ETV Bharat / state

ನಾನು ಸ್ಟೆಂಟ್ ಹಾಕಿಸಿಕೊಂಡು 24 ವರ್ಷವಾಯ್ತು, ಅರಾಮಾಗಿ ಕೆಲಸ, ಕಾರ್ಯಗಳಲ್ಲಿ ಭಾಗವಹಿಸುತ್ತಿದ್ದೇನೆ: ಸಿಎಂ - GRUHA AROGYA SCHEME

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ "ಗೃಹ ಆರೋಗ್ಯ: ಆರೋಗ್ಯ ಸೇವೆ ಮನೆ ಬಾಗಿಲಿಗೆ" ಎಂಬ ಮಹತ್ವದ ಜನಾರೋಗ್ಯ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.

siddaramaiah
ಸಿಎಂ ಸಿದ್ದರಾಮಯ್ಯ (CM X Post)
author img

By ETV Bharat Karnataka Team

Published : Oct 24, 2024, 8:15 PM IST

ಬೆಂಗಳೂರು: ''ನಾನು ಸ್ಟೆಂಟ್ ಹಾಕಿಸಿಕೊಂಡು 24 ವರ್ಷ ಆಯ್ತು. ಪಕ್ಷದ ಕೆಲಸ, ಸರ್ಕಾರದ ಕೆಲಸ ಹಾಗೂ ವ್ಯಾಯಾಮವನ್ನೂ ಮಾಡುತ್ತಿದ್ದೇನೆ. ಎಲ್ಲಾ ಕೆಲಸ, ಕಾರ್ಯಗಳಲ್ಲೂ ಅರಾಮಾಗಿ ಭಾಗವಹಿಸುತ್ತಿದ್ದೇನೆ. ಆದರೆ, ವೈದ್ಯರು ಹೇಳಿದಂತೆ ಕೇಳುತ್ತೇನೆ. ಹೀಗಾಗಿ, ಎಲ್ಲವನ್ನೂ ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದೇನೆ'' ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬ್ಯಾಂಕ್ವೆಟ್ ಹಾಲ್​ನಲ್ಲಿ ಗುರುವಾರ ಮಧ್ಯಾಹ್ನ ಆಯೋಜಿಸಿದ್ದ "ಗೃಹ ಆರೋಗ್ಯ: ಆರೋಗ್ಯ ಸೇವೆ ಮನೆ ಬಾಗಿಲಿಗೆ" ಎಂಬ ನೂತನ‌ ಮಹತ್ವದ ಜನಾರೋಗ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಿಎಂ ಸಿದ್ದರಾಮಯ್ಯ (ETV Bharat)

''ನಾನು 30 ವರ್ಷಗಳಿಂದ ಸಕ್ಕರೆ ಕಾಯಿಲೆಯನ್ನು ನಿರ್ವಹಿಸುತ್ತಿದ್ದೇನೆ. ವ್ಯಾಯಾಮ, ಶಿಸ್ತಿನ ಜೀವನ ಶೈಲಿಯಿಂದ ಡಯಾಬಿಟಿಸ್ ನಿಯಂತ್ರಿಸಬಹುದು. ಕೋವಿಡ್ ಬಳಿಕ ನಾನು ಔಷಧ ತೆಗೆದುಕೊಳ್ಳುತ್ತೇನೆ. ಬಳಿಕ ವೈದ್ಯರು ಇನ್ಸುಲಿನ್ ತೆಗೆದುಕೊಳ್ಳಲು ಸಲಹೆ ನೀಡಿದರು. ಹೀಗಾಗಿ, ನಾನು ಈಗ ದಿನಕ್ಕೆ ಎರಡು ಬಾರಿ ಇನ್ಸುಲಿನ್ ತೆಗೆದುಕೊಳ್ಳುತ್ತಿದ್ದೇನೆ'' ಎಂದರು.

''ಸುಮಾರು ಜನರು ಈ ವಿಚಾರವನ್ನು ಗೌಪ್ಯವಾಗಿ ಇಡುತ್ತಾರೆ. ಕಾಯಿಲೆ, ಆರೋಗ್ಯ ಸಮಸ್ಯೆಗಳನ್ನು ಗುಟ್ಟಾಗಿಟ್ಟು ಅನಾಹುತ ತಂದುಕೊಳ್ಳಬಾರದು. ಆಸ್ಪತ್ರೆಗೆ ಹೋಗಲು ಸಾಧ್ಯವಾಗದ ಬಡವರಿಗೂ ತಪಾಸಣೆ ಮತ್ತು ಚಿಕಿತ್ಸೆ ಒದಗಿಸಲು ಸಾಧ್ಯವಾಗಲಿ ಎನ್ನುವ ಕಾರಣದಿಂದಲೇ ಮನೆಬಾಗಿಲಿಗೆ ಆರೋಗ್ಯ ಕಾರ್ಯಕ್ರಮ ಆರಂಭಿಸಿದ್ದೇವೆ'' ಎಂದು ತಿಳಿಸಿದರು.

ಉಚಿತ ಚಿಕಿತ್ಸೆ ಕಾರ್ಯಕ್ರಮ: ''ಬಹಳ ಜನರಿಗೆ ವೈದ್ಯರಿಗೆ ತಪಾಸಣೆ ವೆಚ್ಚ ಕೊಡುವುದಕ್ಕೂ ಸಾಧ್ಯವಾಗುವುದಿಲ್ಲ. ಆದರೆ ಇಂಥವರಿಗೂ ಆರೋಗ್ಯದ ಹಕ್ಕು ಇದೆ. ತಪಾಸಣೆಯಿಂದ ಸಾಂಕ್ರಾಮಿಕ ರೋಗಗಳು, ಸಾಂಕ್ರಾಮಿಕವಲ್ಲದ ರೋಗಗಳೂ ಪತ್ತೆಯಾಗುತ್ತವೆ. ಬಹಳ ಜನ ಆರೋಗ್ಯ ತಪಾಸಣೆಯನ್ನೇ ಮಾಡಿಸಿಕೊಂಡಿರುವುದಿಲ್ಲ. ಹೀಗಾಗಿ, ಮನೆ ಮನೆಗೆ ತೆರಳಿ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ನಡೆಸಿ ಉಚಿತ ಚಿಕಿತ್ಸೆ ನೀಡುವ ಮಹತ್ವದ ಕಾರ್ಯಕ್ರಮ ಆರಂಭಿಸಿದ್ದೇವೆ. ಮನೆ ಬಾಗಿಲಿಗೆ ಆರೋಗ್ಯ ಸವಲತ್ತು ಒದಗಿಸುವ ಗುರಿ ನಮ್ಮದು'' ಎಂದು ಸಿಎಂ ಹೇಳಿದರು.

''ಕ್ಯಾನ್ಸರ್ ಕೂಡ ಆರಂಭದಲ್ಲೇ ಪತ್ತೆಯಾದರೆ ಗುಣಪಡಿಸಲು ಸಾಧ್ಯವಿದೆ. ಸಕ್ಕರೆ ಕಾಯಿಲೆ, ರಕ್ತದೊತ್ತಡವನ್ನು ಯಶಸ್ವಿಯಾಗಿ ನಿಯಂತ್ರಿಸಬಹುದು. ವ್ಯಾಯಾಮವಿರದ ಜೀವನಶೈಲಿ ಮತ್ತು ಒತ್ತಡದ ಜೀವನದಿಂದಲೂ ಕಾಯಿಲೆಗಳು ಬರುತ್ತವೆ. ಈಗ ರಾಸಾಯನಿಕ ಬಳಸಿದ ಆಹಾರದ ಸೇವನೆ ಹೆಚ್ಚಾಗಿರುವುದರಿಂದಲೂ ಆರೋಗ್ಯ ಸಮಸ್ಯೆ ಹೆಚ್ಚುತ್ತಿದೆ'' ಎಂದರು.

''ಮೊಟ್ಟೆ, ಮೀನು, ಮಾಂಸ ತಿಂದರೆ ಡಯಾಬಿಟಿಸ್ ಬರುತ್ತದೆ, ಹೆಚ್ಚುತ್ತದೆ ಎನ್ನುವ ತಪ್ಪು ಕಲ್ಪನೆ ಇದೆ. ಹಾಗೇನೂ ಇಲ್ಲ. ಮೊಟ್ಟೆ ಮಾಂಸ ಬಿಟ್ಟು ಬರೀ ಅನ್ನ ತಿಂದರೆ ಹೇಗೆ? ಬ್ಯಾಲೆನ್ಸ್ ಆಹಾರ ಸೇವನೆ ಮುಖ್ಯ'' ಎಂದು ತಿಳಿಸಿದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್, ವಿಧಾನ ಪರಿಷತ್ ಸದಸ್ಯರಾದ ಸುಧಾಮ ದಾಸ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಆರೋಗ್ಯ ಇಲಾಖೆ ಪ್ರಧಾನ‌ ಕಾರ್ಯದರ್ಶಿ ಹರ್ಷಗುಪ್ತ ಸೇರಿ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಪ್ರಾಸಿಕ್ಯೂಷನ್​: ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ​ಮೇಲ್ಮನವಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.