ETV Bharat / state

ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ: ಸಿ.ಎಂ ಸಿದ್ದರಾಮಯ್ಯ - Loksabha Election - LOKSABHA ELECTION

ಪ್ರತಿಷ್ಠೆಯ ಕಣವಾಗಿರುವ ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಗೆಲುವುವು ಖಚಿತ ಎಂದು ಸಿ.ಎಂ ಸಿದ್ದರಾಮಯ್ಯ ತಿಳಿಸಿದರು.

ಸಿ.ಎಂ ಸಿದ್ದರಾಮಯ್ಯ
ಸಿ.ಎಂ ಸಿದ್ದರಾಮಯ್ಯ
author img

By ETV Bharat Karnataka Team

Published : Mar 24, 2024, 4:22 PM IST

ಮೈಸೂರು : ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವುದು ಖಚಿತ. ಇವೆರಡನ್ನೂ ಸೇರಿಸಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಮೈಸೂರು, ಕೊಡಗು ಮತ್ತು ಚಾಮರಾಜನಗರ ಮೂರು ಜಿಲ್ಲಾ ವ್ಯಾಪ್ತಿಯ ಸಚಿವರು, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಜಿಲ್ಲಾ ಮುಖಂಡರು, ಬೋರ್ಡ್ ಅಧ್ಯಕ್ಷರುಗಳು, ಬ್ಲಾಕ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಸಿಎಂ ಮಾತನಾಡಿದರು. ಇವೆರಡೂ ಕಾಂಗ್ರೆಸ್ ಕ್ಷೇತ್ರಗಳು. ಮತ್ತೆ ನಮ್ಮ 'ಕೈ'ಗೆ ಬರಲೇಬೇಕು. ಹಿಂದಿನ ಬಾರಿ ಕೆಲವು ಕಾರಣಗಳಿಂದಾಗಿ ಅತ್ಯಂತ ಕಡಿಮೆ ಮತಗಳಿಂದ ನಮಗೆ ಹಿನ್ನಡೆಯಾಗಿತ್ತು. ಆದರೆ ಈ ಬಾರಿ ಬಿಜೆಪಿ ಪರವಾದ ಯಾವ ಕಾರಣಗಳೂ ಇಲ್ಲ. ರಾಜ್ಯದಲ್ಲಿ ಬಿಜೆಪಿ ವಿರೋಧಿ ಅಲೆ ಜೋರಾಗಿದೆ. ಬಿಜೆಪಿಯ ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ತುತ್ತಾಗಿದ್ದ ರಾಜ್ಯದ ಎಲ್ಲಾ ಕುಟುಂಬಗಳಿಗೆ ಕಾಂಗ್ರೆಸ್ ಗ್ಯಾರಂಟಿಗಳು ನೆಮ್ಮದಿ ತರಿಸಿರುವುದನ್ನು ನಾಡಿನ ಜನತೆ ಹೃದಯಪೂರ್ವಕವಾಗಿ ಒಪ್ಪಿಕೊಂಡಿದ್ದಾರೆ ಎಂದರು.

ನಾವು ನಡೆಸಿರುವ ಹಲವು‌ ಸಮೀಕ್ಷೆಗಳಲ್ಲಿ ಮೈಸೂರು, ಚಾಮರಾಜನಗರ ಕ್ಷೇತ್ರಗಳಲ್ಲಿ ಗೆಲ್ಲುವುದೂ ಸೇರಿ 20 ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ ಎನ್ನುವ ವರದಿಗಳು ಬಂದಿವೆ. ಹೀಗಾಗಿ‌ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಕಾಂಗ್ರೆಸ್ ಪರವಾದ ಅಭೂತಪೂರ್ವ ಫಲಿತಾಂಶ ಹೊರಗೆ ಬರಲಿದೆ ಎಂದು‌ ಸಿದ್ದರಾಮಯ್ಯ ವಿಶ್ವಾಸದಿಂದ ನುಡಿದರು.

10 ವರ್ಷ ಕೇಂದ್ರದಲ್ಲಿ ಅಧಿಕಾರ ನಡೆಸಿದ ಬಿಜೆಪಿಯವರಿಗೆ ಜನರ ಬಳಿ ಹೋಗಲು ಮುಖ ಇಲ್ಲ. ಏಕೆಂದರೆ ಈ 10 ವರ್ಷಗಳಲ್ಲಿ ಬಿಜೆಪಿ ಜನರಿಗೆ ತೋರಿಸಲು ಒಂದೇ ಒಂದು ಕೆಲಸವನ್ನೂ ಮಾಡಿಲ್ಲ. ಅದಕ್ಕೇ ಕೇವಲ ಮೋದಿಯವರ ಮುಖ ತೋರಿಸಿ ಚುನಾವಣೆ ಮಾಡುತ್ತಿದ್ದೇವೆ ಎಂದು ಬಿಜೆಪಿ ಹೆಣಗಾಡುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಮೋದಿ ಪ್ರಚಾರ ಮಾಡಿದ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ 50-60 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದೆ. ಹೀಗಾಗಿ ಬಿಜೆಪಿ ಸುಳ್ಳುಗಳ ಮೊರೆ ಹೋಗಿದೆ. ನನ್ನ ಬಗ್ಗೆ, ನಮ್ಮ ನಾಯಕರ ಬಗ್ಗೆ, ನಮ್ಮ ಪಕ್ಷದ ಬಗ್ಗೆ ಸರಣಿ ಸುಳ್ಳುಗಳನ್ನು ಹೇಳುತ್ತಾ, ಸುಳ್ಳುಗಳ ಆಧಾರದಲ್ಲೇ ಚುನಾವಣೆ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಟೀಕಿಸಿದರು.

ಸೆಕ್ಯುಲರ್ ಏನಾಯ್ತು? : ನರೇಂದ್ರ ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ. ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದಿದ್ದ ಹೆಚ್​.ಡಿ ದೇವೇಗೌಡರು ಈಗ ಬಿಜೆಪಿ ಜತೆ ಸೇರಿದ್ದಾರೆ. ತಮ್ಮ ಅಳಿಯ ಡಾ. ಸಿ.ಎನ್​ ಮಂಜುನಾಥ್ ಅವರನ್ನು ಬಿಜೆಪಿಗೆ ಕಳಿಸಿದ್ದಾರೆ. ಮೊದಲು ನೀನು ಹೋಗಿರು, ಆಮೇಲೆ ನಾವೂ ಬರುತ್ತೇವೆ ಎನ್ನುವ ರೀತಿ ಅಳಿಯನನ್ನು ಬಿಜೆಪಿಗೆ ಕಳಿಸಿದ್ದಾರೆ. ಅದಕ್ಕೇ ತಮ್ಮ ಪಕ್ಷದ ಹೆಸರಿನಲ್ಲಿರುವ ಜಾತ್ಯತೀತ ಪದವನ್ನು ತೆಗೆದುಹಾಕುವುದು ಉತ್ತಮ ಎಂದು ಸಿದ್ದರಾಮಯ್ಯ ಸಲಹೆ ನೀಡಿದರು.

ನಮ್ಮ ಪಾಲು ಕೇಳೋಕೆ ಸುಪ್ರೀಂ ಕೋರ್ಟ್​ಗೆ ಹೋಗಬೇಕಾಯ್ತು : ಬರಗಾಲ ಬಂದು ಐದು ತಿಂಗಳಾದರೂ ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ಬಂದಿಲ್ಲ. ಮೊದಲು ರಾಜ್ಯದ ಜನರಿಗೆ ಅಕ್ಕಿ ಕೊಡ್ತೀವಿ. ದುಡ್ಡು ತಗೊಂಡು ಅಕ್ಕಿ ಕೊಡಿ ಅಂದರೂ ಕೊಡಲಿಲ್ಲ. ಈಗ ರಾಜ್ಯದ ಪಾಲಿನ ಬರ ಪರಿಹಾರ ನಮಗೆ ಕೊಡಿ ಎಂದರೂ ಕೊಡುತ್ತಿಲ್ಲ. ನಮ್ಮ ತೆರಿಗೆ ಹಣಕ್ಕೆ ಬೆಲೆ ಇಲ್ಲವಾ? ನಮ್ಮ ರಾಜ್ಯದ ಜನರ ಬೇಡಿಕೆಗೆ ಬೆಲೆ ಇಲ್ಲವಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಸಚಿವರಾದ ಹೆಚ್.ಸಿ. ಮಹದೇವಪ್ಪ, ಕೆ.ವೆಂಕಟೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ಆಶ್ರಯ ಯೋಜನೆ ಅಧ್ಯಕ್ಷ, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಮೈಸೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಲಕ್ಷ್ಮಣ್ ಸೇರಿ ಮೂರು ಜಿಲ್ಲೆಗಳ ಎಲ್ಲಾ ಶಾಸಕರುಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ : ಟಿಕೆಟ್ ಹಂಚಿಕೆಯಲ್ಲಿ ಕಗ್ಗಂಟು ಇಲ್ಲ, ನಾಳೆ ಅಥವಾ ನಾಡಿದ್ದು ಉಳಿದ ಕ್ಷೇತ್ರಗಳ ಪಟ್ಟಿ ಪ್ರಕಟ: ಸಿಎಂ ಸಿದ್ದರಾಮಯ್ಯ - CM Siddaramaiah

ETV Bharat Logo

Copyright © 2024 Ushodaya Enterprises Pvt. Ltd., All Rights Reserved.