ETV Bharat / state

ಜನರ ಬಳಿಗೆ ಸರ್ಕಾರ ಹೋಗಬೇಕು ಎಂಬುದು ನಮ್ಮ ಉದ್ದೇಶ: ಸಿಎಂ ಸಿದ್ದರಾಮಯ್ಯ

ಕನ್ನಡಿಗರ ಹಿತ ಕಾಯುವುದು ನಮ್ಮ ಕೆಲಸ. ಈ ನಿಟ್ಟಿನಲ್ಲಿ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಜನರ ಸಮಸ್ಯೆಗೆ ಸ್ಥಳದಲ್ಲಿ ಪರಿಹಾರ ಕೊಡಲು ಪ್ರಯತ್ನ ನಡೆಸುತ್ತೇವೆ ಎಂದು ಜನಸ್ಪಂದನ ಕಾರ್ಯಕ್ರಮ ಉದ್ದೇಶಿಸಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

cm siddaramaiha
ಸಿಎಂ ಸಿದ್ದರಾಮಯ್ಯ
author img

By ETV Bharat Karnataka Team

Published : Feb 8, 2024, 12:32 PM IST

Updated : Feb 8, 2024, 1:27 PM IST

ಜನಸ್ಪಂದನ ಕಾರ್ಯಕ್ರಮ

ಬೆಂಗಳೂರು: ಜನರ ಬಳಿಗೆ ಸರ್ಕಾರ ಹೋಗಬೇಕು ಎಂಬುದು ನಮ್ಮ ಉದ್ದೇಶ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಜನಸ್ಪಂದನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಮಟ್ಟದ ಎರಡನೇ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಮೊದಲನೇ ಕಾರ್ಯಕ್ರಮ ನವೆಂಬರ್​ 27ರಂದು ನಡೆದಿತ್ತು. ಕಳೆದ ಬಾರಿ ಐದು ಸಾವಿರದಷ್ಟು ಅರ್ಜಿ ಬಂದಿದ್ದವು. ಶೇ 98ರಷ್ಟು ಅರ್ಜಿಗಳ ವಿಲೇವಾರಿ ಮಾಡಲಾಗಿದೆ. ಸಮಸ್ಯೆಗಳಿಗೆ ಪರಿಹಾರ ನೀಡಲಾಗಿದೆ. ಬಾಕಿ ಉಳಿದ ಅರ್ಜಿಗಳು ಕೆಲವೇ ದಿನಗಳಲ್ಲಿ ಇತ್ಯರ್ಥವಾಗುತ್ತೆ ಎಂದು ಭರವಸೆ ನೀಡಿದರು.

ಇವತ್ತು ಹತ್ತು ಸಾವಿರಕ್ಕೂ ಹೆಚ್ಚು ಜನರು ಬಂದಿದ್ದೀರಾ. ನಿಮ್ಮ ಸ್ಥಳಕ್ಕೆ ಬಂದು ಅರ್ಜಿ ಸ್ವೀಕಾರ ಮಾಡುತ್ತೇನೆ. ಸರ್ಕಾರ ಪರಿಹಾರ ಒದಗಿಸುವ ಕೆಲಸ ಮಾಡುತ್ತೇವೆ. ಜಿಲ್ಲಾ ಮಟ್ಟದಲ್ಲಿ 108 ಜನಸ್ಪಂದನ ಕಾರ್ಯಕ್ರಮ ಮಾಡಿದ್ದಾರೆ. ಜನರು ಸಣ್ಣಪುಟ್ಟ ಸಮಸ್ಯೆ ಹೊತ್ತು ಬೆಂಗಳೂರಿಗೆ ಬರುತ್ತಾರೆ. ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಮಸ್ಯೆ ಬಗೆಹರಿಸಬೇಕು. ರಾಜ್ಯಮಟ್ಟದಲ್ಲಿ ನಾನು ಪರಿಹಾರ ಕೊಡುತ್ತೇನೆ. ಕಾನೂನು ಬದ್ಧ ಸಮಸ್ಯಗಳಿಗೆ ಪರಿಹಾರ ಸಿಕ್ಕೇ ಸಿಗುತ್ತೆ ಎಂದರು.

ಅಧಿಕಾರಕ್ಕೆ ಬಂದು ಎಂಟು ತಿಂಗಳಲ್ಲಿ ಎಲ್ಲ ಗ್ಯಾರಂಟಿ ಜಾರಿ‌ ಮಾಡಿದ್ದೇವೆ. ಬಿಜೆಪಿಗರು ಗ್ಯಾರಂಟಿಗಳು ಜಾರಿ ಆಗುವುದಿಲ್ಲ ಎಂದು ಹೇಳುತ್ತಿದ್ದರು. ಆದರೆ, ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಜಾರಿ ಮಾಡಿದ್ದೇವೆ. ಸಮಾಜದಲ್ಲಿ ನೆಮ್ಮದಿ, ಶಾಂತಿ ಇರಬೇಕು. ಸಮ ಸಮಾಜ ನಿರ್ಮಾಣ ಆಗಬೇಕು. ಕಾನೂನು ಸುವ್ಯವಸ್ಥೆ ಇದ್ದರೆ ಬಂಡವಾಳ ಹರಿದು ಬರುತ್ತದೆ. ಇದರಿಂದ ರಾಜ್ಯದ ಅಭಿವೃದ್ಧಿ ಆಗುತ್ತದೆ. ಬಿಜೆಪಿ ಅಪಪ್ರಚಾರ ಮಾಡಿ ಜನರ ದಾರಿ ತಪ್ಪಿಸುತ್ತಿದೆ. ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಏನು ಕೆಲಸ ಮಾಡಲಿಲ್ಲ. ತಪ್ಪು ದಾರಿಗೆ ಜನರನ್ನು ಎಳೆಯುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಕನ್ನಡಿಗರ ಹಿತ ಕಾಯುವುದು ನಮ್ಮ ಕೆಲಸ. ಈ ನಿಟ್ಟಿನಲ್ಲಿ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಜನರ ಸಮಸ್ಯೆಗೆ ಸ್ಥಳದಲ್ಲಿ ಪರಿಹಾರ ಕೊಡಲು ಪ್ರಯತ್ನ ನಡೆಸುತ್ತೇವೆ. ವಿರೋಧ ಪಕ್ಷದ ಮಾತನ್ನು ಕೇಳಬೇಡಿ. ಅವರು ಅಧಿಕಾರದಲ್ಲಿ ಇದ್ದಾಗ ಏನೂ ಮಾಡಿಲ್ಲ. ಇವಾಗ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ಗ್ಯಾರಂಟಿ ಯೋಜನೆ ಕೂಡಾ ಅಭಿವೃದ್ಧಿ ಕೆಲಸ ಅಲ್ಲವೇ? ಜನರ ಬಡತನ ಹೋಗಲಾಡಿಸಲು ಅಲ್ಲವೇ ಹಣ ಖರ್ಚು ಮಾಡುವುದು. ವಿರೋಧ ಪಕ್ಷಕ್ಕೆ ಅಭಿವೃದ್ಧಿ, ಸಮಾನತೆ, ಸಾಮಾಜಿಕ ನ್ಯಾಯ ಗೊತ್ತಿಲ್ಲ ಎಂದು ಟೀಕಿಸಿದರು.

ಇದನ್ನೂ ಓದಿ: ವಿಧಾನಸೌಧದಲ್ಲಿ ಜನಸ್ಪಂದನಾ ಕಾರ್ಯಕ್ರಮ: ಸಿಎಂ ಬಳಿ ಅಳಲು ತೋಡಿಕೊಳ್ಳುತ್ತಿರುವ ಜನ - ನೇರಪ್ರಸಾರ

Last Updated : Feb 8, 2024, 1:27 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.