ETV Bharat / state

ವಿದ್ಯಾರ್ಥಿಯಾಗಿದ್ದಾಗ ಸಿಗರೇಟ್ ಸೇದುತ್ತಿದ್ದೆ, ಎಂಎಲ್​ಎ ಆದ್ಮೇಲೆ ಬಿಟ್ಟೆ: ಸಿಎಂ ಸಿದ್ದರಾಮಯ್ಯ

ವಿದ್ಯಾರ್ಥಿಯಾಗಿದ್ದಾಗ ಸಿಗರೇಟ್​ ಸೇದುತ್ತಿದ್ದ ವಿಚಾರವನ್ನು ಸಿಎಂ ಸಿದ್ದರಾಮಯ್ಯ ಇಂದು ನಡೆದ ತಂಬಾಕು ಮುಕ್ತ ಯುವ ಅಭಿಯಾನ ಕಾರ್ಯಕ್ರಮದಲ್ಲಿ ನೆನಪಿಸಿಕೊಂಡರು. ಇದೇ ವೇಳೆ, ಯುವಜನತೆ ಇಂಥ ದುಶ್ಚಟಗಳಿಂದ ದೂರವಿರುವಂತೆ ಕರೆ ನೀಡಿದರು.

cm-siddaramaiah
ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Oct 15, 2024, 3:28 PM IST

ಬೆಂಗಳೂರು: ನಾನೂ ಸಹ‌ ವಿದ್ಯಾರ್ಥಿಯಾಗಿದ್ದಾಗ ಸಿಗರೇಟ್ ಸೇದುತ್ತಿದ್ದೆ. ಎಂಎಲ್​ಎ ಆದ ಮೇಲೆ ಬಿಟ್ಟುಬಿಟ್ಟೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯ ಎನ್‌ಎಸ್‌ ಕೋಶ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಭಾಗಿತ್ವದಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಇಂದು ಆಯೋಜಿಸಲಾಗಿದ್ದ 'ತಂಬಾಕು ಮುಕ್ತ ಯುವ ಅಭಿಯಾನ 2.0' ಬೃಹತ್ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಲಾಯರ್ ಆಗಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ದಿನಕ್ಕೆ 4 ಪ್ಯಾಕೆಟ್ ಸಿಗರೇಟ್ ಸೇದುತ್ತಿದ್ದೆ. ಒಂದು ಪ್ಯಾಕೆಟ್‌ನಲ್ಲಿ 10 ಅಂದುಕೊಂಡರೂ ದಿನಕ್ಕೆ 40 ಸಿಗರೇಟ್ ಸೇದುತ್ತಿದ್ದೆ ಎಂದರು.

ಮಾದಕವಸ್ತುಗಳ ನಿಯಂತ್ರಣಕ್ಕೆ ಕಾನೂನುಗಳಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಲು ಸರ್ಕಾರ ಯೋಚಿಸುತ್ತಿದೆ. ಯುವಜನತೆ ಈ ದುಶ್ಚಟಕ್ಕೆ ಬಲಿಯಾಗದಂತೆ, ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ ಸರ್ಕಾರದ ಗುರಿ. ಯುವಕ, ಯುವತಿಯರು, ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಬಾರದು. ಯಾರಾದ್ರೂ ಈಗ ಸಿಗರೇಟು ಸೇವನೆ ಮಾಡುತ್ತಿದ್ದರೆ ಇದರಿಂದ ದೂರವಿರಬೇಕು. ತಂಬಾಕು ಬಳಕೆ ಮಾಡುವುದಿಲ್ಲ, ಮಾಡಲೂ ಬಿಡುವುದಿಲ್ಲ ಎಂದು ವಿದ್ಯಾರ್ಥಿಗಳು ಇಂದು ಪ್ರತಿಜ್ಞೆ ಕೈಗೊಂಡಿದ್ದಾರೆ. ಈ ಪ್ರತಿಜ್ಞೆಯನ್ನು ಅಕ್ಷರಶಃ ಪಾಲಿಸಬೇಕು ಎಂದು ಕಿವಿಮಾತು ಹೇಳಿದರು.

ತಂಬಾಕು ಸೇವಿಸುವ ಶೇ.50ರಷ್ಟು ಜನರಿಗೆ ಕ್ಯಾನ್ಸರ್: WHO ಸಂಸ್ಥೆಯ ವರದಿಯಂತೆ, ಭಾರತದಲ್ಲಿ ಪ್ರತಿ ವರ್ಷ 13.5 ಲಕ್ಷ ಜನರು ತಂಬಾಕು ಸೇವನೆಯಿಂದ ಸಾವಿಗೀಡಾಗುತ್ತಿದ್ದಾರೆ. ಇದು ಆತಂಕಕಾರಿ ವಿಷಯ. ಯುವಜನತೆ ತಮ್ಮ ಭವಿಷ್ಯ ರೂಪಿಸಿಕೊಳ್ಳುವ ಬದಲು ಈ ದುಶ್ಚಟಗಳಿಗೆ ಬಲಿಯಾಗುತ್ತಿರುವುದರಿಂದ ಈ ಪ್ರಮಾಣದ ಸಾವು ಸಂಭವಿಸುತ್ತಿದೆ. ತಂಬಾಕು ಸೇವಿಸುತ್ತಿರುವವರಲ್ಲಿ ಶೇ.50ರಷ್ಟು ಜನ ಕ್ಯಾನ್ಸರ್​ನಂತಹ ಮಾರಕ ಕಾಯಿಲೆಗೆ ತುತ್ತಾಗುತ್ತಿದ್ದಾರೆ ಎಂದು ತಿಳಿಸಿದರು.

ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ, ಧಾರವಾಡಗಳಲ್ಲಿ ಡ್ರಗ್ಸ್ ಹಾವಳಿ ಹೆಚ್ಚಿದ್ದು, ಇದನ್ನು ನಿಗ್ರಹಿಸಲು ಸರ್ಕಾರ ಅನೇಕ ಕಾನೂನುಗಳನ್ನು ರಚಿಸಿದೆ ಎಂದು ಹೇಳಿದರು.

ಇದನ್ನೂ ಓದಿ: ಸಹವಾಸ ದೋಷದಿಂದ ಸಿಗರೇಟ್​ ಚಟ ಕಲಿತಿದ್ದೆ: ಸಿದ್ದರಾಮಯ್ಯ - CM Siddaramaiah

ETV Bharat Logo

Copyright © 2024 Ushodaya Enterprises Pvt. Ltd., All Rights Reserved.