ETV Bharat / state

'ಇದು ರಾಜಕೀಯ ಚಳವಳಿ ಅಲ್ಲ, ಕರ್ನಾಟಕದ ಹಾಗೂ ಕನ್ನಡಿಗರ ಹಿತ ಕಾಯುವ ಚಳವಳಿ' : ಸಿಎಂ ಸಿದ್ದರಾಮಯ್ಯ

ಜಂತರ್​ ಮಂತರ್​ನಲ್ಲಿ ಹಮ್ಮಿಕೊಂಡಿರುವ ಹೋರಾಟ ಕರ್ನಾಟಕದ, ಕನ್ನಡಿಗರ ಹಿತ ಕಾಪಾಡುವ ಚಳವಳಿಯಾಗಿದೆಯೇ ಹೊರತು ಇದು ರಾಜಕೀಯ ಚಳವಳಿ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

author img

By ETV Bharat Karnataka Team

Published : Feb 7, 2024, 12:30 PM IST

Updated : Feb 7, 2024, 2:51 PM IST

ಸಿಎಂ ಸಿದ್ಧರಾಮಯ್ಯ
ಸಿಎಂ ಸಿದ್ಧರಾಮಯ್ಯ
'ಇದು ರಾಜಕೀಯ ಚಳವಳಿ ಅಲ್ಲ, ಕರ್ನಾಟಕದ ಹಾಗೂ ಕನ್ನಡಿಗರ ಹಿತ ಕಾಯುವ ಚಳವಳಿ' : ಸಿಎಂ ಸಿದ್ದರಾಮಯ್ಯ

ಬೆಂಗಳೂರು/ನವದೆಹಲಿ: ಕೇಂದ್ರ ಸರ್ಕಾರ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯದ ವಿರುದ್ಧ ಇಂದು ನವದೆಹಲಿಯ ಜಂತರ್​ ಮಂತರ್​ನಲ್ಲಿ ಹಮ್ಮಿಕೊಂಡಿರುವ ಹೋರಾಟ ಕರ್ನಾಟಕದ, ಕನ್ನಡಿಗರ ಹಿತ ಕಾಪಾಡುವ ಚಳವಳಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ನವದೆಹಲಿಯ ಜಂತರ್ ಮಂತರ್​ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಇದು ರಾಜಕೀಯ ಚಳವಳಿ ಅಲ್ಲ: ಕಳೆದ ಐದಾರು ವರ್ಷಗಳಲ್ಲಿ 1,87,000 ಕೋಟಿ ರೂ.ಗಳಷ್ಟು ನ್ಯಾಯಯುತವಾಗಿ ಬರಬೇಕಾಗಿದ್ದ ಅನುದಾನವನ್ನು ರಾಜ್ಯಕ್ಕೆ ನೀಡಲಾಗಿಲ್ಲ. ಈ ಅನ್ಯಾಯದ ವಿರುದ್ಧ ಪ್ರತಿಭಟನೆಯನ್ನು ಮಾಡಲಾಗುತ್ತಿದೆ. ಜಂತರ್ ಮಂತರ್ ಐತಿಹಾಸಿಕ ಸ್ಥಳವಾಗಿದ್ದು, ಅನೇಕ ಚಳವಳಿಗೆ ಸಾಕ್ಷಿಯಾದ ಸ್ಥಳ. ಇಂತಹ ಜಾಗದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್​ ಸೇರಿದಂತೆ ಎಲ್ಲ ಸಚಿವರು, ಶಾಸಕರು ಈ ಹೋರಾಟದಲ್ಲಿ ಭಾಗವಹಿಸಿದ್ದಾರೆ. ಇದು ರಾಜಕೀಯ ಚಳವಳಿ ಅಲ್ಲ. ಕೇಂದ್ರ ಸರ್ಕಾರದ ವಿರುದ್ಧದ ಈ ಹೋರಾಟವನ್ನು ಪಕ್ಷಾತೀತವಾಗಿ ಮಾಡಬೇಕೆಂಬ ಮನವಿಯನ್ನು ರಾಜ್ಯ ಬಿಜೆಪಿಯ ನಾಯಕರಿಗೂ ಮಾಡಲಾಗಿದೆ ಎಂದರು.

ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

100ರೂ. ಗಳಲ್ಲಿ ರಾಜ್ಯಕ್ಕೆ ಕೇವಲ 12 ರಿಂದ 13 ರೂ. : ಇದು ಐತಿಹಾಸಿಕವಾದ ಪ್ರತಿಭಟನೆ. 14 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ತೆರಿಗೆ ಪಾಲು 4.71 % ಬಂದಿತ್ತು. 15 ನೇ ಹಣಕಾಸು ಆಯೋಗದಲ್ಲಿ 3.64 % ಕ್ಕೆ ಇಳಿಯಿತು. ಇದರಿಂದ ರಾಜ್ಯಕ್ಕೆ ಬರುವ ತೆರಿಗೆಯಲ್ಲಿ ಶೇ. 40 ರಿಂದ 45ರ ವರೆಗೆ ಕಡಿತವಾಗಿದೆ. ಒಟ್ಟಾರೆಯಾಗಿ 14 ನೇ ಹಣಕಾಸು ಆಯೋಗದ ಶಿಫಾರಸ್ಸನ್ನೇ 15 ನೇ ಹಣಕಾಸು ಆಯೋಗದಲ್ಲಿ ಅನುಸರಿಸಿದ್ದರೆ, ರಾಜ್ಯಕ್ಕೆ 62,098 ಕೋಟಿ ರೂ. ಬರುತ್ತಿತ್ತು.

ರಾಜ್ಯದಿಂದ ಒಟ್ಟು 4,30,000 ಕೋಟಿ ತೆರಿಗೆ ಮೊತ್ತವನ್ನು ಕೇಂದ್ರಕ್ಕೆ ನೀಡಲಾಗುತ್ತದೆ. ಅಂದರೆ 100 ರೂ. ತೆರಿಗೆಯಲ್ಲಿ ರಾಜ್ಯಕ್ಕೆ ಕೇವಲ 12 ರಿಂದ 13 ರೂ. ದೊರೆಯುತ್ತಿದೆ. ಇದು ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ. ಕರ್ನಾಟಕದಿಂದ 25 ಸಂಸದರು ಆಯ್ಕೆಯಾಗಿದ್ದು, ಒಬ್ಬರೂ ಈ ಬಗ್ಗೆ ಕೇಂದ್ರ ಮುಂದೆ ಮಾತನಾಡಿಲ್ಲ. ಅಲ್ಲದೆ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅಥವಾ ಬಸವರಾಜ ಬೊಮ್ಮಾಯಿಯವರು ಈ ಅನ್ಯಾಯವನ್ನು ಸರಿಪಡಿಸುವ ಮನವಿ ಮಾಡಿರುವುದಿಲ್ಲ. ಈ ಎಲ್ಲ ಕಾರಣಗಳಿಗಾಗಿ ಇಂದು ನವದೆಹಲಿಯಲ್ಲಿ ಹೋರಾಟ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಉತ್ತರಪ್ರದೇಶ ರಾಜ್ಯಕ್ಕೆ 2,80,000 ಕೋಟಿ ರೂ. ಕೇಂದ್ರ ನೀಡುತ್ತಿದೆ. ಅಂತೆಯೇ, ಬಿಹಾರ, ಮಧ್ಯಪ್ರದೇಶ, ರಾಜಸ್ಥಾನಗಳಿಗೂ ನೀಡಲಾಗುತ್ತಿದೆ. ಈ ಯಾವ ರಾಜ್ಯಗಳೂ ಜನಸಂಖ್ಯಾ ನಿಯಂತ್ರಣದ ಬಗ್ಗೆ ಕ್ರಮ ಕೈಗೊಂಡಿಲ್ಲ. ಜನಸಂಖ್ಯೆ, ತಲಾ ಆದಾಯ, ಸಮುದಾಯಗಳ ಅಭಿವೃದ್ಧಿ ಸೇರಿದಂತೆ ಹಲವು ಮಾನದಂಡಗಳಿಂದ ಅನುದಾನ ಹಂಚಿಕೆಯನ್ನು ನಿರ್ಧರಿಸಲಾಗುತ್ತದೆ. 15 ನೇ ಹಣಕಾಸು ಆಯೋಗದಲ್ಲಿ 2011ರ ಜನಗಣತಿಯನ್ನು ಪರಿಗಣಿಸುತ್ತಿದ್ದಾರೆ ಎಂದು ತಿಳಿಸಿದರು.

ಚಿನ್ನದ ಮೊಟ್ಟೆ ಇಡುವ ಕೋಳಿಯನ್ನೇ ಕೊಲ್ಲಬೇಡಿ: ಉತ್ತರ ಭಾರತದ ರಾಜ್ಯಗಳಿಗೆ ಹೆಚ್ಚಿಗೆ ಅನುದಾನ ಕೊಡುವ ಬಗ್ಗೆ ನಮಗೆ ತಕರಾರುಗಳಿಲ್ಲ. ಆದರೆ ನಮ್ಮ ರಾಜ್ಯಕ್ಕೆ ಅನ್ಯಾಯ ಮಾಡಬೇಡಿ ಎನ್ನುವುದು ನಮ್ಮ ಆಗ್ರಹ. ಚಿನ್ನದ ಮೊಟ್ಟೆ ಇಡುವ ಕೋಳಿಯನ್ನೇ ಕೊಂದು ಹಾಕಬೇಡಿ, ಹಾಲು ಕೊಡುವ ಕೆಚ್ಚಲು ಕತ್ತರಿಸಬೇಡಿ ಎಂದು ಒತ್ತಾಯಿಸಲು ನಮ್ಮ ಪ್ರತಿಭಟನೆ ಎಂದು ಹೇಳಿದರು.

15 ನೇ ಹಣಕಾಸು ಆಯೋಗದಿಂದಾಗಿ 62,098 ಕೋಟಿ ರೂ. ತೆರಿಗೆಯೊಂದರಲ್ಲೇ ನಮಗೆ ಅನ್ಯಾಯ ಆಗಿದೆ. ಇದನ್ನು ನಾವು ಪ್ರಶ್ನಿಸಬಾರದಾ?. ಈ ಕಾರಣಗಳಿಗೇ ನಾವು ಪ್ರತಿಭಟನೆ ಮಾಡುತ್ತಿದ್ದೇವೆ. ಆದರೆ ಬಿಜೆಪಿ ನಿರಂತರ ಸುಳ್ಳುಗಳ ಮೂಲಕ ತಮ್ಮ ದ್ರೋಹವನ್ನು ಮರೆಮಾಚಲು ನೋಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಕಳೆದ 10 ವರ್ಷಗಳಿಂದ ಹಂತ ಹಂತವಾಗಿ ರಾಜ್ಯದ ತೆರಿಗೆ ಪಾಲು, ಕೇಂದ್ರದ ಅನುದಾನದ ಪಾಲು ನಿರಂತರವಾಗಿ ಕಡಿಮೆ ಆಗುತ್ತಿರುವುದನ್ನು ಮುಖ್ಯಮಂತ್ರಿಗಳು ಪ್ರತೀ ವರ್ಷದ ಅಂಕಿ ಅಂಶಗಳೊಂದಿಗೆ ವಿವರಿಸಿದರು.

ರಾಜ್ಯದಿಂದ ಆಯ್ಕೆ ಆಗಿರುವ ಬಿಜೆಪಿ ಸಂಸದರು ಕೋಲೆ ಬಸವನ ರೀತಿಯಲ್ಲಿ ಮೋದಿ ಅವರ ಎದುರಿಗೆ ತಲೆ ಅಲ್ಲಾಡಿಸುವುದನ್ನು ಬಿಟ್ಟರೆ ರಾಜ್ಯದ ಪಾಲನ್ನು ಬಾಯಿಬಿಟ್ಟು ಕೇಳಲೇ ಇಲ್ಲ. ನಾನು ವಿಧಾನಸಭಾ ಅಧಿವೇಶನದಲ್ಲಿ ಮೇಲಿಂದ ಮೇಲೆ ಒತ್ತಾಯಿಸಿದೆ. ಯಡಿಯೂರಪ್ಪ, ಬೊಮ್ಮಾಯಿ ಅವರಿಗೆ ಒತ್ತಾಯಿಸಿ ಕೇಂದ್ರದ ಮುಂದೆ ರಾಜ್ಯದ ಹಕ್ಕು ಮಂಡಿಸಿ ಎಂದು ಆಗ್ರಹಿಸಿದೆ. ಅವರು ಕೇಳಲಿಲ್ಲ. ಇವರು ಕೊಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಮಗೆ ಅನ್ಯಾಯ ಸರಿಪಡಿಸಲು ವಿಶೇಷ ಅನುದಾನದವಾಗಿ 11,495 ಕೋಟಿ ಕೊಡ್ತೀವಿ ಎಂದು ಘೋಷಿಸಿದರು. ಆದರೆ ಈ ಹಣ ಕೊಡಬೇಡಿ ಎಂದು ತಡೆ ಹಿಡಿದವರೇ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಅವರು. ಆದರೆ ಈಗೇಕೆ ಸುಳ್ಳು ಹೇಳ್ತಿದ್ದೀರಿ ಮೇಡಂ ಎಂದು ಸಿಎಂ ಕೇಳಿದರು. ನೀವು ಎಷ್ಟೇ ಸುಳ್ಳುಗಳನ್ನು ಹೇಳಿದರೂ ಸತ್ಯ ಮುಚ್ಚಿಹಾಕಲು ಸಾಧ್ಯವಿಲ್ಲ ಯಡಿಯೂರಪ್ಪ, ಬೊಮ್ಮಾಯಿ, ಮೋದಿಯವರೇ ಎಂದು ಗುಡುಗಿದರು.

ಕೇಂದ್ರ ಸರ್ಕಾರದ ಬಜೆಟ್ ದಾಖಲೆಗಳನ್ನೇ ಪರಿಶೀಲಿಸಿ ನೋಡಿ, ನಮಗಾಗಿರುವ ವಂಚನೆಯ ಪ್ರಮಾಣ ಅದರಲ್ಲಿ ದಾಖಲಾಗಿದೆ. 15 ನೇ ಹಣಕಾಸು ಆಯೋಗ ಒಂದರಿಂದಲೇ ಇದುವರೆಗೂ 1,87,000 ಕೋಟಿ ರೂಪಾಯಿ ರಾಜ್ಯಕ್ಕೆ ಅನ್ಯಾಯ ಆಗಿದೆ. ರಾಜ್ಯಕ್ಕೆ ಭೀಕರ ಬರಗಾಲ ಬಂತು. ಸೆಪ್ಟೆಂಬರ್​ನಿಂದ ನಿರಂತರವಾಗಿ ರಾಜ್ಯದ ಪಾಲಿನ ಬರ ಪರಿಹಾರ ಕೊಡಿ ಎಂದು ಒತ್ತಾಯಿಸುತ್ತಲೇ ಇದ್ದೇವೆ. ಆದರೆ ಇದುವರೆಗೂ ಒಂದೇ ಒಂದು ರೂಪಾಯಿ ಬರಪರಿಹಾರ ಕೊಟ್ಟಿಲ್ಲ. ನಾನೇ ಡಿ. 19 ರಂದು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರನ್ನು ಖುದ್ದಾಗಿ ಭೇಟಿ ಮಾಡಿ ವಿನಂತಿಸಿದ್ದೆ. ಆದರೂ ಇವತ್ತಿಗೂ ಒಂದು ಪೈಸೆ ಬಂದಿಲ್ಲ ಎಂದು ಸಿಎಂ ಹೇಳಿದರು.

ಈ ಬಗ್ಗೆ ಇನ್ನೂ ಒಂದೂ ಸಭೆಯನ್ನು ನೆಪಕ್ಕೂ ಕರೆದಿಲ್ಲ. ಇದರಿಂದ ಒಂದು ರೂಪಾಯಿ ಕೂಡ ಬಂದಿಲ್ಲ. ಆದರೂ ಬರದಿಂದ ರಾಜ್ಯದ ಜನತೆ ಕಂಗಾಲಾಗದಂತೆ ರಾಜ್ಯ ಸರ್ಕಾರವೇ ಪರಿಹಾರ ನೀಡಿದೆ. 31 ಲಕ್ಷ ರೈತರಿಗೆ 650 ಕೋಟಿ ಬರ ಪರಿಹಾರವನ್ನು ರಾಜ್ಯದ ಬೊಕ್ಕಸದಿಂದಲೇ ಕೊಟ್ಟಿದ್ದೇವೆ. ಇನ್ನೂ ರೈತರಿಗೆ ಪರಿಹಾರ ಕೊಡುವವರಿದ್ದೇವೆ. ಕೇಂದ್ರ ತನ್ನ ಕೈಯಿಂದ ಪರಿಹಾರ ಕೊಡುವುದಲ್ಲ. ನಮ್ಮ ಹಣ ಅವರ ಬಳಿ ಇದೆ. ಅದರಲ್ಲಿ ರಾಜ್ಯದ ಪಾಲನ್ನು ವಾಪಸ್ ಕೊಡಬೇಕಿತ್ತು. ಇದರಲ್ಲೂ ಒಂದೇ ಒಂದು ರೂಪಾಯಿ ಕೊಡಲಿಲ್ಲ. ನಾವು ಇನ್ನೂ NDRF ನಿಧಿಗಾಗಿ ಕಾಯುತ್ತಲೇ ಇದ್ದೇವೆ. ಈ ಹಣ ಕೊಡಿಸಿ ಯಡಿಯೂರಪ್ಪ, ಅಶೋಕ್, ನಿರ್ಮಲಾ ಸೀತಾರಾಮನ್ ಅವರೇ ಎಂದು ಸಿಎಂ ಒತ್ತಾಯಿಸಿದರು.

ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗೆ ನಾವು ಅನ್ನಭಾಗ್ಯ ಯೋಜನೆ ಜಾರಿ ಮಾಡಿದೆವು. ದುಡ್ಡು ಕೊಡುತ್ತೇವೆ ಅಕ್ಕಿ ಕೊಡಿ ಎಂದರೂ ಕೇಂದ್ರ ಅಕ್ಕಿ ಕೊಡಲಿಲ್ಲ. ಇದರಿಂದ ನಾವು ನೇರವಾಗಿ ಜನರಿಗೇ ಹಣ ಕೊಟ್ಟೆವು. ಇಷ್ಟೆಲ್ಲಾ ರಾಜ್ಯದ ಜನರಿಗೆ ದ್ರೋಹ ಮಾಡಿ ಈಗ ನಮ್ಮ ಗ್ಯಾರಂಟಿ ಯೋಜನೆಗಳನ್ನು ಬಿಟ್ಟಿಭಾಗ್ಯ ಎನ್ನುತ್ತಿದ್ದಾರೆ. ಬಡವರು, ಮಧ್ಯಮ ವರ್ಗದವರಿಗೆ ನೆರವು ನೀಡುವುದು ಬಿಟ್ಟಿಭಾಗ್ಯ ಎಂದು ಅಹಂಕಾರ ಮೆರೆದರು ಎಂದು ಸಿಎಂ ಆರೋಪಿಸಿದರು.

ಇದನ್ನೂ ಓದಿ: ಜಂತರ್​ ಮಂತರ್​ನಲ್ಲಿ ಕರ್ನಾಟಕ ಕಾಂಗ್ರೆಸ್​ ನಾಯಕರಿಂದ ಪ್ರತಿಭಟನೆ

Last Updated : Feb 7, 2024, 2:51 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.