ETV Bharat / state

ರಾಜ್ಯಪಾಲರ ಬಳಿ ಪ್ರಾಸಿಕ್ಯೂಷನ್​ ಪರ್ಮಿಷನ್​ಗೆ ಬಾಕಿಯಿರುವ 'ದೋಸ್ತಿ'ಗಳ ವಿರುದ್ಧದ ಅರ್ಜಿಗೆ ಮುಕ್ತಿ ಯಾವಾಗ: ಸಿಎಂ ಪ್ರಶ್ನೆ - CM Siddaramaiah

author img

By ETV Bharat Karnataka Team

Published : Aug 19, 2024, 10:39 PM IST

ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ. ರಾಜ್ಯಪಾಲರ ಈ ನಡೆ ಬಗ್ಗೆ ಕಾಂಗ್ರೆಸ್ ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿದೆ. ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿ ಮನವಿ ಮಾಡಿದ್ದರೂ, ರಾಜ್ಯಪಾಲರು ಈವರೆಗೆ ಅನುಮತಿ ನೀಡದೆ ಇರುವ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಷ್ಟಕ್ಕೂ ಜೆಡಿಎಸ್, ಬಿಜೆಪಿ ನಾಯಕರ ಮೇಲಿನ ಆರೋಪಗಳೇನು? ಎಂಬ ವರದಿ ಇಲ್ಲಿದೆ.

CM Siddaramaiah
ಸಿಎಂ ಸಿದ್ದರಾಮಯ್ಯ (ETV Bharat)

ಬೆಂಗಳೂರು: ಮುಡಾ ಪ್ರಕರಣ ಸಂಬಂಧ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ ದೊಡ್ಡ ತಲ್ಲಣ ಮೂಡಿಸಿದೆ. ಸಿಎಂ ಸಿದ್ದರಾಮಯ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದು, ರಾಜಕೀಯ ಪಿತೂರಿ ಮೂಲಕ ಸರ್ಕಾರದ ಪತನದ ಯತ್ನದಲ್ಲಿದೆ ಎಂದು ಆರೋಪಿಸಿದ್ದಾರೆ.

ಇತ್ತ ರಾಜ್ಯಪಾಲರ ತಾರತಮ್ಯದ ಬಗ್ಗೆ ಸರ್ಕಾರ ಕಟು ಟೀಕೆ ಮಾಡಿದೆ. ಬಿಜೆಪಿ, ಜೆಡಿಎಸ್ ದೋಸ್ತಿ ಪಕ್ಷಗಳ ನಾಯಕರ ಮೇಲೆ ಪ್ರಾಸಿಕ್ಯೂಷನ್​ಗೆ ಅನುಮತಿ ಕೋರಿ ರಾಜಭವನಕ್ಕೆ ಮನವಿ ಮಾಡಿದ್ದರೂ ಕ್ರಮ ಕೈಗೊಳ್ಳದ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಡಾ ಪ್ರಕರಣದಲ್ಲಿ ತರಾತುರಿ ನಿರ್ಧಾರ ಮಾಡಿದ್ದಾರೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.

ಬಿಜೆಪಿ-ಜೆಡಿಎಸ್ ನಾಯಕರುಗಳು ಅಕ್ರಮವೆಸಗಿದ ಆರೋಪ ಪ್ರಕರಣಗಳಲ್ಲಿ ಬಿಜೆಪಿ, ಜೆಡಿಎಸ್ ನಾಯಕರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿಗಾಗಿ ಕೋರಿದ್ದರೂ ಅದರ ಬಗ್ಗೆ ಮೌನವಹಿಸಿರುವ ರಾಜ್ಯಪಾಲರು ಪಕ್ಷಪಾತ ಮಾಡಿದ್ದಾರೆ. ಬಿಜೆಪಿ, ಕೇಂದ್ರ ಸರ್ಕಾರದ ಮಾತು ಕೇಳಿ ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ಇದರ ಜೊತೆಗೆ, ಬಿಜೆಪಿಯ ಮುಖಂಡರು ಮಾತ್ತು ಮಾಜಿ ಮುಖ್ಯಮಂತ್ರಿಯಾಗಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಪರಿಗಣಿಸಿ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಏಕೆ ಸಮ್ಮತಿ ನೀಡಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ. ಅಷ್ಟಕ್ಕೂ ಬಿಜೆಪಿ, ಜೆಡಿಎಸ್ ನಾಯಕರ ಮೇಲಿನ ಆರೋಪ ಏನು? ಎಂಬ ವರದಿ ಇಲ್ಲಿದೆ.

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರಕರಣ: ಕೇಂದ್ರ ಸಚಿವ ಹಾಗೂ ಜೆಡಿಎಸ್ ಮುಖಂಡ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಅಕ್ರಮ ಗಣಿಗಾರಿಕೆ ಸಂಬಂಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಿದ್ದರೂ ಕ್ರಮ ಕೈಗೊಂಡಿಲ್ಲ ಎಂಬುದು ಸಿಎಂ ಸಿದ್ದರಾಮಯ್ಯ ಆರೋಪವಾಗಿದೆ.‌ ಅಷ್ಟಕ್ಕೂ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಎಂಬ ಬೋಗಸ್ ಸಂಸ್ಥೆಗೆ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ 6.10.2007ರಂದು ಬಳ್ಳಾರಿಯ ಸಂಡೂರು ತಾಲೂಕಿನ ಭಾವಿಹಳ್ಳಿ, ತಿಮ್ಮಪ್ಪಗುಡಿಯಲ್ಲಿ 550 ಎಕರೆ ಜಾಗವನ್ನು ಗಣಿಗಾರಿಕೆಗೆ ಅಕ್ರಮವಾಗಿ ಗುತ್ತಿಗೆಗೆ ನೀಡಿರುವ ಆರೋಪ ಇದೆ. ಗುತ್ತಿಗೆ ನೀಡುವಾಗ ನಿಯಮ 59 (2)ನ್ನು ಉಲ್ಲಂಘಿಸಿ ಕುಮಾರಸ್ವಾಮಿಯವರು ಮಂಜೂರು ಮಾಡಿದ್ದರು ಎಂದು ಹೇಳಲಾಗಿತ್ತು.

ಈ ಅಕ್ರಮದ ಕುರಿತಾಗಿ ಎಫ್‌ಐಆರ್ ದಾಖಲಾಗಿ ಲೋಕಾಯುಕ್ತದ ಎಸ್‌ಐಟಿಯು ತನಿಖೆಯನ್ನು ಕೈಗೆತ್ತಿಕೊಂಡಿತ್ತು. ತನಿಖೆಯನ್ನು ಮಾಡಿದ ನಂತರ ಹೆಚ್‌.ಡಿ.ಕುಮಾರಸ್ವಾಮಿಯವರು ತಪ್ಪೆಸಗಿದ್ದಾರೆ ಎಂದು ಲೋಕಾಯುಕ್ತಕ್ಕೆ ಮನವರಿಕೆಯಾಗಿ ಚಾರ್ಚ್‌ಶೀಟ್ ಹಾಕಲಾಗಿದೆ. ಬಳಿಕ ಲೋಕಾಯುಕ್ತ ಎಡಿಜಿಪಿಯವರು ರಾಜ್ಯಪಾಲರ ಬಳಿ ಪ್ರಾಸಿಕ್ಯೂಷನ್​ಗೆ ಅನುಮತಿ ಕೇಳಿದ್ದಾರೆ ಎನ್ನಲಾಗಿದೆ. 21/11/2023ರಂದು ಲೋಕಾಯುಕ್ತದ ಎಡಿಜಿಪಿ ಚಂದ್ರಶೇಖರ್ ಖುದ್ದಾಗಿ ಪತ್ರವನ್ನು ರಾಜ್ಯಪಾಲರಿಗೆ ಬರೆದು ಅನುಮತಿ ನೀಡಲು ಕೋರಿದ್ದರು.‌ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಈ ಬಗ್ಗೆ ತೀರ್ಮಾನ ಕೈಗೊಂಡಿಲ್ಲ ಎಂಬುದು ಕಾಂಗ್ರೆಸ್ ಆರೋಪ.

ಮುರುಗೇಶ್ ನಿರಾಣಿ ವಿರುದ್ದದ ಆರೋಪ ಏನು?: ಬಿಜೆಪಿ ಮಾಜಿ ಸಚಿವ ಮುರುಗೇಶ್ ನಿರಾಣಿ ವಿರುದ್ಧವೂ ರಾಜ್ಯಪಾಲರ ಬಳಿ ಪ್ರಾಸಿಕ್ಯೂಷನ್ ಅನುಮತಿ ಕೋರಿ ಮನವಿ ಸಲ್ಲಿಸಲಾಗಿದೆ. ಕೈಗಾರಿಕಾ ಸಚಿವರಾಗಿದ್ದ ಮುರುಗೇಶ್ ನಿರಾಣಿ ಅಧ್ಯಕ್ಷತೆಯಲ್ಲಿ ನವೆಂಬರ್-2022ರಂದು ಬೆಂಗಳೂರಿನಲ್ಲಿ ಇನ್‌ವೆಸ್ಟ್ ಕರ್ನಾಟಕ ಸಮ್ಮೇಳನ ‌ನಡೆಸಿದ್ದರು.

ಇನ್‌ವೆಸ್ಟ್ ಕರ್ನಾಟಕವನ್ನು ಪ್ರಚುರಪಡಿಸಲು 2 ನಿಮಿಷಗಳ 3ಡಿ ವಿಡಿಯೋವನ್ನು ಚಿತ್ರೀಕರಿಸಲು ಅರ್ಹತೆ ಇಲ್ಲದ 5 ಸಂಸ್ಥೆಗೆ ಗುತ್ತಿಗೆ ನೀಡಿ, ಬರೋಬ್ಬರಿ ರೂ. 4,08,87,000 ಬೃಹತ್ ಮೊತ್ತಕ್ಕೆ ಕಾರ್ಯಾದೇಶವನ್ನು ನೀಡಿ, ಹಣವನ್ನು ಸರ್ಕಾರದಿಂದ ಬಿಡುಗಡೆ ಮಾಡಿ ಅಕ್ರಮವೆಸಗಿ, ಅಕ್ರಮ ಲಾಭ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಟಿ.ಜೆ.ಅಬ್ರಾಹಂ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು.

ಈ ಪ್ರಕರಣಗಳಲ್ಲಿ ಪ್ರಾಥಮಿಕ ತನಿಖಾ ವರದಿ ಆಧಾರದ ಮೇಲೆ ವಿಚಾರಣೆಗೆ ಅನುಮತಿ ಕೇಳಲಾಗಿದೆ. 26-02-2024 ರಂದು ಮಾಜಿ ಸಚಿವ ಮುರುಗೇಶ ನಿರಾಣಿ ವಿರುದ್ಧ ಪೂರ್ವಾನುಮತಿಗಾಗಿ ರಾಜ್ಯಪಾಲರ ಅನುಮತಿ ಕೋರಲಾಗಿದೆ. ಈ ಮನವಿಯನ್ನು ರಾಜ್ಯಪಾಲರು ಇನ್ನೂ ತೀರ್ಮಾನ ಮಾಡಿಲ್ಲ ಎಂಬುದು ಕಾಂಗ್ರೆಸ್ ಆರೋಪ.

ಜನಾರ್ಧನ ರೆಡ್ಡಿ ಮೇಲಿನ ಪ್ರಕರಣ: ಮೇ 13, 2024ರಂದು ಜನಾರ್ಧನ ರೆಡ್ಡಿ ವಿರುದ್ಧ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ವಿಚಾರಣೆಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ. ಈ ಸಂಬಂಧ ತನಿಖಾಧಿಕಾರಿ ಮಾ.7, 2024ಗೆ ಅಂತಿಮ ವರದಿ ನೀಡಿದ್ದರು. ಜನಾರ್ಧನ ರೆಡ್ಡಿ ಕುಟುಂಬ ವಿರುದ್ದ 8.06.2006 ರಿಂದ 5.09.2011 ರವರೆಗಿನ ಪರಿಶೀಲನಾ ಅವಧಿಯಲ್ಲಿ ಆದಾಯಕ್ಕಿಂತ 25.27%(ರೂ. 65,30,57,024) ರಷ್ಟು ಹೆಚ್ಚಿನ ಅಕ್ರಮ ಆಸ್ತಿಯನ್ನು ಹೊಂದಿರುವುದು ಲೋಕಾಯುಕ್ತ ತನಿಖೆಯಿಂದ ಸಾಬೀತಾಗಿತ್ತು.

ಈ ಅವಧಿಯಲ್ಲಿ ಜನಾರ್ಧನ ರೆಡ್ಡಿ ಸಚಿವರಾಗಿದ್ದು, ಭ್ರಷ್ಟಾಚಾರ ಪ್ರತಿಬಂಧಕ 1988 ರ ಕಲಂ 19(1) (ಬಿ) ರಡಿಯಲ್ಲಿ ಅಭಿಯೋಜನಾ ಮಂಜೂರಾತಿ ಆದೇಶವನ್ನು ಮಂಜೂರು ಮಾಡಬೇಕು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಮಹಾನಿರ್ದೇಶಕರು ಮನವಿ ಮಾಡಿದ್ದರು. ಈ ಪ್ರಕರಣದಲ್ಲಿ ಪ್ರಾಥಮಿಕ ತನಿಖೆ ವರದಿ ಇದ್ದು, ಅದರ ಆಧಾರದ ಮೇಲೆ ವಿಚಾರಣೆಗೆ ಅನುಮತಿ ಕೇಳಲಾಗಿದೆ. ಈ ಮನವಿಯನ್ನ ರಾಜ್ಯಪಾಲರು ಇನ್ನೂ ತೀರ್ಮಾನ ಮಾಡಿಲ್ಲ ಎಂಬುದು ಕಾಂಗ್ರೆಸ್ ಸರ್ಕಾರದ ಗಂಭೀರ ಆರೋಪ.

ಮಾಜಿ ಸಚಿವೆ ಶಶಿಕಲಾ‌ ಜೊಲ್ಲೆ ಮೇಲಿನ ಅಕ್ರಮ ಪ್ರಕರಣ: 9-12-2021ರಂದು ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಅವರ ವಿರುದ್ದ ಮೊಟ್ಟೆ ಅಕ್ರಮ ಟೆಂಡರ್ ಪ್ರಕರಣದಲ್ಲಿ ವಿಚಾರಣೆಗೆ ಅನುಮತಿ ನೀಡುವಂತೆ ಕೋರಿ ರಾಜ್ಯಪಾಲರಿಗೆ ಪತ್ರ ಬರೆಯಲಾಗಿದೆ. ಎಸಿಬಿ ತನಿಖಾ ವರದಿ ಆಧರಿಸಿ ಆರ್​ಟಿಐ ಕಾರ್ಯಕರ್ತ ಭೀಮಪ್ಪ‌ ಗುಂಡಪ್ಪ ಗಡಾದ್ ಎಂಬವರು ರಾಜ್ಯಪಾಲರ ಬಳಿ ಪ್ರಾಸಿಕ್ಯೂಷನ್​ಗೆ ಅನುಮತಿ ಕೇಳಿದ್ದರು. ಈ ಪ್ರಕರಣದಲ್ಲೂ ಪ್ರಾಥಮಿಕ ತನಿಖೆ ವರದಿ ಇದೆ. ಅದರ ಆಧಾರದ ಮೇಲೆ ವಿಚಾರಣೆಗೆ ಅನುಮತಿ ಕೇಳಲಾಗಿದೆ. ಆದರೆ ಈವರೆಗೆ ರಾಜ್ಯಪಾಲರು ತೀರ್ಮಾನ ಕೈಗೊಂಡಿಲ್ಲ ಎಂಬುದು ಸಿಎಂ ಸಿದ್ದರಾಮಯ್ಯ ಆರೋಪವಾಗಿದೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ: ಹೈಕೋರ್ಟ್​ನಲ್ಲಿ ನಡೆದ ವಾದವೇನು? - Muda Scam

ETV Bharat Logo

Copyright © 2024 Ushodaya Enterprises Pvt. Ltd., All Rights Reserved.