ETV Bharat / state

ಸಚಿವ ಸಂಪುಟದ ಮುಂದಿಟ್ಟು ಜಾತಿ ಗಣತಿ ವರದಿ ಜಾರಿಗೆ ಕ್ರಮ: ಸಿಎಂ ಸಿದ್ದರಾಮಯ್ಯ - Caste Census Report

ಜಾತಿ ಗಣತಿ ವರದಿ ಎಂದೇ ಜನಪ್ರಿಯವಾಗಿರುವ ಸಾಮಾಜಿಕ ಆರ್ಥಿಕ ಮತ್ತು ಶಿಕ್ಷಣ ಸಮೀಕ್ಷೆಯ ವರದಿಯನ್ನು ಸಚಿವ ಸಂಪುಟದ ಮುಂದಿಟ್ಟು, ಶಿಫಾರಸುಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಹಿಂದುಳಿದ ವರ್ಗಗಳ ವಸತಿ ನಿಲಯಗಳ ಹಳೆ ವಿದ್ಯಾರ್ಥಿಗಳ ಸಂಘದ ಕಾರ್ಯಕ್ರಮ
ಹಳೆ ವಿದ್ಯಾರ್ಥಿಗಳ ಸಂಘದ ಕಾರ್ಯಕ್ರಮ (ETV Bharat)
author img

By ETV Bharat Karnataka Team

Published : Sep 29, 2024, 7:36 PM IST

ಮೈಸೂರು: ಸೌಲಭ್ಯ ವಂಚಿತರನ್ನು ಗುರುತಿಸಲೆಂದೇ ನಮ್ಮ ಸರ್ಕಾರ ಸಾಮಾಜಿಕ ಗಣತಿಯನ್ನು ನಡೆಸಿದ್ದು, ಮುಂದಿನ ದಿನಗಳಲ್ಲಿ ಈ ವರದಿಯನ್ನು ಸಚಿವ ಸಂಪುಟದ ಮುಂದಿಟ್ಟು ಶಿಫಾರಸುಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನಲ್ಲಿಂದು ಹಿಂದುಳಿದ ವರ್ಗಗಳ ವಸತಿ ನಿಲಯಗಳ ಹಳೆ ವಿದ್ಯಾರ್ಥಿಗಳ ಸಂಘದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಾತಿ ಗಣತಿ ವರದಿಯನ್ನು ಸರ್ಕಾರ ಸ್ವೀಕರಿಸಿದೆ. ಆದರೆ ಹಲವು ಕಾರಣಗಳಿಂದ ಆ ವರದಿ ಇನ್ನೂ ಜಾರಿಯಾಗಿಲ್ಲ. ದೇಶದಲ್ಲಿ ಜನ ಗಣತಿಯೊಂದಿಗೆ ಜಾತಿ ಗಣತಿ ಕಾರ್ಯ 1930ರ ನಂತರ ಆಗಿಲ್ಲ. ಈಗ ಎಲ್ಲಾ ರಾಜ್ಯಗಳಲ್ಲಿ ಜಾತಿ ಗಣತಿ ಕುರಿತು ಚರ್ಚೆ ನಡೆಯುತ್ತಿದೆ ಎಂದರು.

ಹಿಂದುಳಿದವರು, ದಲಿತ - ಅಲ್ಪಸಂಖ್ಯಾತರಿಗೆ ಸಮಾನ ಅವಕಾಶ ದೊರೆಯಬೇಕೆಂಬುದು ಸಂವಿಧಾನ ರಚಿಸಿದ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಉದ್ದೇಶವಾಗಿತ್ತು. ಅವಕಾಶಗಳಿಂದ ವಂಚಿತ ಆಗಿರುವುದರಿಂದಲೇ ಈ ಅಸಮಾನತೆ ಸೃಷ್ಟಿಯಾಗಿದೆ. ಎಲ್ಲರಿಗೂ ಸಮಾನ ಅವಕಾಶವನ್ನು ಸಂವಿಧಾನದ ಮೂಲಕ ಕಲ್ಪಿಸಿಕೊಡಲು ಅವರು ಪ್ರಯತ್ನಿಸಿದರು. ಸಾಮಾಜಿಕ ಜವಾಬ್ದಾರಿಯನ್ನು ಈ ತಲೆಮಾರಿನಲ್ಲಿ ಮೂಡಿಸುವ ಉದ್ದೇಶದಿಂದ ಸಂವಿಧಾನ ಪೀಠಿಕೆ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ರಾಜ್ಯಾದ್ಯಂತ ನಾವು ಮಾಡಿದ್ದೇವೆ ಎಂದು ಹೇಳಿದರು.

ಹಿಂದುಳಿದ ವರ್ಗಗಳ ವಸತಿ ನಿಲಯಗಳ ಹಳೆ ವಿದ್ಯಾರ್ಥಿಗಳ ಸಂಘದ ಕಾರ್ಯಕ್ರಮ
ಹಿಂದುಳಿದ ವರ್ಗಗಳ ವಸತಿ ನಿಲಯಗಳ ಹಳೆ ವಿದ್ಯಾರ್ಥಿಗಳ ಸಂಘದ ಕಾರ್ಯಕ್ರಮ (ETV Bharat)

ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಈಗಲೂ ಸಮಾಜದಲ್ಲಿ ಜಾತಿ ಶ್ರೇಣಿಯನ್ನು ಮುಂದುವರೆಸಲು ಪ್ರಯತ್ನಿಸುತ್ತಿದ್ದಾರೆ. ಅವರು ಈ ಸಮಾಜದಲ್ಲಿ ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ಮುಂದೆ ಬರುವುದನ್ನು ಇಚ್ಛೆ ಪಡುವುದಿಲ್ಲ. ಈ ಹಿನ್ನೆಲೆಯಲ್ಲಿ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಬಡವರಿಗೆ ಆರ್ಥಿಕ, ಸಾಮಾಜಿಕವಾಗಿ ಶಕ್ತಿ ನೀಡಲು ಭಾಗ್ಯ ಯೋಜನೆಗಳನ್ನು ಜಾರಿಗೊಳಿಸಿದ್ದೆ. ಈಗ ಐದು ಗ್ಯಾರಂಟಿ ಯೋಜನೆಗಳ ಮೂಲಕ ಸಮಾಜದ ಎಲ್ಲಾ ಜಾತಿಯ ದುರ್ಬಲ ವರ್ಗಕ್ಕೆ ಆರ್ಥಿಕವಾಗಿ ಶಕ್ತಿ ತುಂಬುವ ಕಾರ್ಯವನ್ನು ಮಾಡಲಾಗಿದೆ ಸಿಎಂ ಸಮರ್ಥಿಸಿಕೊಂಡರು.

ಹಿಂದುಳಿದ ವರ್ಗ , ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಶಿಕ್ಷಣ ಕಡ್ಡಾಯವಾಗಿ ದೊರೆಯಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿ ನಿಲಯಗಳು ಅತ್ಯಾವಶ್ಯಕ. ಜಾತಿ ವ್ಯವಸ್ಥೆ ಆರ್ಥಿಕ, ಸಾಮಾಜಿಕ ಅಸಮಾನತೆಗೆ ಕಾರಣವಾಗಿದೆ. ದುರ್ಬಲ ವರ್ಗದ ಜನರು ಅವಕಾಶದಿಂದ ವಂಚಿತರಾಗುತ್ತಿದ್ದಾರೆ. ಸಮಾನ ಅವಕಾಶಗಳು ದೊರೆಯುವ ಮೂಲಕ ತುಳಿತಕ್ಕೊಳಗಾದವರು ಜೀವನದಲ್ಲಿ ಅಭಿವೃದ್ಧಿ ಹೊಂದುವಂತಾಗಬೇಕು ಎಂದು ಹೇಳಿದರು.

ವಿದ್ಯಾರ್ಥಿ ವೇತನ ಹೆಚ್ಚಳ: ವಿದ್ಯಾರ್ಥಿ ನಿಲಯಗಳಲ್ಲಿ ಪೌಷ್ಟಿಕ ಆಹಾರ ದೊರಕಿಸುವ ಉದ್ದೇಶದಿಂದ ಪ್ರೀಮೆಟ್ರಿಕ್ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನವನ್ನು ಹೆಚ್ಚಳ ಮಾಡಿದೆ. ವಿದ್ಯಾರ್ಥಿ ವೇತನವನ್ನು ಹಂತ ಹಂತವಾಗಿ ಮುಂಚೆ ಇದ್ದ 750 ರೂ. ಯಿಂದ 1750 ರೂ.ಗಳಿಗೆ ಹೆಚ್ಚಿಸಲಾಗಿತ್ತು. 2024-25 ಸಾಲಿನಲ್ಲಿಯೂ ಕೂಡ ವಿದ್ಯಾರ್ಥಿ ವೇತನವನ್ನು 1850 ರೂ.ಗಳಿಗೆ ಪುನಃ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.

ಪ್ರತಿ ಹೋಬಳಿಗೊಂದು ವಸತಿ ಶಾಲೆ ಗುರಿ ಸಾಧಿಸಲು ಬದ್ಧ: ಹೋಬಳಿಗೊಂದು ವಸತಿ ಶಾಲೆ ಯೋಜನೆಯಂತೆ ರಾಜ್ಯದಲ್ಲಿ ಒಟ್ಟು 822 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ನಿರ್ಮಿಸಲಾಗಿದೆ. ಈ ವರ್ಷ 20 ವಸತಿ ಶಾಲೆ ನಿರ್ಮಿಸಲು ತೀರ್ಮಾನಿಸಲಾಗಿದೆ. ಹಳ್ಳಿಗಾಡಿನ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ಮುಂದಿನ ವರ್ಷದೊಳಗೆ ರಾಜ್ಯದ ಪ್ರತಿ ಹೋಬಳಿಯಲ್ಲಿ ಒಂದು ವಸತಿ ಶಾಲೆ ನಿರ್ಮಿಸುವ ಗುರಿಯನ್ನು ಸಾಧಿಸಬೇಕು ಎಂದರು.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಇ.ಡಿಗೂ ದೂರು ನೀಡಿದ ಸ್ನೇಹಮಯಿ ಕೃಷ್ಣ - Muda Scam

ETV Bharat Logo

Copyright © 2024 Ushodaya Enterprises Pvt. Ltd., All Rights Reserved.