ETV Bharat / state

ಕೇಂದ್ರದಿಂದ ನಬಾರ್ಡ್ ಹಣ ಕಡಿತ, ರೈತರು ಲೇವಾದೇವಿದಾರರ ಸುಳಿಗೆ ಸಿಲುಕಲಿದ್ದಾರೆ: ಸಿಎಂ ಸಿದ್ದರಾಮಯ್ಯ - NABARD LOAN ISSUE

ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳ ವಿರುದ್ಧ ರಾಜ್ಯಸಭಾ ಸದಸ್ಯರಾದ ಮಾಜಿ ಪ್ರಧಾನಿ ದೇವೇಗೌಡರೂ ಯಾಕೆ ಬಾಯಿ ಬಿಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

siddaramaiah
ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Nov 29, 2024, 4:24 PM IST

ನವದೆಹಲಿ/ಬೆಂಗಳೂರು: ''ರಾಜ್ಯದ ರೈತರಿಗೆ ನೀಡಬೇಕಾಗಿದ್ದ ನಬಾರ್ಡ್ ಹಣದಲ್ಲಿ ಶೇ.58ರಷ್ಟನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿರುವುದರಿಂದ ರೈತರು ಅಧಿಕ ಬಡ್ಡಿಗೆ ಸಾಲ ಕೊಡುವ ಲೇವಾದೇವಿದಾರರ ಸುಳಿಗೆ ಸಿಲುಕಲಿದ್ದಾರೆ'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು, ''ರೈತರಿಗೆ ನೀಡುತ್ತಿದ್ದ ಸಬ್ಸಿಡಿ ಸಾಲ ಕಡಿತಗೊಳಿಸಿದ್ದರಿಂದ ರಾಜ್ಯದಲ್ಲಿ ಮತ್ತು ದೇಶದಲ್ಲಿ ಆಹಾರ ಉತ್ಪಾದನೆಯ ಮೇಲೆ ಕೆಟ್ಟ ಪರಿಣಾಮ ಬೀರಲಿದೆ'' ಎಂದರು. ರಾಜ್ಯದ ರೈತರಿಗೆ ಮಾತ್ರ ನಬಾರ್ಡ್ ಸಾಲದ ಪ್ರಮಾಣ ಕಡಿಮೆ ಮಾಡಿಲ್ಲ. ಇಡೀ ದೇಶದಲ್ಲಿ ಕಡಿತಗೊಳಿಸಲಾಗಿದೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ''ಇದರಿಂದ ಇಡೀ ದೇಶದ ರೈತರನ್ನು ಸಂಕಷ್ಟಕ್ಕೆ ದೂಡಿದಂತಾಗಿದೆ. ಇಡೀ ದೇಶದ ಕೃಷಿ ಉತ್ಪಾದನೆ ಮೇಲೆ ಕೆಟ್ಟ ಪರಿಣಾಮ ಬೀರಲಿದೆ'' ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ (ETV Bharat)

''ನಬಾರ್ಡ್ ಶೇ 4.5ರಷ್ಟು ಬಡ್ಡಿಗೆ ರೈತರ ಸಾಲದ ಹಣ ನೀಡುತ್ತಿತ್ತು. ನಾವು ರೈತರಿಗೆ ಬಡ್ಡಿ ರಹಿತವಾಗಿ ಸಾಲ ನೀಡಿ ಈ 4.5% ಬಡ್ಡಿಯನ್ನು ಸರ್ಕಾರವೇ ಭರಿಸುತ್ತಿತ್ತು. ಈಗ ರಾಷ್ಟ್ರೀಕೃತ ವಾಣಿಜ್ಯ ಬ್ಯಾಂಕ್​​ಗಳಿಂದ ಸಾಲ ಪಡೆಯುವಂತೆ ಕೇಂದ್ರ ಸರ್ಕಾರ ಹೇಳುತ್ತಿದೆ. ಶೇ.10ರ ಬಡ್ಡಿ ದರದಲ್ಲಿ ವಾಣಿಜ್ಯ ಬ್ಯಾಂಕ್​ಗಳು ಸಾಲ ನೀಡುತ್ತವೆ. ಇದರಿಂದ ಬ್ಯಾಂಕ್​ಗಳಿಗೆ ಲಾಭ ಆಗುತ್ತದೆಯೇ ಹೊರತು ರೈತರಿಗೆ ಅನುಕೂಲ ಇಲ್ಲ'' ಎಂದರು.

ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ; ಹಲವು ಬೇಡಿಕೆಗಳ ಸಂಬಂಧ ಮನವಿ ಪತ್ರ ಸಲ್ಲಿಕೆ

''15ನೇ ಹಣಕಾಸು ಆಯೋಗದಲ್ಲೂ ರಾಜ್ಯಕ್ಕೆ ಅನ್ಯಾಯ ಆಯಿತು. ಭದ್ರಾ ಮೇಲ್ದಂಡೆ ಯೋಜನೆಗೆ 5,000 ಕೋಟಿ ರೂ. ಘೋಷಿಸಿ ಒಂದು ಪೈಸೆಯನ್ನೂ ಕೊಡಲಿಲ್ಲ. ಫೆರಿಫೆರಲ್ ರಿಂಗ್ ರಸ್ತೆಗೂ ಕೊಡಲಿಲ್ಲ. ಇವೆಲ್ಲದರಿಂದ 11,000 ಕೋಟಿ ರೂ. ರಾಜ್ಯಕ್ಕೆ ನಷ್ಟವಾಗಿದ್ದನ್ನೂ ಪ್ರಧಾನಮಂತ್ರಿಯವರಿಗೆ ನೆನಪಿಸಿದ್ದೇವೆ. ಹೀಗಾಗಿ, ಈ ಬಾರಿ ಮತ್ತೆ ನಬಾರ್ಡ್ ಮೂಲಕ ಆಗಿರುವ ಅನ್ಯಾಯವನ್ನು ಸರಿಪಡಿಸಲು ಮನವಿ ಮಾಡಿದ್ದೇವೆ'' ಎಂದು ಹೇಳಿದ್ದಾರೆ.

ಮಣ್ಣಿನ ಮಗ ಮಂತ್ರಿ ಏನು ಮಾಡುತ್ತಿದ್ದಾರೆ?: ''ರಾಜ್ಯಕ್ಕೆ ನಿರಂತರ ಅನ್ಯಾಯ ಆಗುತ್ತಿದೆ. ಮಹದಾಯಿ, ಮೇಕೆದಾಟು ಯೋಜನೆಗೆ ಅನುಮತಿ ನೀಡುತ್ತಿಲ್ಲ. ಇಷ್ಟಾದರೂ ರಾಜ್ಯದಿಂದ ಆಯ್ಕೆ ಆಗಿರುವ ಬಿಜೆಪಿ ಸಂಸದರು ಬಾಯಿ ಬಿಡುತ್ತಿಲ್ಲ. ಮಣ್ಣಿನ ಮಗ ಅಂದುಕೊಂಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಏನು ಮಾಡುತ್ತಿದ್ದಾರೆ. ರಾಜ್ಯಸಭಾ ಸದಸ್ಯರಾದ ಮಾಜಿ ಪ್ರಧಾನಿ ದೇವೇಗೌಡರೂ ರಾಜ್ಯಕ್ಕೆ ಆಗುತ್ತಲೇ ಇರುವ ಅನ್ಯಾಯಗಳ ವಿರುದ್ಧ ಬಾಯಿ ಬಿಡುತ್ತಿಲ್ಲ ಏಕೆ'' ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಸಂಪುಟ ವಿಸ್ತರಣೆ, ಪುನಾರಚನೆ ಕುರಿತ ಪ್ರಶ್ನೆಗಳಿಗೆ ಮಾಧ್ಯಮಗಳೇ ಉತ್ತರಿಸಬೇಕು: ಸಿದ್ದರಾಮಯ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.