ETV Bharat / state

ಅಶೋಕ್, ಅಶ್ವತ್ಥ ನಾರಾಯಣ, ಯತ್ನಾಳ್ ನೀವೂ ಶೂದ್ರರೇ: ಜಾತಿ ವ್ಯವಸ್ಥೆ ಬಗ್ಗೆ ಸದನದಲ್ಲಿ ಸಿಎಂ ಪಾಠ - CM SIDDARAMAIAH

ಜಾತಿ ವ್ಯವಸ್ಥೆಯಿಂದ ಲಾಭ ಪಡೆಯುತ್ತಿರುವ ಪಟ್ಟಭದ್ರರು ಜಾತಿ ವ್ಯವಸ್ಥೆಯ ಅಸಮಾನತೆಯನ್ನು ಪೋಷಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ದೂರಿದರು.

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Dec 9, 2024, 7:55 PM IST

ಬೆಳಗಾವಿ: "ಜಾತಿ ವ್ಯವಸ್ಥೆಯಿಂದ ಲಾಭ ಪಡೆಯುತ್ತಿರುವ ಪಟ್ಟಭದ್ರರು ಜಾತಿ ವ್ಯವಸ್ಥೆಯ ಅಸಮಾನತೆಯನ್ನು ಪೋಷಿಸುತ್ತಿದ್ದಾರೆ" ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸುವರ್ಣಸೌಧದಲ್ಲಿಂದು ಅನುಭವ ಮಂಟಪದ ತೈಲ ವರ್ಣಚಿತ್ರ ಅಳವಡಿಸಿರುವ ಸಂಬಂಧ ವಿಧಾನಸಭೆಯಲ್ಲಿ ನಡೆದ ಚರ್ಚೆಯ ವೇಳೆ ಮಾತನಾಡಿದ ಅವರು, "ಪರಮೇಶ್ವರ್, ಮುನಿಯಪ್ಪ, ಹೆಚ್.ಕೆ.ಪಾಟೀಲ್​ ಮತ್ತು ನನ್ನನ್ನೂ ಸೇರಿ ಎಲ್ಲರ ಯೋಗ್ಯತೆಯನ್ನು ಜಾತಿಯ ಆಧಾರದ ಮೇಲೆ ಅಳೆಯುತ್ತಿದ್ರು. ನಾವೆಲ್ಲರೂ ಶೂದ್ರರೇ. ಅಶೋಕ್, ಅಶ್ವತ್ಥ ನಾರಾಯಣ್, ಯತ್ನಾಳ್ ನೀವೂ ಶೂದ್ರರೇ" ಎಂದರು.

ಸಿಎಂ ಸಿದ್ದರಾಮಯ್ಯ (ETV Bharat)

"ಅನುಭವ ಮಂಟಪದ ತೈಲಚಿತ್ರದ ಅನಾವರಣ ನನ್ನ ಕೈಯಿಂದ ಆಗಿರುವುದು ನನ್ನ ಸೌಭಾಗ್ಯ. 12ನೇ ಶತಮಾನದಲ್ಲಿ ಅಸಮಾನತೆ, ಜಾತಿ ವ್ಯವಸ್ಥೆ, ಮನುಷ್ಯ ಶೋಷಣೆಯ ವ್ಯವಸ್ಥೆ ಹೋಗಲಾಡಿಸಿ ಜಾತಿ ರಹಿತ ಸಮ ಸಮಾಜ ತರಬೇಕು ಎನ್ನುವ ಉದ್ದೇಶದಿಂದ ಬಸವಾದಿ ಶರಣರು ಸಾಮಾಜಿಕ ಕ್ರಾಂತಿಯನ್ನು ಮಾಡಿದರು. ಮೇಲು-ಕೀಳು , ಮನುಷ್ಯ ತಾರತಮ್ಯ ಇರುವುದು ಧರ್ಮ ಆಗಲು ಸಾಧ್ಯವಿಲ್ಲ. ದಯೆಯೇ ಧರ್ಮದ ಮೂಲ ಎಂದು ಅವಿದ್ಯಾವಂತರಿಗೂ ಅರ್ಥ ಆಗುವಂತೆ ಧರ್ಮವನ್ನು ಬೋಧಿಸಿದರು" ಎಂದು ಹೇಳಿದರು.

"ಮದುವೆ ಕೂಡ ಜಾತಿ ಆಧಾರದಲ್ಲಿ ಏರ್ಪಡಿಸಲಾಗುತ್ತಿತ್ತು.‌ ವ್ಯಕ್ತಿಯ ಯೋಗ್ಯತೆಯನ್ನು ಜಾತಿ, ವರ್ಣ ವ್ಯವಸ್ಥೆ ಆಧಾರದ ಮೇಲೆ ನಿರ್ಧಾರ ಆಗುತ್ತಿತ್ತು.‌ ಪ್ರತಿಭೆ ಕೂಡ ಯೋಗ್ಯತೆ ಆಧಾರದ ಮೇಲೆ ನಿರ್ಧಾರ ಆಗದೆ ಜಾತಿ ಆಧಾರದಲ್ಲಿ ನಿರ್ಧರಿಸಲಾಗುತ್ತಿತ್ತು. ಹುಟ್ಟುವಾಗ ಎಲ್ಲರೂ ವಿಶ್ವ ಮಾನವರೇ ಎಂದು ಕುವೆಂಪು ಹೇಳಿದರೆ, ಕುಲ ಕುಲವೆಂದು ಬಡಿದಾಡದಿರಿ ಎಂದು ಕನಕದಾಸರು ಹೇಳಿದ್ದಾರೆ" ಎಂದು ತಿಳಿಸಿದರು.

"ಇವತ್ತಿನ ವಿಧಾನಸಭೆ, ಇವತ್ತಿನ ಪಾರ್ಲಿಮೆಂಟ್​ ಅವತ್ತಿನ ಅನುಭವ ಮಂಟಪ. ಅತ್ಯಂತ ಕೆಳ ಸಮುದಾಯದ ಅಲ್ಲಮ ಪ್ರಭು ಅವರು ಅದರ ಅಧ್ಯಕ್ಷರಾಗಿದ್ದರು. ಎಲ್ಲಾ ಜಾತಿಯ ಪ್ರತಿನಿಧಿಗಳು, ಮಹಿಳಾ ಪ್ರತಿನಿಧಿ ಶರಣ ಶರಣೆಯರೂ ಅನುಭವ ಮಂಟಪದ ಸದಸ್ಯರಾಗಿದ್ದರು. ಬುದ್ದನ ಕಾಲದಲ್ಲೂ ಈ ರೀತಿಯ ಸರ್ವ ಜಾತಿ , ಸರ್ವ ಧರ್ಮದ ಪ್ರತಿನಿಧಿಗಳನ್ನು ಒಳಗೊಂಡ ಮಂಟಪಗಳಿದ್ದವು ಎಂದು ಚರಿತ್ರೆಯಲ್ಲಿ ಓದಿದ್ದೇವೆ" ಎಂದರು.

"ಹೀಗಾಗಿ ಅಂಬೇಡ್ಕರ್ ಅವರ ಮಾತಿನ್ನು ನಾವು ಸ್ಮರಿಸಿಕೊಳ್ಳಬೇಕು ಎನ್ನುತ್ತಾ, ಇತಿಹಾಸ ತಿಳಿಯದವರು ಇತಿಹಾಸ ಸೃಷ್ಟಿಸಲಾರರು ಎನ್ನುವ ಮಾತನ್ನು ಉಲ್ಲೇಖಿಸಿದರು. ಶೂದ್ರರು ಮತ್ತು ಮಹಿಳೆಯರಿಗೆ ಶಿಕ್ಷಣವನ್ನು ನಿಷೇಧಿಸಲಾಗಿತ್ತು. ಈ ನಿಷೇಧ ಬಸವಾದಿ ಶರಣರ ಕಾಲದಲ್ಲಿ ಇರಲಿಲ್ಲ. ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ನಮ್ಮ ಸಮಾಜ ಚಲನೆ ರಹಿತವಾಗಿದೆ" ಎಂದು ಲೋಹಿಯಾ ಮಾತನ್ನು ಉಲ್ಲೇಖಿಸಿದರು.

"ಆರ್ಥಿಕ ಮತ್ತು ಸಾಮಾಜಿಕ ಚಲನೆ ಸಿಕ್ಕಾಗ ಮಾತ್ರ ಸಮಾಜದ ಚಲನೆ ಸಾಧ್ಯ. ಜಾತಿ ವ್ಯವಸ್ಥೆ ಬಾವಿಯೊಳಗಿನ‌ಕಸದಂತೆ. ನೀರು ಸೇದಲು ಕೊಡ ಬಾವಿಗಿಳಿಸಿ ಕೆದಕಿದಾಗ ಕಸ ಪಕ್ಕಕ್ಕೆ ಸರಿಯುತ್ತದೆ. ನೀರು ಸೇದಿದ ಬಳಿಕ ಮತ್ತೆ ಕಸ ಆವರಿಸಿಕೊಳ್ಳುತ್ತದೆ. ಇದೇ ಜಾತಿ ವ್ಯವಸ್ಥೆ. 850 ವರ್ಷಗಳ ಹಿಂದೆಯೇ ಬಸವಾದಿ ಶರಣರು ಜಾತಿ ಮೀರಿದ ಸಾಮಾಜಿಕ ವ್ಯವಸ್ಥೆ ರೂಪಿಸಲು ಶ್ರಮಿಸಿದ್ದರು" ಎಂದರು.

ಇದನ್ನೂ ಓದಿ: ಪಂಚಮಸಾಲಿ ಮೀಸಲಾತಿ ಬಗ್ಗೆ ಸರ್ಕಾರದ ಸ್ಪಷ್ಟ ನಿಲುವು ನಾಳೆ ತಿಳಿಸುವೆ: ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.