ETV Bharat / state

"ಭೂ ಸುರಕ್ಷಾ" ಯೋಜನೆ ಪರಿಣಾಮಕಾರಿಯಾಗಿ ಜಾರಿಯಾಗಲಿ: ಸಿಎಂ ಸೂಚನೆ - CM MEETING WITH OFFICIALS

ಗೃಹ ಕಚೇರಿ ಕೃಷ್ಣಾದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ, ವಂಚಕರಿಂದ ದಾಖಲೆ ತಿದ್ದಲು ಅವಕಾಶ ಆಗದಂತೆ "ಭೂ ಸುರಕ್ಷಾ" ಪರಿಣಾಮಕಾರಿಯಾಗಿ ಜಾರಿಯಾಗಲಿ ಎಂದು ಸೂಚನೆ ನೀಡಿದ್ದಾರೆ.

CM MEETING WITH OFFICIALS
ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ (ETV Bharat)
author img

By ETV Bharat Karnataka Team

Published : Jan 29, 2025, 3:37 PM IST

ಬೆಂಗಳೂರು : ಭೂ ದಾಖಲೆಗಳ ರಕ್ಷಣೆಗೆ ಹಾಗೂ ವಂಚಕರಿಂದ ದುರುಪಯೋಗ ಆಗದಂತೆ, ದಾಖಲೆ ತಿದ್ದಲು ಅವಕಾಶ ಆಗದಂತೆ "ಭೂ ಸುರಕ್ಷಾ" ಪರಿಣಾಮಕಾರಿಯಾಗಿ ಜಾರಿಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಈ ಸೂಚನೆ ನೀಡಿದ್ದಾರೆ. ಈಗಾಗಲೇ 8 ಕೋಟಿ ಮೂಲ ದಾಖಲೆಗಳ ಕಂಪ್ಯೂಟರೀಕರಣವಾಗಿದ್ದು, ಖದೀಮರು ತಿದ್ದಲು ಅವಕಾಶ ಆಗದಂತೆ ದಾಖಲೆಗಳಿಗೆ ಡಿಜಿಟಲ್ ಭದ್ರತೆ ಒದಗಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಸಭೆಯ ಇತರ ಹೈಲೈಟ್ಸ್ ಗಳು : ತಂತ್ರಾಂಶವನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಕಂದಾಯ ವ್ಯವಸ್ಥೆಯಲ್ಲಿ ಸುಧಾರಣಾ ಕಾರ್ಯ ಕೈಗೊಳ್ಳಲಾಗಿದೆ. ನಕ್ಷಾ ಯೋಜನೆ ಮೂಲಕ ನಗರ ಪ್ರದೇಶದಲ್ಲಿ ಡ್ರೋನ್‌ ಸರ್ವೇ ಮೂಲಕ ಪ್ರಾಪರ್ಟಿ ಕಾರ್ಡು ನೀಡುತ್ತಿದ್ದೇವೆ. 21 ಜಿಲ್ಲೆಗಳಲ್ಲಿ ಡ್ರೋನ್‌ ಮೂಲಕ ಸರ್ವೇ ಕಾರ್ಯ ಕೈಗೊಳ್ಳಲಾಗಿದೆ. ಉಳಿದ ಜಿಲ್ಲೆಗಳಲ್ಲೂ ಡ್ರೋನ್ ಸರ್ವೇ ಆರಂಭಿಸಲು ಸಿಎಂ ಸೂಚನೆ.

ಭೂ ಸುರಕ್ಷಾ ಯೋಜನೆ ಮೂಲಕ ಭೂ ದಾಖಲೆಗಳ ಕಂಪ್ಯೂಟರೀಕರಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಇದುವರೆಗೆ ಸುಮಾರು 8 ಕೋಟಿ ಮೂಲ ದಾಖಲೆಗಳ ಕಂಪ್ಯೂಟರೀಕರಣ ಪೂರ್ಣಗೊಳಿಸಲಾಗಿದೆ. ಎಲ್ಲ 31 ಜಿಲ್ಲೆಗಳಲ್ಲಿ ದಾಖಲೆಗಳ ಕಂಪ್ಯೂಟರೀಕರಣ ಕಾರ್ಯ ನಡೆಯುತ್ತಿದೆ ಎಂದು ಸಭೆಯಲ್ಲಿ ಸಚಿವ ಕೃಷ್ಣಬೈರೇಗೌಡ ಅವರು ಸಿಎಂಗೆ ವಿವರಿಸಿದರು.

ಹಲವು ವರ್ಷಗಳಿಂದ ಸರ್ಕಾರಿ ಜಮೀನು ಸಾಗುವಳಿ ಮಾಡುತ್ತಿರುವ ರೈತರಿಂದ ಸದರಿ ಜಮೀನು ಸ್ವಾಧೀನಪಡಿಸುವ ಸಂದರ್ಭದಲ್ಲಿ ಎಕ್ಸ್ ಗ್ರೇಷಿಯಾ ನೀಡುವ ಬಗ್ಗೆ ಸೂಕ್ತ ಪ್ರಸ್ತಾವನೆ ಸಲ್ಲಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.

ಇದನ್ನೂ ಓದಿ: ಬಿ ಖಾತಾ ಪ್ರಕ್ರಿಯೆ ಪೂರ್ಣಗೊಳಿಸಿ, ಅನಧಿಕೃತ ಬಡಾವಣೆ ತಲೆಎತ್ತದಂತೆ ನೋಡಿಕೊಳ್ಳಬೇಕು: ಸಿಎಂ ಸೂಚನೆ - B KHATA PROCESS

ETV Bharat Logo

Copyright © 2025 Ushodaya Enterprises Pvt. Ltd., All Rights Reserved.