ETV Bharat / state

ಸಂಪುಟ ವಿಸ್ತರಣೆ, ಪುನಾರಚನೆ ಕುರಿತ ಪ್ರಶ್ನೆಗಳಿಗೆ ಮಾಧ್ಯಮಗಳೇ ಉತ್ತರಿಸಬೇಕು: ಸಿದ್ದರಾಮಯ್ಯ - CM SIDDARAMAIAH

ಸಂಪುಟ ಪುನಾರಚನೆ ಬಗ್ಗೆ ಚರ್ಚೆಯಾಗಿಲ್ಲ, ಸದ್ಯಕ್ಕೆ ಸಂಪುಟ ವಿಸ್ತರಣೆ, ಪುನಾರಚನೆ ಇಲ್ಲ. ಈ ಕುರಿತಾದ ಪ್ರಶ್ನೆಗಳಿಗೆ ಮಾಧ್ಯಮಗಳೇ ಉತ್ತರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

siddaramaiah
ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Nov 29, 2024, 3:50 PM IST

ನವೆದಹಲಿ/ಬೆಂಗಳೂರು: ''ಸಂಪುಟ ಪುನಾರಚನೆ ಬಗ್ಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಜೊತೆ ಚರ್ಚೆ ಮಾಡಿಲ್ಲ. ಸಂಪುಟ ವಿಸ್ತರಣೆ, ಪುನಾರಚನೆ ಉದ್ದೇಶ ಸದ್ಯಕ್ಕಿಲ್ಲ'' ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ದೆಹಲಿಯಲ್ಲಿ ಮಾತನಾಡಿದ ಅವರು, ''ಸಚಿವ ಸಂಪುಟ ವಿಸ್ತರಣೆ, ಪುನಾರಚನೆ ಕುರಿತಾದ ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಮಾಧ್ಯಮಗಳವರೇ ಹೊರತು ನಾನಲ್ಲ'' ಎಂದು ಹೇಳಿದರು.

''ಸಂಪುಟ ವಿಸ್ತರಣೆ, ಪುನಾರಚನೆ ಉದ್ದೇಶ ಸದ್ಯಕ್ಕಿಲ್ಲ. ಮಾಧ್ಯಮಗಳೇ ಈ ಬಗ್ಗೆ ಸುದ್ದಿಗಳನ್ನು ಬಿತ್ತರಿಸುತ್ತಿವೆ. ಸಂಭವನೀಯ ಸಚಿವರ ಪಟ್ಟಿಯನ್ನೂ ಪ್ರಕಟಿಸುತ್ತಿವೆ. ಹೀಗಾಗಿ, ಪುನಾರಚನೆ, ವಿಸ್ತರಣೆ ಕುರಿತಾದ ಪ್ರಶ್ನೆಗಳಿಗೆ ಮಾಧ್ಯಮಗಳೇ ಉತ್ತರಿಸಬೇಕು'' ಎಂದರು.

ಸಿದ್ದರಾಮಯ್ಯ (ETV Bharat)

ಇದನ್ನೂ ಓದಿ: ಸಂಪುಟ ವಿಸ್ತರಣೆ ಸಂದರ್ಭ ಬಂದಾಗ ಆಗುತ್ತೆ, ಆ ಸಮಯ ಇನ್ನೂ ಬಂದಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

''ಸಂಪುಟ ಪುನಾರಚನೆ, ವಿಸ್ತರಣೆ ಕುರಿತಂತೆ ರಾಹುಲ್ ಗಾಂಧಿ ಅಥವಾ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚೆ ಮಾಡಿಲ್ಲ ಎಂದ ಅವರು, ನಾಗೇಂದ್ರ ಅವರು ಸಂಪುಟಕ್ಕೆ ಸೇರ್ಪಡೆ ಆಗುತ್ತಾರೆಯೇ ಎಂಬ ಪ್ರಶ್ನೆಗೆ, ''ಸಂಪುಟಕ್ಕೆ ತೆಗೆದುಕೊಳ್ಳುತ್ತೇವೆ, ಆದರೆ ಈಗಲೇ ಅಲ್ಲ'' ಎಂದು ತಿಳಿಸಿದರು.

ಸ್ವಾಭಿಮಾನಿ ಸಮಾವೇಶ ಕುರಿತಂತೆ ಹೈಕಮಾಂಡ್​​ಗೆ ಅನಾಮಧೇಯ ಪತ್ರ ಬರೆದಿರುವ ಬಗ್ಗೆ ಮಾಹಿತಿ ಇಲ್ಲ. ಖರ್ಗೆ ಅವರೂ ಈ ಬಗ್ಗೆ ಚರ್ಚೆ ಮಾಡಲಿಲ್ಲ ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ; ಹಲವು ಬೇಡಿಕೆಗಳ ಸಂಬಂಧ ಮನವಿ ಪತ್ರ ಸಲ್ಲಿಕೆ

ಇದೇ ವೇಳೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತಂತೆ ಕೇಳಿದಾಗ, ''ನಾನಲ್ಲ ಪಾರ್ಟಿ'' ಎನ್ನುತ್ತ ಸಿಎಂ ತೆರಳಿದರು.

ಹಾಸನದಲ್ಲಿ ಡಿಸೆಂಬರ್ 5ರಂದು ಕಾಂಗ್ರೆಸ್ ಪಕ್ಷ ಹಾಗೂ ಹಿಂದುಳಿದ ವರ್ಗಗಳ ಒಕ್ಕೂಟದ ಆಶ್ರಯದಲ್ಲಿ ಸ್ವಾಭಿಮಾನಿ ಸಮಾವೇಶ ಅಯೋಜಿಸಲಾಗಿದೆ. ಸಮಾವೇಶಕ್ಕೆ ಕೆಪಿಸಿಸಿ ಅಧ್ಯಕ್ಷರು ಹಾಗೂ ರಾಜ್ಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನೂ ಸಂಘಟಕರು ಆಹ್ವಾನಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.