ETV Bharat / state

'ಗಾಂಧಿ ಭಾರತ' ಹೆಸರಿನಲ್ಲಿ‌ ವರ್ಷಪೂರ್ತಿ ರಾಜ್ಯದೆಲ್ಲೆಡೆ ಕಾರ್ಯಕ್ರಮ: ಸಿಎಂ ಸಿದ್ದರಾಮಯ್ಯ - SIDDARAMAIAH

ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಬಳಿಕ ರಾಜಕೀಯದಲ್ಲಿ ಬದಲಾವಣೆ ಏನಾದರೂ ಇದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಬದಲಾವಣೆ ಎನ್ನುವುದು ನಿರಂತರ ಪ್ರಕ್ರಿಯೆ ಎಂದರು.

CM REACT ON POLITICAL CHANGE
ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : 11 hours ago

ಬೆಳಗಾವಿ: "1924ರ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಹಿನ್ನೆಲೆಯಲ್ಲಿ ಗಾಂಧೀಜಿ ವಿಚಾರಧಾರೆಯನ್ನು ಪ್ರಚುರಪಡಿಸಲು 'ಗಾಂಧಿ ಭಾರತ' ಹೆಸರಿನಲ್ಲಿ‌ ವರ್ಷಪೂರ್ತಿ ರಾಜ್ಯದೆಲ್ಲೆಡೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ" ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

"ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ ನೂರು ವರ್ಷಗಳಾಗಿವೆ. ಈಗ ಶತಮಾನೋತ್ಸವ ಆಚರಣೆ ಮಾಡುತ್ತಿದ್ದೇವೆ. 26ರಂದು ಮೂರು ಗಂಟೆಗೆ ಎಐಸಿಸಿ ಕಾರ್ಯಕಾರಣಿ ಸಭೆ ಇದೆ. 27ರಂದು ಸುವರ್ಣ ಸೌಧದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಉದ್ಘಾಟನೆ ಆಗಲಿದೆ. ಮಧ್ಯಾಹ್ನ ಬೃಹತ್ ಸಮಾವೇಶ ಕಾರ್ಯಕ್ರಮ ಕೂಡ ನಡೆಯಲಿದೆ‌" ಎಂದು‌ ತಿಳಿಸಿದರು.

ಸಿಎಂ ಸಿದ್ದರಾಮಯ್ಯ (ETV Bharat)

ಕಾಂಗ್ರೆಸ್ ಶತಮಾನೋತ್ಸವದಿಂದ ಬದಲಾವಣೆ ಆಗುತ್ತಾ ಎಂಬ ಪ್ರಶ್ನೆಗೆ, "ಯಾವಾಗಲೂ ಬದಲಾವಣೆ ಆಗುತ್ತಿರುತ್ತದೆ.‌ ಬದಲಾವಣೆ ಎನ್ನುವುದು ನಿರಂತರ ಪ್ರಕ್ರಿಯೆ. ನೂರು ವರ್ಷದಲ್ಲಿ ಇದ್ದಂತಹ ಪರಿಸ್ಥಿತಿ ಈಗಿಲ್ಲ. ರಾಜಕೀಯ ಬದಲಾವಣೆ ಆಗುತ್ತದೆ. ರಾಜಕೀಯ ಚಳುವಳಿಗಳು ಆಗುತ್ತವೆ" ಎಂದರು.

ಸರ್ಕಾರದ ವಿರುದ್ದ ರಾಜ್ಯಪಾಲರಿಗೆ ಶಾಸಕ ಸಿ.ಟಿ.ರವಿ ದೂರು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, "ಸಿ.ಟಿ.ರವಿಯವರು ತಮ್ಮ ತಪ್ಪನ್ನು ಮರೆಮಾಚಲು ಈ ರೀತಿ ಮಾಡುತ್ತಿದ್ದು, ಅವರ ಪ್ರಕರಣವನ್ನು ಸಿಐಡಿ ತನಿಖೆ ಮಾಡುತ್ತಿದೆ. ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು" ಎಂದ ತಿಳಿಸಿದರು.

ಸಿ.ಟಿ.ರವಿ ಪ್ರಕರಣ ಸಂಬಂಧ ಒಬ್ಬ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿ, "ಪೊಲೀಸ್ ಠಾಣೆಯಲ್ಲಿ ಬಿಜೆಪಿ ಪಕ್ಷದ ಸಭೆ ನಡೆಸಲು ಅವಕಾಶ ಕೊಟ್ಟ ಕಾರಣಕ್ಕಾಗಿ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಪೊಲೀಸ್ ಠಾಣೆಯೊಂದರಲ್ಲಿ ರಾಜಕೀಯ ಪಕ್ಷದ ಸಭೆ ನಡೆಸಲು ಅವಕಾಶ ನೀಡಿದ್ದು ತಪ್ಪು. ಸಿ.ಟಿ.ರವಿಯವರಿಗೆ ರಕ್ಷಣೆ ನೀಡುವ ಉದ್ದೇಶದಿಂದ ಅವರನ್ನು ಬೇರೆಡೆಗಳಿಗೆ ಕರೆದೊಯ್ಯಲಾಗಿತ್ತು ಎಂದು ಬೆಳಗಾವಿಯ ಪೊಲೀಸ್ ಕಮಿಷನರ್ ಸಹ ಸ್ಪಷ್ಟಪಡಿಸಿದ್ದಾರೆ" ಎಂದು ಸಮರ್ಥಿಸಿಕೊಂಡರು.

ಇದನ್ನೂ ಓದಿ: ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ: ಮೂವರು ಕಿಡಿಗೇಡಿಗಳ ಬಂಧನ - EGG ATTACK ON BJP MLA MUNIRATHNA

ETV Bharat Logo

Copyright © 2024 Ushodaya Enterprises Pvt. Ltd., All Rights Reserved.