ETV Bharat / state

ಸಂವಿಧಾನದ ಆಶಯಕ್ಕೆ ಅನುಗುಣವಾಗಿ ಪಂಚಮಸಾಲಿಗರಿಗೆ ಮೀಸಲಾತಿ: ಸಿಎಂ ಭರವಸೆ - CM SIDDARAMAIAH

ಸಂವಿಧಾನದ ಆಶಯಕ್ಕೆ ಅನುಗುಣವಾಗಿ ಪಂಚಮಸಾಲಿಗರಿಗೆ ಮೀಸಲಾತಿ ಕಲ್ಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

cm-siddaramaiah
ಪಂಚಮಸಾಲಿ ಸಮುದಾಯದ ಮುಖಂಡರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ (ETV Bharat)
author img

By ETV Bharat Karnataka Team

Published : Oct 18, 2024, 3:16 PM IST

ಬೆಂಗಳೂರು: ಪ್ರವರ್ಗ-2ಎ ಅಡಿ ಮೀಸಲಾತಿ ಒದಗಿಸುವಂತೆ ಪಂಚಮಸಾಲಿ ಲಿಂಗಾಯತ ಸಮುದಾಯದ ಬೇಡಿಕೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಕಾನೂನು ಪ್ರಕಾರ, ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಗೃಹ ಕಚೇರಿ ಕೃಷ್ಣಾದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತಾಗಿ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದ ನಿಯೋಗದೊಂದಿಗೆ ಸಭೆ ನಡೆಸಿದರು.

ಈ ವೇಳೆ ಸಿಎಂ, ಸರ್ಕಾರ ಮೀಸಲಾತಿ ವಿಷಯದಲ್ಲಿ ಮುಕ್ತ ಮನಸ್ಸು ಹೊಂದಿದೆ. ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದೆ. ಎಲ್ಲ ದುರ್ಬಲ ವರ್ಗದವರಿಗೂ ನ್ಯಾಯ ದೊರೆಯಬೇಕು ಎಂಬುದು ಸರ್ಕಾರದ ನಿಲುವು. ಶಾಶ್ವತವಾದ ಹಿಂದುಳಿದ ವರ್ಗಗಳ ಆಯೋಗವಿದೆ. ಅದರ ಅಂತಿಮ ಶಿಫಾರಸು ಇನ್ನೂ ನಮ್ಮ ಕೈಗೆ ತಲುಪಿಲ್ಲ. ಚುನಾವಣೆ ನೀತಿ ಸಂಹಿತೆ ಇರುವುದರಿಂದ ಮೀಸಲಾತಿ ಕುರಿತಾಗಿ ಅಡ್ವೊಕೇಟ್‌ ಜನರಲ್‌, ಕಾನೂನು ಇಲಾಖೆ, ತಜ್ಞರೊಂದಿಗೆ, ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಈಗಲೇ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ ಎಂದರು.

ಮೀಸಲಾತಿ ಕುರಿತು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮುಂದೆ ಪ್ರಸ್ತಾವನೆ ಸಲ್ಲಿಸಬೇಕು, ಅದರ ಶಿಫಾರಸು ಅನ್ವಯ ಕ್ರಮ ಕೈಗೊಳ್ಳಬೇಕು ಎಂದು ಈ ಹಿಂದೆ ಪಂಚಮಸಾಲಿ ಸಮುದಾಯದ ಮುಖಂಡರು ಭೇಟಿಯಾದಾಗ ನಾನು ಸಲಹೆ ನೀಡಿದ್ದೆ. ಯಾವುದೇ ತೀರ್ಮಾನ ನ್ಯಾಯಯುತವಾಗಿ ಎಲ್ಲರಿಗೂ ಒಪ್ಪಿತವಾಗುವಂತೆ, ನ್ಯಾಯಾಲಯಕ್ಕೂ ಒಪ್ಪಿಗೆಯಾಗುವಂತಿರಬೇಕು ಎಂದು ಹೇಳಿದರು.

ಹಿಂದಿನ ಸರ್ಕಾರ ನಿಮ್ಮ ಮನವಿ ಮೇರೆಗೆ 2ಸಿ ಮತ್ತು 2ಡಿ ಹೊಸ ಪ್ರವರ್ಗ ಮಾಡಿತ್ತು. 3ಎನಲ್ಲಿರುವ ಒಕ್ಕಲಿಗರನ್ನು 2ಸಿ ಗೆ ಸೇರಿಸುವುದು, 3ಬಿಯಲ್ಲಿರುವ ಲಿಂಗಾಯತರನ್ನು 2ಡಿಗೆ ಸೇರಿಸುವ ಪ್ರಸ್ತಾಪ ಮುಂದಿರಿಸಿತು. ಮುಸ್ಲಿಮರ ಮೀಸಲಾತಿಯನ್ನು ತೆಗೆದು ಹಾಕಿತ್ತು. ಮುಸ್ಲಿಮರು ಇದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದಾಗ, ಯಥಾಸ್ಥಿತಿ ಮುಂದುವರೆಸಲು ರಾಜ್ಯ ಸರ್ಕಾರ ಒಪ್ಪಿಕೊಂಡಿತ್ತು. ಆದ್ದರಿಂದ ಈ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ ಎಂದು ತಿಳಿಸಿದರು.

ಈಗ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. ಆದರೆ ಪೂರ್ವನಿಗದಿಯಂತೆ ಸಮುದಾಯದ ಮುಖಂಡರೊಂದಿಗೆ ಇಂದು ಸಭೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು. ಪಂಚಮಸಾಲಿ ಸಮುದಾಯ ಪ್ರಸ್ತುತ ಪ್ರವರ್ಗ-3ಬಿಯಲ್ಲಿದೆ. ಈ ಪ್ರವರ್ಗದಡಿ ಲಿಂಗಾಯತ ಹಾಗೂ ಅದರ ಉಪಜಾತಿಗಳೇ ಮೀಸಲಾತಿ ಸೌಲಭ್ಯ ಪಡೆಯುತ್ತಿವೆ. ಹಾಗಾಗಿ 2ಎ ಪ್ರವರ್ಗದಡಿ ಪಂಚಮಸಾಲಿಗರನ್ನು ಸೇರಿಸಬೇಕೆಂದು ನಿಯೋಗ ಒತ್ತಾಯಿಸಿದೆ. ಸೂಕ್ತ ಮೀಸಲಾತಿ ಇಲ್ಲದ ಕಾರಣ ಸಮುದಾಯದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಕೃಷಿ ಕಾರ್ಮಿಕರು ಹೆಚ್ಚಾಗಿರುವ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎ ಸೇರಿಸಿ ಸಾಮಾಜಿಕ ನ್ಯಾಯ ಒದಗಿಸಲು ನಿಯೋಗ ಮನವಿ ಮಾಡಿತು ಎಂದು ತಿಳಿಸಿದರು.

ಪಂಚಮಸಾಲಿಗಳಿಗೆ ಮೀಸಲಾತಿ ನೀಡುವ ಸಂಬಂಧ ವರದಿ ಸಲ್ಲಿಸಲು ಜಯಪ್ರಕಾಶ್‌ ಹೆಗಡೆ ಅಧ್ಯಕ್ಷತೆಯ ಹಿಂದುಳಿದ ವರ್ಗಗಳ ಆಯೋಗ ಅಧ್ಯಯನ ನಡೆಸಿ, ಮಧ್ಯಂತರ ವರದಿಯನ್ನು ಸಲ್ಲಿಸಿದ್ದರೂ, ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮಧ್ಯಂತರ ವರದಿ ಆಧಾರದ ಮೇಲೆ ನಿರ್ಧಾರ ಕೈಗೊಳ್ಳಲು ಮನವಿ ಮಾಡಿತು ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌, ಶಿವರಾಜ ತಂಗಡಗಿ, ಶಾಸಕರುಗಳಾದ ವಿನಯ್ ಕುಲಕರ್ಣಿ, ವಿಜಯ್ ಕಾಶಪ್ಪನವರ್, ಬಸನಗೌಡ ಯತ್ನಾಳ್, ಈರಣ್ಣ ಕಡಾಡಿ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು, ಸಮುದಾಯದ 40ಕ್ಕೂ ಹೆಚ್ಚು ಮುಖಂಡರು, ವಕೀಲರು ಮತ್ತು ಪ್ರಮುಖರು ಉಪಸ್ಥಿತರಿದ್ದರು.

ಇದನ್ನೂ ಓದಿ: ಮೀಸಲಾತಿ: ಅ.18ರಂದು ಸಿಎಂ ಸಭೆ ಮಾಡದಿದ್ದರೆ ವಿಧಾನಸೌಧದ ಮುಂದೆ ಪ್ರತಿಭಟನೆ- ಬಸವಜಯ ಮೃತ್ಯುಂಜಯ ಸ್ವಾಮೀಜಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.