ETV Bharat / state

'ಮೋದಿ ಪ್ರಧಾನಿಯಾದರೆ ದೇಶ ತೊರೆಯುವೆನೆಂದು ದೇವೇಗೌಡರು ಹೇಳಿದ್ದು ಮರೆತೋಯ್ತಾ?' - CM Siddaramaiah

ದೇವೇಗೌಡರು ತಮ್ಮ ಪಕ್ಷದ ಉಳಿವಿಗಾಗಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಈ ಮೂಲಕ ಅವರು ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು.

cm-siddaramaiah-reaction-on-farmer-prime-minister-h-d-devegowda
ಮೋದಿ ಪ್ರಧಾನಿಯಾದರೆ ದೇಶ ತೊರೆಯುತ್ತೇನೆ ಎಂದು ದೇವೇಗೌಡರು ಹೇಳಿದ್ದು ಮರೆತುಹೋಯ್ತಾ: ಸಿಎಂ ಸಿದ್ದರಾಮಯ್ಯ
author img

By ETV Bharat Karnataka Team

Published : Mar 10, 2024, 5:57 PM IST

Updated : Mar 10, 2024, 6:43 PM IST

ಬೆಂಗಳೂರು: "ನರೇಂದ್ರ ಮೋದಿಯವರು ಪ್ರಧಾನಿಯಾದರೆ ದೇಶ ತೊರೆಯುತ್ತೇನೆ ಎಂದು ದೇವೇಗೌಡರು ಹೇಳಿದ್ದು ಮರೆತುಹೋಯ್ತಾ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಕರ್ನಾಟಕ ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಪುಟ್ಟಣ್ಣ ಜಯಗಳಿಸಿರುವ ಹಿನ್ನೆಲೆಯಲ್ಲಿ ಕಂಗೇರಿಯ ಸೂಲಿಕೇರಿ ಮೈದಾನದಲ್ಲಿ ಆಯೋಜಿಸಿರುವ ಶಿಕ್ಷಕರ ಕೃತಜ್ಞತಾ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಈ ಸಂದರ್ಭದಲ್ಲಿ, "ಮಾಜಿ ಪ್ರಧಾನಿ ದೇವೇಗೌಡರು ಈಗ ಬಿಜೆಪಿ ಜೊತೆ ಸೇರಿರುವುದು, ಮೋದಿಯವರನ್ನು ವಿಪರೀತ ಹೊಗಳುತ್ತಿರುವುದು ನನಗೆ ತುಂಬಾ ಆಶ್ಚರ್ಯ ಉಂಟುಮಾಡಿದೆ" ಎಂದರು.

"ದೇವೇಗೌಡರು ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟಲು ಬಯಸುತ್ತೇನೆ. ಬಿಜೆಪಿಗೆ ಯಾವತ್ತೂ ವಿರುದ್ಧವಾಗಿರುತ್ತೇವೆ ಎಂದಿದ್ದರು. ಈಗ ತಮ್ಮ ಪಕ್ಷದ ಉಳಿವಿಗಾಗಿ ಬಿಜೆಪಿ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ದೇವೇಗೌಡರು ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ. ಇಂದು ನಾಡಿನ ಜನತೆ ನಿಮ್ಮ ಹಾಗೆಯೇ ಪ್ರಜ್ಞಾವಂತರಾಗಿದ್ದಾರೆ. ಇವರ ಹೇಳಿಕೆಗಳನ್ನು ಪರಿಶೀಲಿಸಿ ತುಲನೆ ಮಾಡುವಷ್ಟು ತಿಳಿವಳಿಕೆ ಜನರಿಗಿದೆ. ರಾಜಕೀಯವಾಗಿ ದೇವೇಗೌಡರು ತಮ್ಮ ಕುಟುಂಬದ ಉಳಿವಿಗಾಗಿ ಯಾವುದೇ ನಿರ್ಧಾರಕ್ಕೆ ಬಂದರೂ ಜನರು ಕಣ್ಣುಮುಚ್ಚಿಕೊಂಡು ಅವರನ್ನು ಬೆಂಬಲಿಸಬೇಕೆನ್ನುವ ಸಂದರ್ಭ ಈಗ ಇಲ್ಲ" ಎಂದು ಹೇಳಿದರು.

ಡಿ.ಕೆ.ಸುರೇಶ್ ಗೆಲ್ಲುವ ವಿಶ್ವಾಸವಿದೆ: "ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಕುಮಾರಸ್ವಾಮಿ ಹೇಳಿದ್ದರು. ಈಗ ಜನರೇ ತೀರ್ಮಾನಿಸಬೇಕು. ಬೆಂಗಳೂರು ಗ್ರಾಮಾಂತರದಿಂದ ಡಿ.ಕೆ.ಸುರೇಶ್ ಅವರನ್ನು 4 ಬಾರಿ ಕಣಕ್ಕಿಳಿಸಲಾಗಿದೆ. ಈ ಕ್ಷೇತ್ರದಲ್ಲಿ ಅವರು ಖಂಡಿತಾ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವಿದೆ. ಬಿಜೆಪಿಯವರು ನರೇಂದ್ರ ಮೋದಿಯವರ ಹೆಸರಿನಲ್ಲಿ ಗೆಲ್ಲುವ ವಿಶ್ವಾಸದಲ್ಲಿದ್ದಾರೆಯೇ ಹೊರತು ಬಿಜೆಪಿಯವರಿಗೆ ಜನರ ಬಳಿ ಹೋಗಲು ಕಾರಣಗಳೇ ಇಲ್ಲ" ಎಂದರು.

"ಕೊಟ್ಟ ಮಾತಿನಂತೆ ನಡೆದುಕೊಳ್ಳವವರು, ಕೆಲಸ ಮಾಡಿರುವವರಿಗೆ ತಾನೇ ಕೂಲಿ ಕೊಡುವುದು. ಗೇಯುವ ಎತ್ತಿಗೆ ಹುಲ್ಲು ಹಾಕಬೇಕು. ಕಳ್ಳ ಎತ್ತಿಗೆ ಹುಲ್ಲು ಹಾಕಬಾರದು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅವರು 28ಕ್ಕೆ 28 ಗೆಲ್ಲುತ್ತೇವೆ ಎಂದುಕೊಂಡಿದ್ದಾರೆ. 2023-24ರಲ್ಲಿ ಕರ್ನಾಟಕದಿಂದ 4.30 ಲಕ್ಷ ಕೋಟಿ ರೂಪಾಯಿ ಈ ವರ್ಷ ತೆರಿಗೆ ಸಂಗ್ರಹಿಸಿ ನೀಡಲಾಗಿದೆ. ಆದರೆ ನಮಗೆ 50,257 ಕೋಟಿ ರೂ ಮಾತ್ರ ವಾಪಸ್ ಬಂದಿದೆ. ಇದು ಅತ್ಯಂತ ಅನ್ಯಾಯ. ಹೀಗಾದರೆ ಕರ್ನಾಟಕದ ಅಭಿವೃದ್ಧಿ ಹೇಗಾಗಬೇಕು. ತೆರಿಗೆ ಹಂಚಿಕೆಯಲ್ಲಿ ನಮಗೆ ನ್ಯಾಯ ನೀಡಬೇಕು ಎಂದು ಇಡೀ ರಾಜ್ಯದ ಜನರೇ ಪ್ರಶ್ನಿಸುತ್ತಿದ್ದಾರೆ" ಎಂದು ಹೇಳಿದರು.

ಶಿಕ್ಷಕರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಭೆ: ಶಿಕ್ಷಕರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಶಿಕ್ಷಕರ ಪ್ರತಿನಿಧಿಗಳು, ಆರ್ಥಿಕ ಇಲಾಖೆಯೊಂದಿಗೆ ಕೂಡಲೇ ಸಭೆ ನಡೆಸಲಾಗುವುದು. ರಾಮೋಜಿಗೌಡ, ಶ್ರೀನಿವಾಸ್ ಇಬ್ಬರೂ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಪುಟ್ಟಣ್ಣನವರನ್ನು ಗೆಲ್ಲಿಸಿದಂತೆಯೇ ಈ ಇಬ್ಬರೂ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿ, ಪುಟ್ಟಣ್ಣನವರ ಜಯ ಶಿಕ್ಷಕರ ಜಯ ಎಂದು ಬಣ್ಣಿಸಿದರು.

ಇದನ್ನೂ ಓದಿ: ಸಿದ್ದರಾಮಯ್ಯನವರೇ ನೀವೇ ನಮ್ಮ 'ನೀರೋ' ರಾಜ್ಯದ ಪಾಲಿನ ಝೀರೋ: ಹೆಚ್​ಡಿಕೆ ಟೀಕೆ

Last Updated : Mar 10, 2024, 6:43 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.