ETV Bharat / state

'ಯಾವ ಪಾದಯಾತ್ರೆಗಳೂ ನನ್ನನ್ನು ಅಲುಗಾಡಿಸಲು ಸಾಧ್ಯವಿಲ್ಲ': ಜನಾಂದೋಲನ ಸಮಾವೇಶದಲ್ಲಿ ಘರ್ಜಿಸಿದ ಸಿಎಂ ಸಿದ್ದರಾಮಯ್ಯ - CM Siddaramaiah - CM SIDDARAMAIAH

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಇಂದು ನಡೆದ ಬೃಹತ್ ಜನಾಂದೋಲನ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ, ಜೆಡಿಎಸ್‌ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

CM SIDDARAMAIAH STATEMENT  MYSURU CHALO  MYSURU  CONGRESS PROGRAM
ಜನಾಂದೋಲನ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Aug 9, 2024, 4:44 PM IST

Updated : Aug 9, 2024, 6:38 PM IST

ಸಿಎಂ ಸಿದ್ದರಾಮಯ್ಯ ಭಾಷಣ (ETV Bharat)

ಮೈಸೂರು: ನಿಮ್ಮ ಆಶೀರ್ವಾದ ಇರುವವರೆಗೂ ನನ್ನನ್ನು ಯಾರೂ ಮುಟ್ಟಲು ಸಾಧ್ಯವಿಲ್ಲ. ನಾನು ಯಾರಿಗೂ ಜಗ್ಗುವುದಿಲ್ಲ, ಬಗ್ಗುವುದೂ ಇಲ್ಲ. ಮುಡಾದಲ್ಲಿ ಯಾವುದೇ ಹಗರಣ ನಡೆದಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಜನಾಂದೋಲನ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘರ್ಜಿಸಿದರು.

ದೇವರಾಜ ಅರಸು, ಬಂಗಾರಪ್ಪ ಅವರನ್ನೂ ಇವರು ಸಹಿಸಲಿಲ್ಲ. ಈಗ ನನ್ನನ್ನೂ ಸಹಿಸುತ್ತಿಲ್ಲ. ಜೆಡಿಎಸ್​ನ ದೇವೇಗೌಡರು ಮತ್ತು ಕುಮಾರಸ್ವಾಮಿ ಯಾವತ್ತೂ ಕೊಟ್ಟ ಮಾತಿನಂತೆ ನಡೆದುಕೊಳ್ಳುವವರಲ್ಲ. ಮೋದಿ ಮತ್ತೆ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ ಎಂದು ಹೇಳಿದ್ದ ದೇವೇಗೌಡರೇ ಈಗ ಬಿಜೆಪಿ ಜೊತೆ ಶಾಮೀಲಾಗಿದ್ದಾರೆ ಎಂದು ಟೀಕಿಸಿದರು.

CM Siddaramaiah statement  MYSURU CHALO  MYSURU  CONGRESS PROGRAM
ಜನಾಂದೋಲನ ಸಮಾವೇಶದಲ್ಲಿ ಕಾಂಗ್ರೆಸ್​ ನಾಯಕರು (ETV Bharat)

ನಿಮ್ಮ ನಂಬಿಕೆಗೆ ದ್ರೋಹ ಬಗೆಯಲ್ಲ: ನಾನು ರಾಜ್ಯದ ಜನರ ಆಶೀರ್ವಾದದಿಂದ ಎರಡು ಬಾರಿ ಉಪ ಮುಖ್ಯಮಂತ್ರಿ, ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನನಗೆ ಇಷ್ಟೆಲ್ಲಾ ಅಧಿಕಾರ ಸಿಕ್ಕಾಗಲೂ ಹಣ ಮಾಡುವ ಆಸೆ ಬಂದಿಲ್ಲ. ನನ್ನ ಪತ್ನಿ ಇವತ್ತಿನವರೆಗೂ ಸಾರ್ವಜನಿಕವಾಗಿ ಕಾಣಿಸಿಲ್ಲ. ಎರಡು ಬಾರಿ ಸಿಎಂ ಆದರೂ ಪ್ರಮಾಣ ವಚನಕ್ಕೂ ಬರಲಿಲ್ಲ. ನಾವು ಭ್ರಷ್ಟಾಚಾರ ಮಾಡಲು ಸಾಧ್ಯವಿಲ್ಲ. ನಿಮ್ಮ ನಂಬಿಕೆಗೆ ದ್ರೋಹ ಎಸಗಲು ಸಾಧ್ಯವಿಲ್ಲ. ನಾನು ರಾಜಕೀಯದಲ್ಲಿ ಇರುವವರೆಗೂ ಯಾವತ್ತೂ ನಿಮ್ಮ ನಂಬಿಕೆಗೆ ದ್ರೋಹ ಬಗೆಯಲ್ಲ ಎಂದು ಎಂದರು.

ಜನಾಂದೋಲನ ಸಮಾವೇಶದಲ್ಲಿ ನೆರೆತ ಜನಸ್ತೋಮ (ETV Bharat)

ನಾನು ಸೊನ್ನೆಯಿಂದ ರಾಜಕೀಯ ಪ್ರಾರಂಭಿಸಿದೆ. 1983ರಲ್ಲಿ ಮೊದಲ ಚುನಾವಣೆಗೆ ಡೆಪಾಸಿಟ್ ಮಾಡಲು ನನ್ನ ಬಳಿ ಹಣ ಇರಲಿಲ್ಲ. ನನ್ನ ಕಚೇರಿ ಕ್ಲರ್ಕ್ ಆನಂದ 250 ರೂ. ಡೆಪಾಸಿಟ್ ಕಟ್ಟಿದರು. ಜನರೇ ಹಣ ಕೊಟ್ಟು ಚುನಾವಣೆ ಗೆಲ್ಲಿಸಿದರು. ನನ್ನ ಒಂಬತ್ತು ಚುನಾವಣೆ ಗೆಲುವಲ್ಲೂ ಜನರೇ ಹಣ ಖರ್ಚು ಮಾಡಿದ್ದಾರೆ‌. ದಲಿತರು, ಶೋಷಿತರು, ಅಲ್ಪಸಂಖ್ಯಾತರ ಹಾಗೂ ಸಮಸ್ತ ಜನರ ಏಳಿಗೆಗಾಗಿ ಮಾತ್ರ ನನ್ನ ಅಧಿಕಾರ ಮುಡಿಪಾಗಿಟ್ಟಿದ್ದೇನೆ ಎಂದು ಹೇಳಿದರು.

ಯಾವ ಪಾದಯಾತ್ರೆಗಳೂ ನನ್ನನ್ನು ಅಲುಗಾಡಿಸಲು ಸಾಧ್ಯವಿಲ್ಲ: ಹಿಂದುಳಿದ ವರ್ಗಗಳಲ್ಲಿ ದೇವರಾಜ ಅರಸು ಬಿಟ್ಟರೆ ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಮುಗಿಸಿದ್ದು ನಾನು ಮಾತ್ರ. ಇದನ್ನು ಬಿಜೆಪಿ, ಜೆಡಿಎಸ್ ಸಹಿಸುತ್ತಿಲ್ಲ. ಆದರೆ ಎಲ್ಲಿಯವರೆಗೂ ಸೇನಾನಿಗಳಾದ ನಿಮ್ಮ ಆಶೀರ್ವಾದ ನನ್ನ ಮೇಲೆ ಇರುತ್ತದೋ ಅಲ್ಲಿಯವರೆಗೂ ನನ್ನನ್ನು ಯಾವ ಪಾದಯಾತ್ರೆಗಳೂ ಅಲುಗಾಡಿಸಲು ಸಾಧ್ಯವಿಲ್ಲ. ವಾಲ್ಮೀಕಿ ನಿಗಮದ ಪ್ರಕರಣದಲ್ಲೂ ಸರ್ಕಾರದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿ ಸೋತರು. ದಾಖಲೆಗಳು ಸ್ಪಷ್ಟವಾಗಿವೆ. ಸರ್ಕಾರಕ್ಕೂ ನಿಗಮದ ಹಗರಣಕ್ಕೂ ಸಂಬಂಧ ಇಲ್ಲ ಎನ್ನುವುದು ದಾಖಲೆಗಳಲ್ಲಿದೆ ಎಂದು ತಿಳಿಸಿದರು.

ವಾಲ್ಮೀಕಿ ನಿಗಮದ ಹಗರಣ ಹೊರಗೆ ಬಂದ ತಕ್ಷಣ ನಾವು SIT ರಚಿಸಿದ್ದೆವು. ತನಿಖೆ ನಡೆದು ಹಣ ವಾಪಸ್ ವಸೂಲಾಗಿದೆ. 50 ಕೋಟಿ ರೂಪಾಯಿಯನ್ನು SIT ರಿಕವರಿ ಮಾಡಿದೆ. 46 ಕೋಟಿ ಹಣ ಖಾಸಗಿ ಬ್ಯಾಂಕ್​ನಲ್ಲಿದ್ದು, ಫ್ರೀಜ್ ಮಾಡಿದ್ದಾರೆ. ಇಷ್ಟು ಪರಿಣಾಮಕಾರಿಯಾಗಿ SIT ಯವರು ತನಿಖೆ ನಡೆಸಿದ್ದಾರೆ. ಆದರೂ EDಯವರು ಸ್ವಯಂಸ್ಫೂರ್ತಿಯಿಂದ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆದರೂ ಸರ್ಕಾರದ ವಿರುದ್ಧ ಏನೂ ದಾಖಲೆ ಸಿಗಲಿಲ್ಲ. ಹೀಗಾಗಿ ಹಗರಣವೇ ಅಲ್ಲದ ಮೂಡಾ ಪ್ರಕರಣಕ್ಕೆ ಹಗರಣದ ಬಣ್ಣ ಕೊಟ್ಟರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜನಾಂದೋಲನ ಸಮಾವೇಶದಲ್ಲಿ ಜನಸ್ತೋಮ (ETV Bharat)

ಯಡಿಯೂರಪ್ಪ ಈ ವಯಸ್ಸಲ್ಲಿ ಲೈಂಗಿಕ ದೌರ್ಜನ್ಯ ನಡೆಸಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು. ಬಿಜೆಪಿ, ಜೆಡಿಎಸ್ ಅಧಿಕಾರಿದಲ್ಲಿದ್ದಾಗ ನಡೆಸಿದ್ದು ಒಂದಾ, ಎರಡಾ ಹಗರಣಗಳು. ಸುಪ್ರೀಂ ಕೋರ್ಟ್​ನಲ್ಲಿ ತಮ್ಮ ಹಗರಣಗಳಿಗೆ ತಡೆಯಾಜ್ಞೆ ತಂದಿದ್ದಾರೆ. ಇವರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ, ನಾಚಿಕೆ ಆಗಲ್ವಾ ಎಂದು ಗಂರ ಆದರು.

ಯಡಿಯೂರಪ್ಪ ಚೆಕ್​ನಲ್ಲಿ ಲಂಚ ಪಡೆದು ಜೈಲಿಗೆ ಹೋದರು. ಆರ್.ಅಶೋಕ್, ವಿಜಯೇಂದ್ರ ಇವರೆಲ್ಲರೂ ಜೈಲಿಗೆ ಹೋಗಬೇಕಾದವರು. ಇವರಿಗೆ ನನ್ನ ಬಗ್ಗೆ ಮಾತನಾಡುವ ಯಾವ ಯೋಗ್ಯತೆ ಇದೆ ಎಂದು ಪ್ರಶ್ನಿಸಿದರು.

ನನಗೆ ಮೈಸೂರಲ್ಲಿ ಸ್ವಂತ ಮನೆ ಇಲ್ಲ, ಈಗ ಕಟ್ಟಿಸುತ್ತಿದ್ದೇನೆ: 15 ಬಜೆಟ್ ಮಂಡಿಸಿದವ ನಾನು. ನನಗೆ ಹಣದ ಮೋಹ ಇದ್ದಿದ್ದರೆ ಕೋಟಿ ಕೋಟಿ ಗಳಿಸಬಹುದಿತ್ತು. ಇಷ್ಟು ದಿನವಾದರೂ ನನಗೆ ಮೈಸೂರಲ್ಲಿ ಮನೆ ಇಲ್ಲ. ಈಗ ಕಟ್ಟಿಸುತ್ತಿದ್ದೇನೆ. ಹಿಂದಿದ್ದ ಮನೆ ಸಾಲ ತಗೊಂಡು ಕಟ್ಟಿಸಿದ್ದೆ. ಸಾಲ ತೀರಿಸಲಾಗದೆ ಆ ಮನೆ ಮಾರಿಬಿಟ್ಟೆ. ಬಾಡಿಗೆ ಮನೆಯಲ್ಲಿ ಇದ್ದುಕೊಂಡೇ ವಿಧಾನಸಭೆ, ಲೋಕಸಭೆ ಚುನಾವಣೆ ಮಾಡಿದೆ. ಈಗ ಕಟ್ಟುತ್ತಿರುವ ಮನೆ ಬಿಟ್ಟು ನನ್ನ ಹೆಸರಲ್ಲಿ ಒಂದೇ ಒಂದು ಸೈಟು ಇದ್ದರೆ ತೋರಿಸಿ ಎಂದು ಸವಾಲು ಹಾಕಿದರು.

ಈಗ ರಾಜಭವನವನ್ನು ದುರುಪಯೋಗಪಡಿಸಿಕೊಂಡು ನನ್ನ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ. ಈ ಷಡ್ಯಂತ್ರದಲ್ಲಿ ಹೆಚ್.ಡಿ.ಕುಮಾರಸ್ವಾಮಿ, ಯಡಿಯೂರಪ್ಪ, ವಿಜಯೇಂದ್ರ, ಆರ್.ಅಶೋಕ್ ಸೇರಿದ್ದಾರೆ. ಕುಮಾರಸ್ವಾಮಿ ವಿರುದ್ಧ, ನಿರಾಣಿ ವಿರುದ್ಧ, ಶಶಿಕಲಾ ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೇಳಿದರೂ ರಾಜಭವನದಿಂದ ಇದುವರೆಗೂ ನೋಟಿಸ್ ಹೋಗಿಲ್ಲ. ಆದರೆ ನನಗೆ ಮಾತ್ರ ನೋಟಿಸ್ ಬಂದಿದೆ. ಇದು ಪರಮ ದ್ರೋಹ ಅಲ್ಲವೇ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: LIVE: ಮೈಸೂರು ಚಲೋಗೆ ಸೆಡ್ಡು: ಕಾಂಗ್ರೆಸ್​ ಜನಾಂದೋಲನ ಕಾರ್ಯಕ್ರಮ - Janandolana Program

Last Updated : Aug 9, 2024, 6:38 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.