ETV Bharat / state

ಇಂದು 16ನೇ ಹಣಕಾಸು ಆಯೋಗದ ಸಭೆ: ರಾಜ್ಯಕ್ಕಾಗಿರುವ ಅನ್ಯಾಯ ಸರಿಪಡಿಸುವ ವಿಶ್ವಾಸವಿದೆ ಎಂದ ಸಿಎಂ - Finance Commission Meeting - FINANCE COMMISSION MEETING

16ನೇ ಕೇಂದ್ರ ಹಣಕಾಸಿನ ಆಯೋಗದವರೊಂದಿಗೆ ಇಂದು ಸಭೆ ನಡೆಯಲಿದೆ. ಸಭೆಯಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯಗಳ ಬಗ್ಗೆ ವಿವರಿಸಲಾಗುವುದು. ತೆರಿಗೆ ಹಂಚಿಕೆ ಹೆಚ್ಚಿಸುವಂತೆ ಒತ್ತಾಯಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

cm siddaramaiah
ಮುಖ್ಯಮಂತ್ರಿ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Aug 29, 2024, 7:54 AM IST

ಮಾಧ್ಯಮದವರೊಂದಿಗೆ ಮಾತನಾಡುತ್ತಿರುವ ಸಿಎಂ ಸಿದ್ದರಾಮಯ್ಯ (ETV Bharat)

ಬೆಂಗಳೂರು: ''ಗುರುವಾರ (ಇಂದು) 16ನೇ ಕೇಂದ್ರ ಹಣಕಾಸು ಆಯೋಗದವರೊಂದಿಗೆ ಸಭೆ ನಡೆಯಲಿದೆ. 15ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯ ಸರಿಪಡಿಸುತ್ತಾರೆ ಎಂಬ ವಿಶ್ವಾಸವಿದೆ'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಸಂಜೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ''15ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯಗಳ ಬಗ್ಗೆ ವಿವರಿಸಲಾಗುವುದು. ಕರ್ನಾಟಕ, ಹೆಚ್ಚು ನಿರ್ಲಕ್ಷ್ಯಕ್ಕೆ ಒಳಗಾದ ರಾಜ್ಯ ಎಂದು ಮನದಟ್ಟು ಮಾಡಿ, ತೆರಿಗೆ ಹಂಚಿಕೆಯನ್ನು ಶೇಕಡಾ 41ರಿಂದ ಶೇ.50ಕ್ಕೆ ಹೆಚ್ಚಿಸುವಂತೆ ಒತ್ತಾಯಿಸಲಾಗುವುದು. ಸೆಸ್ ಮತ್ತು ಸರ್ಚಾಜ್​ಗಳಲ್ಲಿ ರಾಜ್ಯಗಳಿಗೂ ಪಾಲು ನೀಡಬೇಕು. ಸೆಸ್ ಮತ್ತು ಸರ್ಚಾಜುಗಳು ಹೆಚ್ಚುತ್ತಿದ್ದು, ರಾಜ್ಯಕ್ಕೆ ತೆರಿಗೆ ಹಂಚಿಕೆ ಕಡಿಮೆಯಾಗುತ್ತಿರುವುದನ್ನು ಹಣಕಾಸು ಆಯೋಗದ ಅಧ್ಯಕ್ಷರಿಗೆ ಮನವರಿಕೆ ಮಾಡಿಕೊಡಲಾಗುವುದು'' ಎಂದರು.

ನಿವೇಶನ ಹಂಚಿಕೆ ಕಾನೂನಾತ್ಮಕವಾಗಿದೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ರ ರಾಹುಲ್ ಖರ್ಗೆಯವರ ಟ್ರಸ್ಟ್​ಗೆ ಸಿಎ ನಿವೇಶನ ಹಂಚಿಕೆ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ''ಟ್ರಸ್ಟ್​​ಗೆ ಕಾನೂನಾತ್ಮಕವಾಗಿ ನಿವೇಶನ ನೀಡಲಾಗಿದೆ. ಕಾನೂನು ಪ್ರಕಾರ ನಿವೇಶನ ನೀಡಿರುವುದರಿಂದ ವಿವಾದ ಸೃಷ್ಟಿಸುವ ಅಗತ್ಯವಿಲ್ಲ. ಬಿಜೆಪಿಯವರ ಕಾಲದಲ್ಲಿ ಚಾಣಕ್ಯ ವಿವಿಗೆ ಹಾಗೂ ಆರ್​ಎಸ್​ಎಸ್​​ನ ವಿವಿಧ ಟ್ರಸ್ಟ್​​ಗಳಿಗೆ ಎಕರೆಗಟ್ಟಲೆ ಭೂಮಿಯನ್ನು ಮಂಜೂರು ಮಾಡಿದ್ದಾರೆ'' ಎಂದು ಅವರು ಇದೇ ವೇಳೆ ತಿರುಗೇಟು ನೀಡಿದರು.

ಇದನ್ನೂ ಓದಿ: ತಂದೆ ಮುಂದಿನ ಬಾರಿ ಸಿಎಂ ಸ್ಥಾನದ ಆಕಾಂಕ್ಷಿ ಎಂದಷ್ಟೇ ಹೇಳಿದ್ದಾರೆ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ - MP Priyanka jarakiholi

ETV Bharat Logo

Copyright © 2025 Ushodaya Enterprises Pvt. Ltd., All Rights Reserved.