ETV Bharat / state

ಪೂಜ್ಯ ಸ್ವಾಮೀಜಿಗಳು ನನ್ನ ಬೆಂಬಲಕ್ಕೆ ನಿಂತು, ಇಡೀ ಸಮಾಜಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ: ಸಿಎಂ - CM Siddaramaiah

ತಮ್ಮ ಬೆಂಬಲಕ್ಕೆ ನಿಂತ ಸ್ವಾಮೀಜಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಧನ್ಯವಾದ ಸಲ್ಲಿಸಿದ್ದಾರೆ.

cm-siddaramaiah
ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Aug 25, 2024, 11:01 PM IST

ಬೆಂಗಳೂರು: ಬಹಳಷ್ಟು ಮಂದಿ ಪೂಜ್ಯ ಸ್ವಾಮೀಜಿಗಳು ನನ್ನ ಬೆಂಬಲಕ್ಕೆ ನಿಂತು, ಇಡೀ ಸಮಾಜಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್ ಪೋಸ್ಟ್ ಮೂಲಕ ಧನ್ಯವಾದ ಸಲ್ಲಿಸಿದ್ದಾರೆ.

ಮುಡಾ ವಿಚಾರದಲ್ಲಿ ನನ್ನ ವಿರುದ್ಧ ಷಡ್ಯಂತ್ರ ರೂಪಿಸಿ, ನನ್ನನ್ನು ರಾಜಕೀಯವಾಗಿ ಮುಗಿಸಲು ಹೊರಟಿರುವ ಎದುರಾಳಿಗಳ ಕುಟಿಲ ಕಾರಸ್ಥಾನವನ್ನು ಅರ್ಥಮಾಡಿಕೊಂಡು ನೈತಿಕವಾಗಿ ನನ್ನ ಬೆಂಬಲಕ್ಕೆ ನಿಂತಿರುವ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿಯವರು, ಕನಕ ಪೀಠ ಕಾಗಿನೆಲೆ. ಜಗದ್ಗುರು ಶ್ರೀ ಶಾಂತವೀರ ಮಹಾಸ್ವಾಮಿಗಳು, ಶ್ರೀ ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠ ಹೊಸದುರ್ಗ, ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮಿಗಳು, ಭೋವಿ ಗುರುಪೀಠ ಚಿತ್ರದುರ್ಗ, ಜಗದ್ಗುರು ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಮಹಾಸ್ವಾಮಿಗಳು, ಮಾದರ ಚನ್ನಯ ಗುರುಪೀಠ ಚಿತ್ರದುರ್ಗ, ಜಗದ್ಗುರು ಶ್ರೀ ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು, ಭಗೀರಥ ಪೀಠ ಮಧುರೆ, ಪರಮಪೂಜ್ಯ ಶ್ರೀ ಈಶ್ವರಾನಂದಪುರಿ ಮಹಾಸ್ವಾಮಿಗಳು, ಕನಕ ಗುರುಪೀಠ ಹೊಸದುರ್ಗ, ಶ್ರೀ ರೇಣುಕಾನಂದ ಸ್ವಾಮಿಗಳು, ನಾರಾಯಣ ಗುರುಪೀಠ ಶಿವಮೊಗ್ಗ, ಶ್ರೀ ಬಸವ ಮಾಚಿದೇವ ಮಹಾಸ್ವಾಮಿಗಳು, ಮಡಿವಾಳ ಗುರುಪೀಠ ಚಿತ್ರದುರ್ಗ, ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮಿಗಳು, ಹಡಪದ ಅಪ್ಪಣ್ಣ ಗುರುಪೀಠ ತಂಗಡಗಿ, ಶ್ರೀ ಶಾಂತಮ್ಮಯ್ಯ ಸ್ವಾಮೀಜಿಗಳು, ಸರೂರು ವಿಜಯನಗರ ಈ ಎಲ್ಲಾ ಪೂಜ್ಯ ಮಠಾಧೀಶರಿಗೆ ಧನ್ಯವಾದಗಳು ಎಂದಿದ್ದಾರೆ.

ಮೇಲ್ನೋಟಕ್ಕೆ ಇದು ರಾಜಕೀಯ ಸಂಘರ್ಷವೆನಿಸಿದರೂ ಆಂತರ್ಯದಲ್ಲಿ ಹಿಂದುಳಿದ ಜಾತಿಗೆ ಸೇರಿದ ನಾಯಕನೊಬ್ಬನ ಏಳಿಗೆ ಸಹಿಸದ ಪಟ್ಟಭದ್ರರು ಕುತಂತ್ರದಿಂದ ಹೆಣೆದ ಷಡ್ಯಂತ್ರ ಎಂಬುದು ಸೂರ್ಯ ಚಂದ್ರರಷ್ಟೇ ಸತ್ಯ. ಬುದ್ಧ, ಬಸವ, ಬಾಬಾ ಸಾಹೇಬ್, ಕನಕದಾಸರು, ನಾರಾಯಣ ಗುರುಗಳ ಆಶಯದಂತೆ ಸಮಸಮಾಜದ ಸ್ಥಾಪನೆಗಾಗಿ, ಶೋಷಿತ, ಅವಕಾಶ ವಂಚಿತ, ದೀನ ದಲಿತ, ಬಡಜನರ ಕಲ್ಯಾಣಕ್ಕಾಗಿ ದುಡಿಯುತ್ತಿರುವ ನಾನು ಪಟ್ಟಭದ್ರ ಹಿತಾಸಕ್ತಿಗಳಿಗೆ ಕಳೆದ 40 ವರ್ಷಗಳಿಂದ ಬಹುದೊಡ್ಡ ಸವಾಲಾಗಿದ್ದೇನೆ. ನನ್ನನ್ನು ಮೂಲೆಗೆ ಸರಿಸುವ ಮೂಲಕ ಸಮಾಜದ ಬಹುಸಂಖ್ಯಾತ ಜನರ ಧ್ವನಿಯನ್ನು ಅಡಗಿಸುವ ಪ್ರಯತ್ನ ಇಂದು ನಡೆಯುತ್ತಿದೆ ಎಂದಿದ್ದಾರೆ.

ಬಹಳಷ್ಟು ಮಂದಿ ಪೂಜ್ಯ ಸ್ವಾಮೀಜಿಗಳು ಇದನ್ನು ಅರಿತು ನನ್ನ ಬೆಂಬಲಕ್ಕೆ ನಿಂತು, ಇಡೀ ಸಮಾಜಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಸತ್ಯ ನನ್ನ ಜತೆ ಇದೆ, ನಾನು ಸತ್ಯದ ಜತೆ ನಾನಿದ್ದೇನೆ. "ಸತ್ಯಮೇವ ಜಯತೇ" ಎಂದು ಎಕ್ಸ್ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ : ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್​ಗೆ ಖಂಡನೆ: ಸಿಎಂಗೆ ನೈತಿಕ ಬೆಂಬಲ ಘೋಷಿಸಿದ ಸ್ವಾಮೀಜಿಗಳು - Swamijis Moral Support To CM

ETV Bharat Logo

Copyright © 2024 Ushodaya Enterprises Pvt. Ltd., All Rights Reserved.