನಡೆಸಲು ಅನುಮತಿ ನೀಡಿ ತೀರ್ಪು ಪ್ರಕಟಿಸಿತ್ತು.

ಇದನ್ನೂ ಓದಿ: ಕೆಸರೆ ಗ್ರಾಮದ ಜಮೀನಿಗೆ ಮೈಸೂರು ನಗರದಲ್ಲಿ ಬದಲಿ ನಿವೇಶನ ನೀಡಿರುವ ಬಗ್ಗೆ ತನಿಖೆ ಅಗತ್ಯ: ಹೈಕೋರ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.