ETV Bharat / state

ದೆಹಲಿಯಲ್ಲೂ ನಂದಿನಿ ಹಾಲು ಲಭ್ಯ: ರಾಜಧಾನಿ ಮಾರುಕಟ್ಟೆಗೆ KMF ಹಾಲು ಬಿಡುಗಡೆ ಮಾಡಿದ ಸಿಎಂ - KMF MILK LAUNCHED IN DELHI

ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ದೆಹಲಿಯಲ್ಲಿ ಕೆ.ಎಂ.ಎಫ್​ನ ವಿವಿಧ ಶ್ರೇಣಿಯ ಹಾಲನ್ನು ಮಾರುಕಟ್ಟೆ ಬಿಡುಗಡೆ ಮಾಡಿದ್ದಾರೆ.

ದೆಹಲಿಯ ಮಾರುಕಟ್ಟೆಗೆ ಕೆ.ಎಂ.ಎಫ್​ನ ವಿವಿಧ ಶ್ರೇಣಿಯ ಹಾಲು ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ
ದೆಹಲಿಯ ಮಾರುಕಟ್ಟೆಗೆ ಕೆ.ಎಂ.ಎಫ್​ನ ವಿವಿಧ ಶ್ರೇಣಿಯ ಹಾಲು ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Nov 22, 2024, 7:22 AM IST

ದೆಹಲಿ/ಬೆಂಗಳೂರು: ಇನ್ನು ಮುಂದೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಂದಿನಿ ಹಾಲು ಲಭ್ಯ. ಸಿಎಂ ಸಿದ್ದರಾಮಯ್ಯ ಗುರುವಾರ ದೆಹಲಿಯಲ್ಲಿ ಕೆ.ಎಂ.ಎಫ್​ನ ವಿವಿಧ ಶ್ರೇಣಿಯ ಹಾಲನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದಾರೆ.

"ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ದೆಹಲಿ ನಗರದಲ್ಲಿ ಕೆ.ಎಂ.ಎಫ್ ಮತ್ತು ಮಂಡ್ಯ ಹಾಲು ಒಕ್ಕೂಟ ಸೇರಿ ವಿವಿಧ ಶ್ರೇಣಿಯ ಹಾಲನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. ಇಡೀ ದೇಶದಲ್ಲಿ ರೈತರ ಉಪಕಸುಬು ಪಶುಸಂಗೋಪನೆ. ಗುಜರಾತ್​​ನಲ್ಲಿ ಕುರಿಯನ್ ಅವರು ಹಾಲು ಉತ್ಪಾದಕರ ಸಂಘವನ್ನು ಪ್ರಾರಂಭಿಸಿದರು. ಹಿಂದೆ ಪಶುಸಂಗೋಪನಾ ಸಚಿವನಾಗಿದ್ದು, ಒಂದು ವರ್ಷ ಕಾಲ ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷನೂ ಆಗಿದ್ದೆ ಎಂದು ಸ್ಮರಿಸಿದ ಮುಖ್ಯಮಂತ್ರಿಗಳು ಪಶುಸಂಗೋಪನಾ ಸಚಿವನಾಗಿದ್ದಾಗಲೇ ಹಾಲು ಉತ್ಪಾದಕರಿಗೆ ಶೋಷಣೆಯಾಗುತ್ತಿದ್ದುದ್ದನ್ನು ಮನಗಂಡು ಶಾಶ್ವತ ಮಾರುಕಟ್ಟೆ ಕಲ್ಪಿಸಲು ಹಾಲು ಉತ್ಪಾದಕರ ಸಂಘಗಳನ್ನು ರಚಿಸಲಾಯಿತು" ಎಂದರು.

ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ: ರಾಜ್ಯದಲ್ಲಿ ಪ್ರತಿದಿನ 92 ರಿಂದ 93 ಲಕ್ಷ ಲೀ. ಹಾಲು ಉತ್ಪಾದನೆಯಾಗುತ್ತಿದೆ. ರೈತರಿಂದ ಲೀ. ಗೆ 32 ರೂ.ಗಳಿಗೆ ಹಾಲು ಖರೀದಿಸಲಾಗುತ್ತಿದ್ದು, ರಾಜ್ಯ ಸರ್ಕಾರ ಕ್ಷೀರಧಾರೆ ಯೋಜನೆಯಡಿ ಹಾಲು ಉತ್ಪಾದಕರಿಗೆ ಪ್ರತಿ ಲೀಟರಿಗೆ 5 ರೂ.ಗಳ ಪ್ರೋತ್ಸಾಹಧನವನ್ನು ನೀಡುತ್ತಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾಲದಲ್ಲಿ 2 ರೂ. ಇದ್ದ ಪ್ರೋತ್ಸಾಹಧನ, ನಂತರ 3ರೂ. ಆಯಿತು. ನಾನು ಮುಖ್ಯಮಂತ್ರಿಯಾದ ನಂತರ ಇದನ್ನು 5 ರೂ.ಗಳಿಗೆ ಹೆಚ್ಚಿಸಲು ಘೋಷಣೆ ಮಾಡಲಾಯಿತು. ಪ್ರೋತ್ಸಾಹಧನಕ್ಕಾಗಿ ಪ್ರತಿ ದಿನ 5 ಕೋಟಿ ರೂ.ಗಳನ್ನು ಸರ್ಕಾರ ವೆಚ್ಚ ಮಾಡುತ್ತಿದೆ ಎಂದರು.

ರಾಜ್ಯದಲ್ಲಿ ಒಟ್ಟು 16 ಮಿಲ್ಕ್ ಯೂನಿಯನ್​ಗಳಿವೆ. ರಾಜ್ಯದಲ್ಲಿ ಅಂದಾಜು 1 ಕೋಟಿ ಲೀಟರ್​ ಹಾಲು ಉತ್ಪಾದನೆಯಾಗುತ್ತಿದ್ದು, ಆಂಧ್ರ ಪ್ರದೇಶ, ಮಹಾರಾಷ್ಟ್ರಕ್ಕೆ ನಿತ್ಯ ತಲಾ 2.5 ಲಕ್ಷ ಲೀಟರ್ ಹಾಲು ಪೂರೈಕೆಯಾಗುತ್ತಿದೆ. ಇದೀಗ ಆರಂಭಿಕ ಹಂತದಲ್ಲಿ 2.5 ಲಕ್ಷ ಲೀಟರ್ ಹಾಲು ನವದೆಹಲಿಗೆ ಪೂರೈಸುವ ಯೋಜನೆ ರೂಪಿಸಲಾಗಿದೆ. ಇನ್ನು ಆರು ತಿಂಗಳೊಳಗೆ 5 ಲಕ್ಷ ಲೀಟರ್​ಗೆ ಏರಿಸುವ ಗುರಿ ನಮ್ಮದಾಗಿದೆ. ಹಾಲಿನ ಉತ್ಪಾದನೆಗಳಿಗೆ ಮಾರುಕಟ್ಟೆ ಬಹಳ ಮುಖ್ಯ ಎಂದರು.

ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ವೆಂಕಟೇಶ್​​, ಕೃಷಿ ಸಚಿವ ಚಲುವರಾಯಸ್ವಾಮಿ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷ ಭೀಮಣ್ಣ ನಾಯಕ್, ರಾಜ್ಯ ಸಭಾ ಸದಸ್ಯ ಈರಣ್ಣ ಕರಾಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಮಂಡ್ಯ ಹಾಲು ಒಕ್ಕೂಟದ ಅಧ್ಯಕ್ಷ ತಿಮ್ಮೇಗೌಡ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ: ನಬಾರ್ಡ್ ಸಾಲದ ಬಗ್ಗೆ ಕೇಂದ್ರ ಹಣಕಾಸು ಸಚಿವರೇ ಅಸಹಾಯಕತೆ ವ್ಯಕ್ತಪಡಿಸಿದರೆ ಹೇಗೆ?: ಸಿಎಂ ಪ್ರಶ್ನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.