ETV Bharat / state

ಸಂವಿಧಾನ ಉಳಿದರೆ ನಾವು - ನೀವು ಉಳಿಯುತ್ತೇವೆ: ಸಿಎಂ ಸಿದ್ದರಾಮಯ್ಯ - Constitution

ಸಂವಿಧಾನದ ಬಗ್ಗೆ ಧ್ರುವನಾರಾಯಣ ಅವರು ಅಪಾರವಾದ ನಂಬಿಕೆ, ಗೌರವ ಹೊಂದಿದ್ದರು ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

cm-siddaramaiah
ಸಿಎಂ ಸಿದ್ದರಾಮಯ್ಯ
author img

By ETV Bharat Karnataka Team

Published : Mar 12, 2024, 5:20 PM IST

ಚಾಮರಾಜನಗರ : ಆರ್ ಧ್ರುವನಾರಾಯಣ ಅವರು ಮಾದರಿ ಜನ ನಾಯಕರಾಗಿದ್ದರು. ಕಾಲಾನಂತರವೂ ಅವರ ಜನಪ್ರಿಯತೆ ಬೆಳೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು. ಚಾಮರಾಜನಗರ ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ಆಯೋಜಿಸಿದ್ದ ದಿ‌. ಧ್ರುವನಾರಾಯಣ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕ್ಷೇತ್ರದ ಅಭಿವೃದ್ಧಿ ಮತ್ತು ಚಾಮರಾಜನಗರ ಜಿಲ್ಲೆಯ ಪ್ರಗತಿಗೆ ನಿರಂತರ ಪ್ರಯತ್ನ ಮಾಡಿದ್ದ ಧ್ರುವನಾರಾಯಣ ಅವರು ಜನರ ಮಧ್ಯೆ ಓಡಾಡದ ದಿನವೇ ಇಲ್ಲ. ಇವರದ್ದು, ಜನಪರ ರಾಜಕಾರಣಕ್ಕೆ ಮಾದರಿ ವ್ಯಕ್ತಿತ್ವ ಎಂದರು.

ದಿ‌. ಧ್ರುವನಾರಾಯಣ ಪುಣ್ಯಸ್ಮರಣೆ ಕಾರ್ಯಕ್ರಮ
ದಿ‌. ಧ್ರುವನಾರಾಯಣ ಪುಣ್ಯಸ್ಮರಣೆ ಕಾರ್ಯಕ್ರಮ

ಕಾಂಗ್ರೆಸ್ ಸಿದ್ಧಾಂತ ಮತ್ತು ಕಾಂಗ್ರೆಸ್ ಪಕ್ಷದ ಆಸ್ತಿಯಾಗಿದ್ದ ಧ್ರುವನಾರಾಯಣ ಅವರು ವಿದ್ಯಾರ್ಥಿ ಅವಧಿಯಿಂದ ಕಾಂಗ್ರೆಸ್​ ಪಕ್ಷದ ಕಾರ್ಯಾಧ್ಯಕ್ಷರಾಗುವವರೆಗೂ ಬೆಳೆದರು. ಶಾಸಕರಾಗಿ, ಸಂಸದರಾಗಿ ಕ್ಷೇತ್ರದ ಅಭಿವೃದ್ಧಿಗೆ ನಿರಂತರ ಶ್ರಮಿಸಿದವರು. ಹೀಗಾಗಿ ಇವರ ಅಗಲಿಕೆ ಕೇವಲ ಕಾಂಗ್ರೆಸ್ ಪಕ್ಷಕ್ಕೆ ಮಾತ್ರವಲ್ಲ, ಕನ್ನಡ ನಾಡಿಗೆ ತುಂಬಲಾರದ ನಷ್ಟ ಆಗಿದೆ ಎಂದರು.

ಧ್ರುವನಾರಾಯಣ ಅವರು ಅಜಾತಶತ್ರುವಾಗಿದ್ದರು. ಅವರ ವ್ಯಕ್ತಿತ್ವವನ್ನೇ ಅವರ ಪುತ್ರ ಶಾಸಕ ದರ್ಶನ್ ಧ್ರುವನಾರಾಯಣ ಅವರೂ ಹೊಂದಿದ್ದು, ಜನಪರತೆ ಬೆಳೆಸಿಕೊಂಡಿದ್ದಾರೆ. ಇವರಿಗೆ ನಾನು ಸಂಪೂರ್ಣ, ಸಹಕಾರ, ಬೆಂಬಲ ನೀಡುತ್ತೇನೆ. ಅವರು ಅವರ ತಂದೆ ಸ್ಥಾನ ತುಂಬಲಿದ್ದಾರೆ ಎಂದರು.

ದಿ‌. ಧ್ರುವನಾರಾಯಣ ಪುಣ್ಯಸ್ಮರಣೆ ಕಾರ್ಯಕ್ರಮ
ದಿ‌. ಧ್ರುವನಾರಾಯಣ ಪುಣ್ಯಸ್ಮರಣೆ ಕಾರ್ಯಕ್ರಮ

ರಾಜಕಾರಣಿಗೆ ಸೈದ್ಧಾಂತಿಕ ಸ್ಪಷ್ಟತೆ ಮತ್ತು ಬದ್ಧತೆ ಅತ್ಯಗತ್ಯ. ಧ್ರುವನಾರಾಯಣ ಅವರಿಗೆ ಇವೆರಡೂ ಇತ್ತು. ಸಮಾಜದ ಅಸಮಾನತೆ ಅಳಿಸಲು, ದುರ್ಬಲರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕೆಲಸವನ್ನು ಅವರು ಮಾಡುತ್ತಿದ್ದರು.

cm-siddaramaiah
ದಿ‌. ಧ್ರುವನಾರಾಯಣ ಪುಣ್ಯಸ್ಮರಣೆ ಕಾರ್ಯಕ್ರಮ

ಅಂಬೇಡ್ಕರ್ ಅವರ ಸಂವಿಧಾನದ ಬಗ್ಗೆ ಧ್ರುವನಾರಾಯಣ ಅವರು ಅಪಾರವಾದ ನಂಬಿಕೆ, ಗೌರವ ಹೊಂದಿದ್ದರು. ಈಗ ಈ ಸಂವಿಧಾನ ಬದಲಾಯಿಸುವ ಪ್ರಯತ್ನಗಳು ನಡೆಯುತ್ತಿವೆ. ಸಂವಿಧಾನ ಉಳಿದರೆ ಮಾತ್ರ ನಾವೂ ನೀವೂ ಉಳಿಯುತ್ತೇವೆ ಎಂದು ಎಚ್ಚರಿಸಿದರು. ಸಮಾಜ ಕಲ್ಯಾಣ ಸಚಿವ ಹೆಚ್ ಸಿ ಮಹದೇವಪ್ಪ, ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್, ಶಾಸಕ ದರ್ಶನ್ ಧ್ರುವನಾರಾಯಣ ಕೂಡಾ ಇದ್ದರು.

ಇದನ್ನೂ ಓದಿ: ಮನು ಸ್ಮೃತಿಗೆ ಅನುಗುಣವಾಗಿ ಸಂವಿಧಾನ ಇರಬೇಕು ಎಂಬುದು ಬಿಜೆಪಿಯ ಒಳಸಂಚು: ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.