ETV Bharat / state

ಕಮಲಾ ಹಂಪನಾಗೆ ಅಂತಿಮ ನಮನ: ಕನ್ನಡದ ಉತ್ತಮ ಸಾಹಿತಿಯನ್ನು ಕಳೆದುಕೊಂಡಿದ್ದೇವೆ - ಸಿಎಂ ಸಿದ್ದರಾಮಯ್ಯ - CM Siddaramaiah - CM SIDDARAMAIAH

ರವೀಂದ್ರಕಲಾ ಕ್ಷೇತ್ರದಲ್ಲಿಂದು ಹಿರಿಯ ಸಾಹಿತಿ ಡಾ. ಕಮಲಾ ಹಂಪನಾ ಅವರ ಪಾರ್ಥಿವ ಶರೀರದ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಅವರು, ಕಮಲಾ ಹಂಪನಾ ಬೋಧಕರಾಗಿ, ಸಂಶೋಧಕರಾಗಿ, ಸಾಹಿತಿಯಾಗಿ ಕನ್ನಡ ಭಾಷೆಗಾಗಿ ಬಹಳ ಶ್ರಮಿಸಿದ್ದಾರೆ ಎಂದರು.

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Jun 22, 2024, 4:19 PM IST

Updated : Jun 22, 2024, 5:47 PM IST

ಸಿಎಂ ಸಿದ್ದರಾಮಯ್ಯ (ETV Bharat)

ಬೆಂಗಳೂರು: ಕನ್ನಡದ ಉತ್ತಮ ಸಾಹಿತಿಯನ್ನು ನಾವು ಕಳೆದುಕೊಂಡಿದ್ದೇವೆ. ಕಮಲಾ ಹಂಪನಾ ಅವರನ್ನು ನಾಲ್ಕೈದು ತಿಂಗಳ ಹಿಂದೆ ಭೇಟಿಯಾಗಿದ್ದೆ. ಮಹಿಳಾ ಸಾಹಿತಿಗಳ ಪೈಕಿ ಅತಿ ಹೆಚ್ಚು ಅಂದರೆ 48 ಕೃತಿಗಳನ್ನು ಬರೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ರವೀಂದ್ರ ಕಲಾ ಕ್ಷೇತ್ರದಲ್ಲಿಂದು ಹಿರಿಯ ಸಾಹಿತಿ ಡಾ. ಕಮಲಾ ಹಂಪನಾ ಅವರ ಪಾರ್ಥಿವ ಶರೀರದ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಕಮಲಾ ಹಂಪನಾ ಬೋಧಕರಾಗಿ, ಸಂಶೋಧಕರಾಗಿ, ಸಾಹಿತಿಯಾಗಿ ಕನ್ನಡ ಭಾಷೆಗಾಗಿ ಬಹಳ ಶ್ರಮಿಸಿದ್ದಾರೆ. ಪ್ರಾಕೃತ ಭಾಷೆಯ ಕುರಿತು ಸಂಶೋಧನೆ ಮಾಡಿದ್ದಾರೆ. ಬೆಂಗಳೂರು, ಮೈಸೂರು, ವಿಜಯನಗರದಲ್ಲಿ ಕನ್ನಡ ಬೋಧಕರಾಗಿ ಕೆಲಸ ಮಾಡಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಹಂಪಾ ನಾಗರಾಜಯ್ಯ ಮತ್ತು ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದರು.

ಅಂತಿಮ ದರ್ಶನ ಪಡೆದ ಡಿಸಿಎಂ: ಇದೇ ವೇಳೆ ಅಂತಿಮ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್, ಹಿರಿಯ ಸಾಹಿತಿ ಕಮಲಾ ಹಂಪನಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಕಮಲಾ ಹಂಪನಾ ಅವರ ನಿಧನದ ಸುದ್ದಿ ಕೇಳಿ ನೋವಾಗಿದೆ. ಸುದೀರ್ಘ 6 ದಶಕಗಳ ಕಾಲ ಲೇಖನ, ಭಾಷಣ, ಅಧ್ಯಯನ ಮತ್ತು ಅಧ್ಯಾಪನ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಇವರು ನೀಡಿರುವ ಕೊಡುಗೆ ಅಪಾರ ಎಂದು ಸ್ಮರಿಸಿದರು.

ನಾಡೋಜ ಪ್ರಶಸ್ತಿ ಪುರಸ್ಕೃತರಾದ ಕಮಲಾ ಅವರ ಅಗಲಿಕೆ ಸಾಹಿತ್ಯ ಕ್ಷೇತ್ರಕ್ಕೆ ದೊಡ್ಡ ನಷ್ಟವಾಗಿದೆ. 1956ರಲ್ಲಿ ಕನ್ನಡ ಅಧ್ಯಾಪಕಿಯಾಗಿ ವೃತ್ತಿ ಜೀವನ ಆರಂಭಿಸಿದರು. ಬೆಂಗಳೂರು ಮತ್ತು ಮೈಸೂರು ಮಹಾರಾಣಿ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲೆ ಆಗಿ ಕಾರ್ಯ ನಿರ್ವಹಿಸಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ್ದಾರೆ. 2003 ರಲ್ಲಿ ಮೂಡುಬಿದಿರೆಯಲ್ಲಿ ಜರುಗಿದ 71ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕನ್ನಡ ಕಟ್ಟಿದ್ದಾರೆ ಎಂದರು.

ನನ್ನ ಮೆಚ್ಚಿನ ಗುರುಗಳಾಗಿದ್ದ ಹಂಪಾ ನಾಗರಾಜಯ್ಯ ಅವರಿಗೆ ಈ ಅಗಲಿಕೆಯ ನೋವು ಭರಿಸುವ ಶಕ್ತಿ ಬರಲಿ. ಕಮಲಾ ಹಂಪನಾ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು, ಅಭಿಮಾನಿ ಬಳಗ ಹಾಗೂ ಸಾಹಿತ್ಯ ಆಸಕ್ತರಿಗೆ ಕರುಣಿಸುವಂತೆ ಭಗವಂತನಲ್ಲಿ ಪ್ರಾರ್ಥಿಸಿದರು.

ಇದನ್ನೂ ಓದಿ: ನಾಡೋಜ ಡಾ.ಕಮಲ ಹಂಪನಾ ನಿಧನ; ಸಿಎಂ ಸಿದ್ದರಾಮಯ್ಯ, ಸಚಿವರಿಂದ ಸಂತಾಪ - Kamala Hampana Passed Away

Last Updated : Jun 22, 2024, 5:47 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.