ETV Bharat / state

ಸಿಎಂ ಸಿದ್ದರಾಮಯ್ಯರಿಂದ ಆದಾಯ ಕೊರತೆಯ ಬಜೆಟ್ ಮಂಡನೆ: 1,05,246 ಕೋಟಿ ರೂ. ಸಾಲದ ಮೊರೆ - ಸಿಎಂ ಸಿದ್ದರಾಮಯ್ಯ ಬಜೆಟ್

Karnataka Budget 2024: ಕಳೆದ ಬಾರಿ ಅಂದಾಜು 85,818 ಕೋಟಿ ಸಾಲ ಮಾಡಲು ನಿರ್ಧರಿಸಿದ್ದ ಸರ್ಕಾರ ಈ ಬಾರಿ 1,05,246 ಕೋಟಿ ಸಾಲದ ಮೊರೆ ಹೋಗಿದೆ.

Etv Bharat
Etv Bharat
author img

By ETV Bharat Karnataka Team

Published : Feb 16, 2024, 11:54 AM IST

ಬೆಂಗಳೂರು: ಸಿಎಂ ಸಿದ್ದರಾಮಯ್ಯ 3,71,383 ಕೋಟಿ ಗಾತ್ರದ ಆದಾಯ ಕೊರತೆಯ ಬಜೆಟ್ ಮಂಡಿಸಿದ್ದು, ಗ್ಯಾರಂಟಿ ಹೊರೆ ನೀಗಿಸಲು ಹೆಚ್ಚಿನ ಸಾಲದ ಮೊರೆ ಹೋಗಿದ್ದಾರೆ. 2024-25 ಸಾಲಿನಲ್ಲಿ 1,05,246 ಕೋಟಿ ರೂ. ಸಾಲ ಮಾಡಲು ನಿರ್ಧರಿಸಿದೆ.

ಕಳೆದ ಬಾರಿ ಸಿಎಂ ಸಿದ್ದರಾಮಯ್ಯ ಮಂಡಿಸಿದ್ದ ಬಜೆಟ್​​ನಲ್ಲಿ ಅಂದಾಜು 85,818 ಕೋಟಿ ಸಾಲ ಮಾಡುವುದಾಗಿ ತಿಳಿಸಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪಂಚ ಗ್ಯಾರಂಟಿಯ ಹೊರೆ ನೀಗಿಸಲು ಮತ್ತಷ್ಟು ಸಾಲದ ಮೊರೆ ಹೋಗಿದೆ. 2024-25 ಸಾಲಿನಲ್ಲಿ 1,05,246 ಕೋಟಿ ರೂ. ಸಾಲ ಮಾಡಲು ನಿರ್ಧರಿಸಿದೆ. 2024-25 ಸಾಲಿನಲ್ಲಿ ಕೇಂದ್ರ ಸರ್ಕಾರದಿಂದ 6,855 ಕೋಟಿ ರೂ. ಸಾಲ, ಬಹಿರಂಗ ಮಾರುಕಟ್ಟೆ ಮೂಲಕ 96,840ಕೋಟಿ ರೂ. ಸಾಲ ಮಾಡಲು ಮುಂದಾಗಿದೆ.

ಅಧಿಕ ಆದಾಯ ಸಂಗ್ರಹದ ಗುರಿ: ಈ ಬಾರಿ ಬಜೆಟ್​ನಲ್ಲಿ ಒಟ್ಟು 2,63,177 ಕೋಟಿ ರೂ‌. ರಾಜಸ್ವ ಸಂಗ್ರಹದ ಗುರಿ ನಿಗದಿ ಪಡಿಸಲಾಗಿದೆ. 2023-24 ಸಾಲಿನ ಬಜೆಟ್​​ನಲ್ಲಿ ವಾರ್ಷಿಕ ಅಂದಾಜು 98,650 ಕೋಟಿ ರೂ. ವಾಣಿಜ್ಯ ತೆರಿಗೆ ಸಂಗ್ರಹದ ಗುರಿ ನಿಗದಿ ಮಾಡಲಾಗಿತ್ತು. ಇದೀಗ ಈ ಸಾಲಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ರಾಜಸ್ವ ಸಂಗ್ರಹಣೆ ಗುರಿಯನ್ನು 1,10,000 ಕೋಟಿ ರೂ. ನಿಗದಿ‌ ಮಾಡಿದೆ.

2023-24 ಸಾಲಿನಲ್ಲಿ ವಾರ್ಷಿಕ 36,000 ಕೋಟಿ ರೂ. ಅಬಕಾರಿ ತೆರಿಗೆ ಸಂಗ್ರಹದ ಬಜೆಟ್ ಗುರಿ ನಿಗದಿ ಮಾಡಲಾಗಿತ್ತು. ಆ ಪೈಕಿ ಜನವರಿ ವರೆಗೆ 28,181 ಕೋಟಿ ರೂ. ಸಂಗ್ರಹಣೆಯಾಗಿದೆ. 2024-25 ಸಾಲಿನಲ್ಲಿ ಅಬಕಾರಿ ಇಲಾಖೆಗೆ 38,525 ಕೋಟಿ ರೂ. ರಾಜಸ್ವ ಸಂಗ್ರಹದ ಗುರಿ ನಿಗದಿ ಮಾಡಿದೆ. ಜೊತೆಗೆ ಬಿಯರ್ ಸ್ಲಾಬ್​​ಗಳನ್ನು ಪರಿಷ್ಕರಿಸಲಾಗುವುದು ಎಂದಿದ್ದಾರೆ.

2023-24 ಸಾಲಿನಲ್ಲಿ ವಾರ್ಷಿಕ 25,000 ಕೋಟಿ ರೂ. ಮುದ್ರಾಂಕ ಹಾಗೂ ನೋಂದಣಿ ಶುಲ್ಕ ಸಂಗ್ರಹದ ಬಜೆಟ್ ಗುರಿ ನಿಗದಿ ಮಾಡಲಾಗಿತ್ತು. ಆ ಪೈಕಿ ಜನವರಿ ವರೆಗೆ 15,692 ಕೋಟಿ ರೂ. ಸಂಗ್ರಹಣೆಯಾಗಿದೆ. 2024-25 ಸಾಲಿನಲ್ಲಿ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಮೂಲಕ 26,000 ಕೋಟಿ ರೂ. ಸಂಗ್ರಹ ಗುರಿ ನಿಗದಿ ಮಾಡಿದೆ.

ಕಳೆದ ಸಾಲಿನಲ್ಲಿ ವಾರ್ಷಿಕ 11,500 ಕೋಟಿ ರೂ. ಮೋಟಾರು ವಾಹನ ತೆರಿಗೆ ಸಂಗ್ರಹದ ಬಜೆಟ್ ಗುರಿ ನಿಗದಿ ಮಾಡಲಾಗಿತ್ತು. ಆ ಪೈಕಿ ಜನವರಿವರೆಗೆ 9,333 ಕೋಟಿ ರೂ. ಸಂಗ್ರಹಣೆಯಾಗಿದೆ. ಇದೀಗ 2024-25 ಸಾಲಿನ ಬಜೆಟ್​​ನಲ್ಲಿ ಮೋಟಾರು ಮತ್ತು ವಾಹನ ತೆರಿಗೆ ಮೂಲಕ 13,000 ಕೋಟಿ ರೂ. ಸಂಗ್ರಹದ ಗುರಿ ನಿಗದಿ ಮಾಡಿದೆ. ಇನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ 9,000 ಕೋಟಿ ರೂ. ರಾಜಸ್ವ ಸಂಗ್ರಹದ ಗುರಿ ನೀಡಿದೆ.

ಇದನ್ನೂ ಓದಿ: 2025 ರ ವೇಳೆಗೆ 44 ಕಿಮೀ ಮೆಟ್ರೋ ಮಾರ್ಗ ಸೇರ್ಪಡೆ

ಈ ಸಾಲಿನಲ್ಲಿ 2,63,178 ಕೋಟಿ ರೂ.ಗಳ ರಾಜಸ್ವ ಜಮೆಯನ್ನು ಅಂದಾಜು ಮಾಡಲಾಗಿದೆ. ಇದರಲ್ಲಿ ರಾಜ್ಯದ ಸ್ವಂತ ತೆರಿಗೆಯಿಂದ 1,89,893 ಕೋಟಿ ರೂ.ಗಳ ಸಂಗ್ರಹಣೆಯನ್ನು ಅಂದಾಜು ಮಾಡಲಾಗಿದೆ. ತೆರಿಗೆಯೇತರ ರಾಜಸ್ವಗಳಿಂದ 13,500 ಕೋಟಿ ರೂ. ಸಂಗ್ರಹಿಸಬಹುದು ಎಂದು ನಿರೀಕ್ಷಿಸಲಾಗಿದೆ. ಕೇಂದ್ರ ಸರ್ಕಾರದಿಂದ 44,485 ಕೋಟಿ ರೂ.ಗಳ ತೆರಿಗೆ ಪಾಲು ಹಾಗೂ 15,300 ಕೋಟಿ ರೂ.ಗಳ ಸಹಾಯಾನುದಾನ ಸ್ವೀಕೃತಿಯಾಗಲಿದೆ ಎಂದು ಅಂದಾಜಿಸಲಾಗಿದೆ. ಈ ರಾಜಸ್ವ ಜಮೆಗಳಿಗೆ ಪೂರಕವಾಗಿ 1,05,246 ಕೋಟಿ ರೂ.ಗಳ ಸಾಲ ಮಾಡಲು ಅಂದಾಜಿಸಲಾಗಿದೆ. ಆ ಮೂಲಕ 2024-25 ರಲ್ಲಿ ಒಟ್ಟು 3,68,674 ಕೋಟಿ ರೂ. ಸ್ವೀಕೃತಿಯನ್ನು ಅಂದಾಜಿಸಲಾಗಿದೆ.

ಆದಾಯ ಕೊರತೆಯ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ ಮತ್ತೆ ಆದಾಯ ಕೊರತೆಯ ಬಜೆಟ್ ಮಂಡಿಸಿದ್ದಾರೆ. ಗ್ಯಾರಂಟಿ ಹೊರೆ ಆದಾಯಕ್ಕಿಂತ ಹೆಚ್ಚಿರುವ ಹಿನ್ನೆಲೆ ಆದಾಯ ಕೊರತೆಯ ಬಜೆಟ್ ಮಂಡಿಸಿದ್ದಾರೆ. 2024-25 ಸಾಲಿನಲ್ಲಿ 27,354 ಕೋಟಿ ರೂ. ರಾಜಸ್ವ ಕೊರತೆಯ ಬಜೆಟ್ ಮಂಡನೆ ಮಾಡಿದ್ದಾರೆ. ಕಳೆದ ಬಾರಿ ಸಿಎಂ ಸಿದ್ದರಾಮಯ್ಯ ಸುಮಾರು 12,522 ಕೋಟಿ ಆದಾಯ ಕೊರತೆ ಬಜೆಟ್ ಮಂಡಿಸಿದ್ದರು.

2024-25ರಲ್ಲಿ ರಾಜಸ್ವ ಕೊರತೆ 27,354 ಕೋಟಿ ರೂ.ಗಳೆಂದು ಅಂದಾಜು ಮಾಡಲಾಗಿದೆ. ವಿತ್ತೀಯ ಕೊರತೆ 82,981 ಕೋಟಿ ರೂ.ಗಳೆಂದು ಅಂದಾಜು ಮಾಡಲಾಗಿದ್ದು, ರಾಜ್ಯದ ಜಿ.ಎಸ್.ಡಿ.ಪಿಯ ಶೇ.2.95ರಷ್ಟಿದೆ. ರಾಜ್ಯದ ಒಟ್ಟು ಹೊಣೆಗಾರಿಕೆಯು 2024-25ರ ಅಂತ್ಯಕ್ಕೆ 6,65,095 ಕೋಟಿ ರೂ.ಗಳು ಎಂದು ಅಂದಾಜಿಸಲಾಗಿದೆ. ಅದು ಜಿ.ಎಸ್.ಡಿ.ಪಿಯ 23.68 ರಷ್ಟು ತಲುಪಲಿದೆ ಎಂದು ಅಂದಾಜಿಸಲಾಗಿದೆ. ಇನ್ನೆರಡು ವರ್ಷಗಳ ಬಳಿಕ ರಾಜಸ್ವ ಹೆಚ್ಚುವರಿಯನ್ನು ಸಾಧಿಸಬಹುದು ಎಂದು ಬಜೆಟ್ ನಲ್ಲಿ ತಿಳಿಸಿದ್ದಾರೆ.

ಬಂಡವಾಳ ವೆಚ್ಚಕ್ಕೆ 55,877 ಕೋಟಿ ರೂ: ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಆಸ್ತಿ ಸೃಜನೆ, ಮೂಲಭೂತ ಅಭಿವೃದ್ಧಿಗಾಗಿ ವಿನಿಯೋಗಿಸುವ ಬಂಡವಾಳ ವೆಚ್ಚವನ್ನು ಕಳೆದ ವರ್ಷಕ್ಕಿಂತ ಅಲ್ಪ ಏರಿಕೆ ಮಾಡಿದೆ. 2024-25 ಸಾಲಿನಲ್ಲಿ ಅಂದಾಜು 55,877 ಕೋಟಿ ರೂ. ನಿಗದಿ ಮಾಡಿದೆ. ಕಳೆದ ಬಜೆಟ್​​ನಲ್ಲಿ ಅಂದಾಜು 54,374 ಕೋಟಿ ರೂ. ಬಂಡವಾಳ ವೆಚ್ಚ ನಿಗದಿ ಮಾಡಿದ್ದರು. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಬಂಡವಾಳ ವೆಚ್ಚವನ್ನು 1503 ಕೋಟಿ ರೂ.ರಷ್ಟು ಏರಿಕೆ ಮಾಡಲಾಗಿದೆ.

ಇದನ್ನೂ ಓದಿ: ಹೋಮ್​ ಡೆಲಿವರಿ ಆ್ಯಪ್​ ಮೂಲಕ​ ಹಿರಿಯ ನಾಗರಿಕರಿಗೆ ಮನೆ ಬಾಗಿಲಿಗೆ ಅನ್ನ ಸುವಿಧಾ ಯೋಜನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.