ETV Bharat / state

ಮುಡಾ ನಿವೇಶನ ಹಂಚಿಕೆ ಪ್ರಕರಣ: ಎಲ್ಲ ನಿವೇಶನಗಳು ಅಮಾನತು, ಐಎಎಸ್ ಅಧಿಕಾರಿಗಳಿಂದ ತನಿಖೆ: ಸಿಎಂ - CM Siddaramaiah

ಮುಡಾ ನಿವೇಶನ ಹಂಚಿಕೆಯಲ್ಲಿ ದುರುಪಯೋಗ ಆಗಿದೆಯೋ, ಇಲ್ಲವೋ ಎಂದು ಪತ್ತೆ ಹಚ್ಚಲು ತನಿಖೆ ಮಾಡಲಾಗುತ್ತಿದೆ. ಜಮೀನು ಕೊಟ್ಟವರಿಗೆ ಪರ್ಯಾಯವಾಗಿ ನಿವೇಶನ ನೀಡಬೇಕು ಎಂದು ಬಿಜೆಪಿಯೇ ಕಾನೂನು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

CM Siddaramaiah
ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Jul 3, 2024, 3:59 PM IST

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆಯಲ್ಲಿ ದುರುಪಯೋಗ ಆಗಿದೆಯೋ, ಇಲ್ಲವೋ ಎಂದು ಪತ್ತೆ ಹಚ್ಚಲು ತನಿಖೆ ಮಾಡಲಾಗುತ್ತಿದ್ದು, ಎಲ್ಲ ನಿವೇಶನಗಳನ್ನು ಅಮಾನತಿನಲ್ಲಿ ಇಡಲಾಗಿದೆ. ಹಾಗಾಗಿ ಸರ್ಕಾರಕ್ಕೆ ನಷ್ಟವಾಗಿಲ್ಲ. ನಿವೇಶನಗಳನ್ನು ಹಂಚಿಕೆ ಮಾಡಿದ್ದವರನ್ನು ವರ್ಗಾವಣೆ ಮಾಡಿ ಹಿರಿಯ ಐಎಎಸ್ ಅಧಿಕಾರಿಗಳಿಂದ ತನಿಖೆ ಮಾಡಿಸಲಾಗುತ್ತಿದೆ. ವರದಿ ಬಂದ ನಂತರ ಈ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಇಂದು ಆಯೋಜಿಸಿದ್ದ ಭೂ ಪರಿವರ್ತನೆ ಮತ್ತು ಒಣಭೂಮಿ ನಿರ್ವಹಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಮುಡಾ ನಿವೇಶನ ಹಂಚಿಕೆಯಲ್ಲಿ ದುರುಪಯೋಗವಾಗಿದೆ ಎಂಬ ಬಿಜೆಪಿ ಆರೋಪ ಮತ್ತು ಸಿಬಿಐಗೆ ಪ್ರಕರಣ ಹಸ್ತಾಂತರ ಮಾಡಲು ಒತ್ತಾಯಿಸಿರುವ ಬಗ್ಗೆ ಪ್ರತಿಕ್ರಿಯಿಸಿ, ಎಲ್ಲವನ್ನೂ ಸಿಬಿಐಗೆ ಹಸ್ತಾಂತರಿಸಲು ಏಕೆ ಹೇಳುತ್ತಾರೆ?. ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐಗೆ ಹಸ್ತಾಂತರ ಮಾಡಿದ್ದರು?. ಜಮೀನು ಕೊಟ್ಟವರಿಗೆ ಪರ್ಯಾಯವಾಗಿ ನಿವೇಶನ ನೀಡಬೇಕೆಂದು ಬಿಜೆಪಿಯೇ ಕಾನೂನು ಮಾಡಿದ್ದು ಎಂದರು.

ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ: ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂಬ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಈ ಪ್ರಕರಣದಲ್ಲಿ ನನ್ನ ಪಾತ್ರವೇನಿದೆ?. ಆರ್.ಅಶೋಕ್ ಕರ್ತವ್ಯ ಲೋಪವೆಸಗಿದ್ದಾರೆ ಎಂದರೆ ರಾಜೀನಾಮೆ ಕೊಡುತ್ತಾರೆಯೇ? ಅವರ ಕಾಲದಲ್ಲಿ ಅಕ್ರಮ, ಸಕ್ರಮ ಸರಿಯಾದ ರೀತಿಯಲ್ಲಿ ಆಗಿಲ್ಲ ಎಂದು ಆರೋಪ ಕೇಳಿ ಬಂದಾಗ ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾರೆ. ಅದಕ್ಕೆ ರಾಜೀನಾಮೆ ಕೊಡಿ ಅಂದರೆ ಕೊಡುತ್ತಾರೆಯೇ ಎಂದು ಮರು ಪ್ರಶ್ನೆ ಮಾಡಿದರು.

ವಾಲ್ಮೀಕಿ ನಿಗಮದ ಅಕ್ರಮಗಳ ಬಗ್ಗೆ ತನಿಖೆ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅಕ್ರಮಗಳ ಬಗ್ಗೆ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಮಾತನಾಡಿದ ಸಿಎಂ, ವಾಲ್ಮೀಕಿ ನಿಗಮದ ಪ್ರಕರಣವನ್ನು ಎಸ್‍ಐಟಿಗೆ ವಹಿಸಲಾಗಿದ್ದು, ತನಿಖೆ ನಡೆಯುತ್ತಿದೆ. ಸಚಿವರಾಗಿದ್ದ ನಾಗೇಂದ್ರ ಅವರಿಂದ ರಾಜೀನಾಮೆ ಪಡೆಯಲಾಗಿದೆ. ಡೆತ್​ನೋಟ್​ನಲ್ಲಿ ಮಂತ್ರಿಗಳು ವ್ಯವಸ್ಥಾಪಕ ನಿರ್ದೇಶಕರಿಗೆ ಮೌಖಿಕ ಆದೇಶ ನೀಡಿದ್ದರು ಎಂದು ಬರೆದಿರುವ ಕಾರಣ ರಾಜೀನಾಮೆ ಪಡೆದೆವು. ಬ್ಯಾಂಕ್ ವ್ಯವಹಾರಗಳ ಬಗ್ಗೆ ಸಿಬಿಐ ತನಿಖೆ ಕೈಗೊಂಡಿದೆ ಎಂದು ಹೇಳಿದರು.

ಇದೇ ವೇಳೆ, ಸಚಿವ ಶರಣ ಪ್ರಕಾಶ್ ಪಾಟೀಲ್, ಶಾಸಕ ದದ್ದಲ್ ಅವರಿಗೂ ಪಾಲು ಹೋಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ಇಂತಹ ಆರೋಪಗಳಿಂದಲೇ ಎಸ್‍ಐಟಿ ರಚನೆಯಾಗಿದೆ. ತನಿಖೆಯ ವರದಿ ಬರಬೇಕು. ಅವರ ಮೇಲೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಬೇಕು. ಇದ್ಯಾವುದೂ ಇಲ್ಲದೇ ಕ್ರಮ ಕೈಗೊಳ್ಳುವುದು ಹೇಗೆ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಸಿಎಂ ನಿವಾಸಕ್ಕೆ ಬಿಜೆಪಿ ಮುತ್ತಿಗೆ ಯತ್ನ, ಹಲವರು ವಶಕ್ಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.