ETV Bharat / state

ವಕ್ಫ್ ಬೋರ್ಡ್ ಕಾನೂನಿನಲ್ಲಿ ಮಧ್ಯಪ್ರವೇಶಿಸುವುದು ಸಂವಿಧಾನ ಬಾಹಿರ: ಸಿಎಂ ಸಿದ್ದರಾಮಯ್ಯ - Waqf Bill - WAQF BILL

ಸಂವಿಧಾನದ ತತ್ವಗಳಲ್ಲಿ ನಂಬಿಕೆ ಇಟ್ಟುಕೊಂಡಿರುವ ಕಾಂಗ್ರೆಸ್ ಪಕ್ಷ​ ಕೇಂದ್ರದ ಈ ನಿಲುವಿಗೆ ವಿರೋಧ ವ್ಯಕ್ತಪಡಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

SIDDARAMAIAH REACTION ON WAQF BILL
ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Aug 8, 2024, 7:14 PM IST

ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ (ETV Bharat)

ಮೈಸೂರು: ''ಬಿಜೆಪಿ ಹಾಗೂ ಎನ್​ಡಿಎ ಕೂಟಕ್ಕೆ ಅಲ್ಪಸಂಖ್ಯಾತರ ಮೇಲೆ ಕೋಪವಿರುವಂತಿದೆ. ಬಿಜೆಪಿಯವರು ಎಂದಿಗೂ ಜಾತ್ಯತೀತತೆ, ಸಾಮಾಜಿಕ ನ್ಯಾಯದ ಪರವಾಗಿ ನಿಂತವರಲ್ಲ. ಮೊದಲಿನಿಂದಲೂ ಅವರು ಕೋಮುವಾದಿ ಪಕ್ಷವಾಗಿಯೇ ಗುರುತಿಸಿಕೊಂಡವರು. ಮತಾಂತರ ನಿಷೇಧ ಕಾನೂನು, ಗೋಹತ್ಯೆ ತಿದ್ದುಪಡಿಗಳನ್ನು ಜಾರಿಗೆ ತಂದ ಬಿಜೆಪಿಯವರು ಇಂದು ವಕ್ಫ್ ಬೋರ್ಡ್ ತಿದ್ದುಪಡಿ ಪ್ರಯತ್ನಕ್ಕೂ ಕೈಹಾಕಿದ್ದಾರೆ. ವಕ್ಫ್ ಬೋರ್ಡ್ ಕಾನೂನು ಆ ಸಮುದಾಯದ ವೈಯಕ್ತಿಕ ಕಾನೂನಾಗಿದ್ದು, ಅದರಲ್ಲಿ ಮಧ್ಯಪ್ರವೇಶಿಸುವುದು ಸಂವಿಧಾನ ಬಾಹಿರ. ಸಂವಿಧಾನದ ತತ್ವಗಳಲ್ಲಿ ನಂಬಿಕೆಯಿರಿಸಿರುವ ಕಾಂಗ್ರೆಸ್ ಹಾಗೂ ಇಂಡಿ ಒಕ್ಕೂಟ, ಕೇಂದ್ರದ ಈ ನಿಲುವನ್ನು ಸಂಪೂರ್ಣವಾಗಿ ವಿರೋಧಿಸುತ್ತೇವೆ'' ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಲೋಕಸಭೆಯಲ್ಲಿ ಇಂದು ವಕ್ಫ್​ ತಿದ್ದುಪಡಿ ವಿಧೇಯಕ ಮಂಡನೆಗೂ ಮುನ್ನ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು.

ಸುಳ್ಳು ಕೇಸ್ ಮಾನ್ಯವಾಗದು: ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಆರ್‌ಟಿಐ ಕಾರ್ಯಕರ್ತರೊಬ್ಬರು ಮುಖ್ಯಮಂತ್ರಿಗಳ ವಿರುದ್ಧ ದೂರು ದಾಖಲಿಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಸುಳ್ಳು ಕೇಸುಗಳನ್ನು ದಾಖಲಿಸಿದರೆ ಅವು ಕಾನೂನಿನ ದೃಷ್ಟಿಯಲ್ಲಿ ಮಾನ್ಯವಾಗುವುದಿಲ್ಲ ಎಂದರು.

ಇದನ್ನೂ ಓದಿ: ಲೋಕಸಭೆಯಲ್ಲಿ ವಕ್ಫ್​ ತಿದ್ದುಪಡಿ ವಿಧೇಯಕ ಮಂಡನೆ: ಪ್ರತಿಪಕ್ಷಗಳ ವಿರೋಧ, ಸಂಸದೀಯ ಮಂಡಳಿಗೆ ಶಿಫಾರಸು - Waqf Bill

ETV Bharat Logo

Copyright © 2025 Ushodaya Enterprises Pvt. Ltd., All Rights Reserved.