ETV Bharat / state

ಸಿಎಂ ಅಧ್ಯಕ್ಷತೆಯಲ್ಲಿ ತೆರಿಗೆ ಪ್ರಗತಿ ಪರಿಶೀಲನಾ ಸಭೆ: ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕಕ್ಕೆ ದೇಶದಲ್ಲಿ 2ನೇ ಸ್ಥಾನ - TAX PROGRESS REVIEW MEETING

ಕರ್ನಾಟಕದಲ್ಲಿ ನವೆಂಬರ್‌ ಅಂತ್ಯದವರೆಗೆ 13,722 ಕೋಟಿ ರೂಪಾಯಿ ಜಿಎಸ್‌ಟಿ ಸಂಗ್ರಹಿಸಲಾಗಿದ್ದು, ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ.

CM Siddaramaiah chairs meeting to review progress of tax collection department
ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ತೆರಿಗೆ ಸಂಗ್ರಹಣಾ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ (ETV Bharat)
author img

By ETV Bharat Karnataka Team

Published : Dec 3, 2024, 9:32 PM IST

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣದಲ್ಲಿ ಇಂದು ತೆರಿಗೆ ಸಂಗ್ರಹಣಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ವಿವಿಧ ಇಲಾಖೆಗಳ ಪ್ರಗತಿಯ ಮುಖ್ಯಾಂಶಗಳು:

ವಾಣಿಜ್ಯ ತೆರಿಗೆ ಇಲಾಖೆ:

  • 2024 ನವೆಂಬರ್‌ ಅಂತ್ಯದವರೆಗಿನ ಒಟ್ಟು ವಾಣಿಜ್ಯ ತೆರಿಗೆ ಸಂಗ್ರಹಣೆ ಗುರಿ 56,317 ಕೋಟಿ ರೂ. ಇದ್ದು ಇದುವರೆಗೆ 53,103 ಕೋಟಿ ರೂ. ತೆರಿಗೆ ಸಂಗ್ರಹ ಮಾಡಲಾಗಿದ್ದು, ಶೇ.94 ರಷ್ಟು ಸಾಧಿಸಲಾಗಿದೆ. 2024-25ರ ಹಣಕಾಸು ಸಾಲಿನ ಒಟ್ಟು ವಾಣಿಜ್ಯ ತೆರಿಗೆ ಸಂಗ್ರಹ ಗುರಿ 84,475 ಕೋಟಿ ರೂ. ಇದೆ.
  • ಮಲೆನಾಡು ಮತ್ತು ಮೈಸೂರು ವಿಭಾಗದಲ್ಲಿ ತೆರಿಗೆ ಸಂಗ್ರಹ ನಿಗದಿತ ಗುರಿಗಿಂತ ಕಡಿಮೆಯಿದೆ. ಎಲ್ಲಾ ವಿಭಾಗಗಳು ಮುಂದಿನ ನಾಲ್ಕು ತಿಂಗಳಲ್ಲಿ ಗುರಿಯನ್ನು ಕಡ್ಡಾಯವಾಗಿ ಸಾಧಿಸಬೇಕಿದೆ. 2023-24ರ ಒಟ್ಟು ತೆರಿಗೆ ಸಂಗ್ರಹಣೆ 70,575 ಕೋಟಿ ರೂ. ಇತ್ತು.
  • ವಿಜಿಲೆನ್ಸ್‌ ಹೆಚ್ಚಿಸಿ, ತೆರಿಗೆ ಸೋರಿಕೆಯನ್ನು ಪತ್ತೆ ಹಚ್ಚಿ ತೆರಿಗೆ ಸಂಗ್ರಹವನ್ನು ಹೆಚ್ಚಿಸಬೇಕು. ಬೆಂಗಳೂರು ವಿಭಾಗದಲ್ಲಿ ಹೆಚ್ಚಿನ ನಿಗಾ ವಹಿಸಬೇಕು. ವಿಶೇಷ ಅಭಿಯಾನ ಕೈಗೊಂಡು ಮುಂದಿನ ನಾಲ್ಕು ತಿಂಗಳ ಅವಧಿಯಲ್ಲಿ ತೆರಿಗೆ ಸಂಗ್ರಹವನ್ನು ಹೆಚ್ಚಿಸಿ ಶೇ.100ರಷ್ಟು ಬಜೆಟ್‌ ಗುರಿ ಸಾಧಿಸಬೇಕಿದೆ.
  • ಜಿಎಸ್‌ಟಿ ಸಂಗ್ರಹ ಹೆಚ್ಚಿಸಬೇಕು. ಲೆಕ್ಕಪರಿಶೋಧನೆ ಮತ್ತು ನ್ಯಾಯನಿರ್ಣಯದಿಂದ ಪ್ರಸ್ತುತ ಹಣಕಾಸು ಸಾಲಿನಲ್ಲಿ 4,671 ಕೋಟಿ ರೂ. ತೆರಿಗೆ ಸಂಗ್ರಹ ಗುರಿಯಿದ್ದು, ನವೆಂಬರ್‌ ಅಂತ್ಯದವರೆಗೆ 3,076.86 ಕೋಟಿ ರೂ. ತೆರಿಗೆ ಸಂಗ್ರಹಿಸಲಾಗಿದೆ.
  • ಸರಕು ಮತ್ತು ಸೇವಾ ತೆರಿಗೆ ಕಾಯ್ದೆಯಡಿಯಲ್ಲಿ ಸ್ವೀಕರಿಸಿದ ಮನವಿಗಳನ್ನು ವಿಲೇವಾರಿ ಮಾಡಿ ತೆರಿಗೆ ಸಂಗ್ರಹ ಕೈಗೊಳ್ಳಬೇಕು.
  • ರಾಜ್ಯ ಜಿಎಸ್‌ಟಿ ಸಂಗ್ರಹದಲ್ಲಿ ಶೇ.15ರ ಬೆಳವಣಿಗೆ ದರ ಸಾಧಿಸಿದೆ. ರಾಜ್ಯದಲ್ಲಿ ನವೆಂಬರ್‌ ಅಂತ್ಯದವರೆಗೆ 13,722 ಕೋಟಿ ರೂ. ಜಿಎಸ್‌ಟಿ ಸಂಗ್ರಹಿಸಲಾಗಿದ್ದು, ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ.

ಅಬಕಾರಿ ಇಲಾಖೆ:

  • 2024-25ನೇ ಸಾಲಿನಲ್ಲಿ ರೂ. 38,525 ಕೋಟಿ ಅಬಕಾರಿ ರಾಜಸ್ವ ಸಂಗ್ರಹ ಗುರಿಯಿದ್ದು, ನವೆಂಬರ್‌ ಅಂತ್ಯದವರೆಗೆ 23,600 ಕೋಟಿ ರೂ. ಸಂಗ್ರಹಿಸಲಾಗಿದ್ದು, ಶೇ.61.26 ಗುರಿ ಸಾಧಿಸಲಾಗಿದೆ.
  • ಕಳೆದ ವರ್ಷಕ್ಕೆ ಹೋಲಿಸಿದರೆ ಈ ಅವಧಿಯಲ್ಲಿ 1432.23 ಕೋಟಿ ರೂ. ರಾಜಸ್ವ ಸಂಗ್ರಹದಲ್ಲಿ ಹೆಚ್ಚಳವಾಗಿದ್ದು, ಶೇ.6.46 ಬೆಳವಣಿಗೆ ದರ ಸಾಧಿಸಲಾಗಿದೆ.
  • ರಾಜ್ಯದಲ್ಲಿ 2023-24ರಲ್ಲಿ 34,628 ಕೋಟಿ ರೂ. ಅಬಕಾರಿ ರಾಜಸ್ವ ಸಂಗ್ರಹಿಸಲಾಗಿತ್ತು. ರಾಜಸ್ವ ಸಂಗ್ರಹ ಹೆಚ್ಚಿಸಲು ಜಾಗೃತ ದಳ ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಬೇಕು. ಅಬಕಾರಿ ಇಲಾಖೆಯಲ್ಲಿ ಖಾಲಿಯಿರುವ ಗ್ರೂಪ್‌ ಸಿ ಹುದ್ದೆಗಳನ್ನು ತುಂಬಲು ಕ್ರಮ ವಹಿಸಲಾಗಿದೆ.

ನೋಂದಣಿ ಮತ್ತು ಮುದ್ರಾಂಕ ಇಲಾಖೆ:

  • 2024-25ನೇ ಸಾಲಿನಲ್ಲಿ 26 ಸಾವಿರ ಕೋಟಿ ರೂ. ಗುರಿ ನಿಗದಿಪಡಿಸಿದ್ದು, ನವೆಂಬರ್‌ ಕೊನೆಯವರೆಗೆ 15,160.97 ಕೋಟಿ ರೂ. ರಾಜಸ್ವ ಸಂಗ್ರಹಿಸಲಾಗಿದ್ದು, ಶೇ.58ರಷ್ಟು ಪ್ರಗತಿ ಸಾಧಿಸಲಾಗಿದೆ.
  • ರಾಜಸ್ವ ಸೋರಿಕೆಯನ್ನು ತಡೆಗಟ್ಟಿ, ರಾಜಸ್ವ ಸಂಗ್ರಹವನ್ನು ಹೆಚ್ಚಿಸಬೇಕು. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.21ರಷ್ಟು ಬೆಳವಣಿಗೆ ದರ ಸಾಧಿಸಲಾಗಿದೆ.
  • ಕಾನೂನುಬಾಹಿರ ನೋಂದಣಿಗಳಿಗೆ ಕಡಿವಾಣ ಹಾಕಿ, ರಾಜಸ್ವ ಸಂಗ್ರಹವನ್ನು ವ್ಯವಸ್ಥಿತಗೊಳಿಸಬೇಕು.
  • ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಎಲ್ಲಾ ಆಸ್ತಿಗಳನ್ನು ಗುರುತಿಸಿ ತೆರಿಗೆ ವ್ಯಾಪ್ತಿಗೆ ತರಲು ಕ್ರಮ ಕೈಗೊಳ್ಳಬೇಕು.
  • ಇ-ಖಾತಾ ನೀಡುವ ಪ್ರಕ್ರಿಯೆಯಲ್ಲಿನ ತೊಡಕುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಲಾಗುವುದು.

ಗಣಿ ಮತ್ತು ಭೂವಿಜ್ಞಾನ ಇಲಾಖೆ:

  • ಕಳೆದ ವರ್ಷಕ್ಕಿಂತ ಶೇ.10ರಷ್ಟು ಹೆಚ್ಚಿನ ಬೆಳವಣಿಗೆ ದರ ಸಾಧಿಸಲಾಗಿದೆ.
  • ಈ ವರ್ಷದ ಒಟ್ಟು ರಾಜಸ್ವ ಗುರಿ ರೂ.9 ಸಾವಿರ ಕೋಟಿ ಇದ್ದು, ನವೆಂಬರ್‌ ಅಂತ್ಯದವರೆಗೆ ರೂ.4,862 ಕೋಟಿ ರಾಜಸ್ವ ಸಂಗ್ರಹಿಸಲಾಗಿದೆ.
  • ಖನಿಜ ಹಕ್ಕು ತೆರಿಗೆ ಅಧಿನಿಯಮ ಜಾರಿಗೆ ಕ್ರಮ ವಹಿಸಲಾಗಿದೆ. 2025-26ನೇ ಸಾಲಿನಲ್ಲಿ ಉಪ ಖನಿಜದಿಂದ ಹೆಚ್ಚುವರಿಯಾಗಿ ರಾಜಸ್ವ ಸಂಗ್ರಹಿಸಲು ಕ್ರಮ ವಹಿಸಿದ್ದು, ಅರಣ್ಯ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ.

ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಇಲಾಖೆ, ಮುದ್ರಾಂಕ ಮತ್ತು ನೋಂದಣಿ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಚಿವರಾದ ಕೃಷ್ಣ ಬೈರೇಗೌಡ, ಎಸ್.ಎಸ್.ಮಲ್ಲಿಕಾರ್ಜುನ್, ಆರ್.ಬಿ.ತಿಮ್ಮಾಪುರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಆಯಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ರಾಜ್ಯದ ಆರ್ಥಿಕತೆ ಏರಿಕೆ; 1,03,683 ಕೋಟಿ ರೂ. ಆದಾಯ ಸಂಗ್ರಹ, ಮೂಲಸೌಕರ್ಯ ಕ್ಷೇತ್ರದಲ್ಲಿ ಹೆಚ್ಚಿನ ಹೂಡಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.