ETV Bharat / state

ಮುಂದಿನ 7 ವರ್ಷಗಳಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ: ಸಿಎಂ ಸಿದ್ದರಾಮಯ್ಯ - cm siddaramaiah

ಸಮಗ್ರ ಕೃಷಿಗೆ ಹೆಚ್ವಿನ ಬೆಂಬಲ ನೀಡುವ ಸಲುವಾಗಿ ಕೃಷಿಯ ಉಪಕಸುಬುಗಳ ಬೆಳವಣಿಗೆಗೆ ಸರ್ಕಾರ ಸಂಪೂರ್ಣ ಸಹಕಾರ, ಬೆಂಬಲ ನೀಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Etv Bharat
Etv Bharat
author img

By ETV Bharat Karnataka Team

Published : Mar 9, 2024, 10:23 PM IST

ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂದಿನ 7 ವರ್ಷಗಳಲ್ಲಿ ರಾಜ್ಯದಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ ಹಮ್ಮಿಕೊಂಡಿದ್ದೇವೆ. ಈ ದಿಕ್ಕಿನಲ್ಲಿ ನಮ್ಮ ಸಿದ್ಧತೆಗಳು ಆಗಲೇ ಆರಂಭಗೊಂಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಕೆವಿಕೆ ಆವರಣದಲ್ಲಿ ಇಂದು ಆಯೋಜಿಸಿದ್ದ ರೈತ ಸೌರಶಕ್ತಿ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲೇ ಅತಿ ಹೆಚ್ಚು ಒಣಭೂಮಿ ಹೊಂದಿರುವ ಎರಡನೇ ರಾಜ್ಯ ಕರ್ನಾಟಕ. ಹೀಗಾಗಿ ಒಣಭೂಮಿಯ ಕೃಷಿಗೆ ಆದ್ಯತೆ ನೀಡಿ ಸಂಶೋಧನೆಗಳು ನಡೆಯಬೇಕು. ಜನಸಂಖ್ಯೆ ಹೆಚ್ಚಾಗಿ ರೈತರ ಬೆಳೆಗಳ ಇಳುವರಿ ಪ್ರಮಾಣ ಕಡಿಮೆ ಆಗುತ್ತಿದೆ. ಆದ್ದರಿಂದ ಸಮಗ್ರ ಕೃಷಿಗೆ ಹೆಚ್ವಿನ ಬೆಂಬಲ ನೀಡುವ ಸಲುವಾಗಿ ಕೃಷಿಯ ಉಪಕಸುಬುಗಳ ಬೆಳವಣಿಗೆಗೆ ಸರ್ಕಾರ ಸಂಪೂರ್ಣ ಸಹಕಾರ, ಬೆಂಬಲ ನೀಡುತ್ತಿದೆ ಎಂದರು.

ಪ್ರಸ್ತುತ ರಾಜ್ಯದಲ್ಲಿ 32 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಮುಂದಿನ 7 ವರ್ಷಗಳಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ ಹಮ್ಮಿಕೊಂಡಿದ್ದೇವೆ. ಸೋಲಾರ್ ವಿದ್ಯುತ್ ಪಂಪ್ ಸೆಟ್ ಮತ್ತು ಪ್ಯಾನಲ್​​ಗಳಿಗೆ ರಾಜ್ಯ ಸರ್ಕಾರದ ಸಬ್ಸಿಡಿ ಮೊತ್ತವನ್ನು ಶೇ.30 ರಿಂದ ಶೇ.50ಕ್ಕೆ ಹೆಚ್ಚಿಸಿದೆ. ನಮ್ಮ ಸರ್ಕಾರದ ಈ ಸೌಲಭ್ಯವನ್ನು ರೈತರು ಹೆಚ್ಚೆಚ್ಚು ಬಳಸಿಕೊಳ್ಳಬೇಕು. ಸೌರವಿದ್ಯುತ್ ಬಳಕೆಯನ್ನು ಹೆಚ್ಚೆಚ್ಚು ಮಾಡುವ ಮೂಲಕ ವಿದ್ಯುತ್ ಕೊರತೆ ನೀಗಿಸಿಕೊಳ್ಳಲು ಸಾಧ್ಯವಾಗುತ್ತದೆ. ಆದ್ದರಿಂದ ಈ ಬಗ್ಗೆ ರೈತರಿಗೆ ಹೆಚ್ಚೆಚ್ಚು ಮನವರಿಕೆ ಮಾಡಿಕೊಡಬೇಕು ಎಂದು ಸೂಚಿಸಿದರು.

ಸರ್ಕಾರ ಗ್ಯಾರಂಟಿ ಯೋಜನೆಯನ್ನು ಯಶಸ್ವಿಯಾಗಿ ಮುಂದುವರೆಸಲಿದೆ: ಇವತ್ತಿನವರೆಗೂ ನಾಡಿನ ಒಂದು ಕೋಟಿ ಇಪ್ಪತ್ತು ಲಕ್ಷ ಕುಟುಂಬಗಳು ಬಳಸುತ್ತಿರುವ 200 ಯೂನಿಟ್ ವರೆಗಿನ ಉಚಿತ ವಿದ್ಯುತ್​ಗಾಗಿ ರಾಜ್ಯ ಸರ್ಕಾರ ಉಚಿತ ವಿದ್ಯುತ್ತಿನ ಬಾಬ್ತು 5,320 ಕೋಟಿ ರೂಪಾಯಿಯನ್ನು ಇಂಧನ ಇಲಾಖೆಗೆ ನೀಡಿದೆ. ನಮ್ಮ ಜನರಿಗೆ ಜೀರೋ ಬಿಲ್ ಬರುತ್ತಿದೆ. ನಮ್ಮ ಸರ್ಕಾರ ಈ ಜನೋಪಯೋಗಿ ಗ್ಯಾರಂಟಿ ಯೋಜನೆಯನ್ನು ಯಶಸ್ವಿಯಾಗಿ ಮುಂದುವರೆಸಲಿದೆ. ಸೌರಶಕ್ತಿ ಕ್ಷೇತ್ರದ ಹೊಸ ಆವಿಷ್ಕಾರಗಳು, ತಂತ್ರಜ್ಞಾನಗಳು ರೈತರ ಮನೆ ಬಾಗಿಲಿಗೆ ತಲುಪಿ, ಕೃಷಿಯಲ್ಲಿ ಬಳಕೆ ಆದರೆ ಮಾತ್ರ ಸಾರ್ಥಕತೆ ಬರುತ್ತದೆ. ಕೃಷಿ ಕ್ಷೇತ್ರದಲ್ಲಿ ಹೆಚ್ಚೆಚ್ಚು ಸಂಶೋಧನೆಗಳು ನಡೆದು ಅವು ರೈತರನ್ನು ಮುಟ್ಟಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ರೈತರು ಹೆಚ್ಚೆಚ್ಚು ಆಹಾರ ಬೆಳೆದು ವಿದೇಶಕ್ಕೂ ರಫ್ತು ಮಾಡುವಂತಾಗಬೇಕು. ಇದಕ್ಕೆ ನಮ್ಮ ಸರ್ಕಾರ ಸಕಲ ನೆರವು ನೀಡುತ್ತದೆ ಎಂದರು.

ಸೋಲಾರ್ ವಿದ್ಯುತ್​ಗೆ ಕೇಂದ್ರ ಸರ್ಕಾರ ಕೇವಲ ಶೇ.30 ರಷ್ಟು ಸಬ್ಸಿಡಿ ನೀಡುತ್ತಿದೆ. ಆದರೆ, ರಾಜ್ಯ ಸರ್ಕಾರ ಶೇ.50 ರಷ್ಟು ಸಬ್ಸಿಡಿ ನೀಡುತ್ತಿದೆ. ಆದರೂ ಹೆಸರು ಮಾತ್ರ ಮೋದಿಯವರ ಸಬ್ಸಿಡಿ ಎಂದು ವ್ಯಂಗ್ಯವಾಡಿದರು. ಇದೇ ವೇಳೆ ಕುಸುಮ್ “ಬಿ” ಮತ್ತು “ಸಿ” ಯೋಜನೆಗಳಿಗೆ ಚಾಲನೆ ನೀಡಿ ವಿದ್ಯುತ್ ಉಪಕೇಂದ್ರಗಳನ್ನು ಸಿಎಂ ಲೋಕಾರ್ಪಣೆ ಗೊಳಿಸಿದರು.

ಕಾರ್ಯಕ್ರಮದಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಮತ್ತು ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ನೀರು ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗಿಲ್ಲ, ಜನರು ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು: ಜಲಮಂಡಳಿ ಅಧ್ಯಕ್ಷ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.